“ವಿದ್ಯಾರ್ಥಿ ಜೀವನ ಸದುಪಯೋಗಿಸಿ: ಕಾಶೀ ಶ್ರೀ
ಶ್ರೀ ಭುವನೇಂದ್ರ ಕಾಲೇಜಿನ ವಜ್ರಮಹೋತ್ಸವ
Team Udayavani, Nov 29, 2019, 5:04 AM IST
ಕಾರ್ಕಳ: ವಿದ್ಯಾರ್ಥಿ ಎಂದರೆ ವಿದ್ಯೆಯನ್ನು ಅರ್ಜಿಸುವವನು ಎಂದರ್ಥ. ನಮ್ಮ ಬಾಳ್ವೆಯಲ್ಲಿ ಕಳೆಯುವ ಅತ್ಯಂತ ಸುಂದರ ಹಾಗೂ ಮಹತ್ವದ ದಿನಗಳೆಂದರೆ ಅದು ವಿದ್ಯಾರ್ಥಿ ಜೀವನ. ಹಾಗಾಗಿ ವಿದ್ಯಾರ್ಥಿ ಘಟ್ಟವನ್ನು ಉತ್ತಮ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶ್ರೀ ಸಂಸ್ಥಾನ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಹೇಳಿದರು.
ಅವರು ನ. 28ರಂದು ಶ್ರೀ ಭುವನೇಂದ್ರ ಕಾಲೇಜಿನ ವಜ್ರ ಮಹೋತ್ಸವ ವರ್ಷಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.
ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಸಂಬಂಧ ಬಹಳ ಅಮೂಲ್ಯವಾದುದು. ವಿದ್ಯಾರ್ಥಿಗಳಿಂದಲೇ ಕಾಲೇಜಿಗೆ ಹೆಸರು, ಕೀರ್ತಿ ಲಭಿಸುವುದು. ಆದರೆ, ಅದರ ಹಿಂದೆ ಅಧ್ಯಾಪಕರ ಪರಿಶ್ರಮವಿದೆ ಎಂದು ಸ್ವಾಮೀಜಿ ನುಡಿದರು.
ಭಕ್ತಿ ಗೌರವ ಭಾವನೆಯಿರಲಿ
ಅಧ್ಯಾಪಕನಾದವರಿಗೆ ವಿದ್ಯಾರ್ಥಿಗಳ ಕುರಿತು ಕಾಳಜಿಯಿರಬೇಕು. ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ಭಕ್ತಿ ಗೌರವದಿಂದ ಕಾಣಬೇಕು. ಹೀಗಿದ್ದಲ್ಲಿ ಗುರುಶಿಷ್ಯರ ಸಂಬಂಧ ಉತ್ತಮವಾಗಿರುವುದು ಎಂದು ಸಂಯಮೀಂದ್ರ ತೀರ್ಥ ಸ್ವಾಮೀಜಿ ಹೇಳಿದರು.
ಶಿಕ್ಷಣ ಪದ್ಧತಿಯಲ್ಲಿ ಬದಲಾವಣೆ
ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಇಂದಿನ ಶಿಕ್ಷಣ ಅಂಕ ಗಳಿಕೆಗೆ ಮಾತ್ರ ಒತ್ತು ನೀಡುತ್ತಿದೆಯೇ ಹೊರತು ಮೌಲ್ಯ ಹಾಗೂ ಸಂಸ್ಕಾರ ತುಂಬುವಲ್ಲಿ ಎಡವುತ್ತಿದೆ. ಪುಸ್ತಕ ಓದುವುದರ ಬದಲು ಮೊಬೈಲ್‌ನಲ್ಲಿ ಕಾಲ ಕಳೆಯುವಂತಾಗಿದೆ ಎಂದು ಸಂಯಮೀಂದ್ರ ತೀರ್ಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.
ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಶ್ರೀ ಭುವನೇಂದ್ರ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸಿ.ಎ. ಶಿವಾನಂದ ಪೈ ಸ್ವಾಗತಿಸಿ, ಉಪನ್ಯಾಸಕಿ ವನಿತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಅನಂತರ ಮಹಾಲಕ್ಷ್ಮೀ ಶೆಣೈ ಅವರ ಬಳಗದಿಂದ ಭಕ್ತಿ ಗಾಯನ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.