ಸ್ವಚ್ಛ , ನಿರ್ಮಲ ಪರಿಸರ ನಿರ್ಮಾಣಕ್ಕೆ ಅಭಿಯಾನ
Team Udayavani, Jul 3, 2018, 7:05 AM IST
ಉಡುಪಿ: ಸ್ವಚ್ಛ ಹಾಗೂ ನಿರ್ಮಲ ಪರಿಸರ ಅಭಿಯಾನದಲ್ಲಿ ಉಡುಪಿ ಧರ್ಮ ಪ್ರಾಂತ್ಯದ ಕೆಥೊಲಿಕ್ ಸಭಾ ಮತ್ತು ವಿವಿಧ ಸಮಾಜಮುಖ ಸಂಘಟನೆಗಳ ಸಹಕಾರದೊಂದಿಗೆ ಏಕಕಾಲದಲ್ಲಿ ಜಿಲ್ಲೆಯಾದ್ಯಂತ ಪರಿಸರ ಅಭಿಯಾನ ಕಾರ್ಯಕ್ರಮವನ್ನು ರವಿವಾರ ಆಯೋಜಿಸಿತು.
ಶಂಕರಪುರದ ಸಂತ ಜೋನ್ಸ್ ಚರ್ಚ್‌ನಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶದ ಆಧ್ಯಾತ್ಮಿಕ ನಿರ್ದೇಶಕ ರೆ| ಫರ್ಡಿನಾಂಡ್ ಗೊನ್ಸಾಲ್ವಿಸ್ ಗಿಡ ನೆಟ್ಟು ಬಳಿಕ ರಸ್ತೆ ಬದಿಯ ಕಸವನ್ನು ಆಯುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಉಡುಪಿ ಪ್ರದೇಶದ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್ ಮಾತನಾಡಿ, ಸ್ವಚ್ಛತೆಯ ಪರಿಪಾಠ ನಮ್ಮ ಹೃದಯದಿಂದ ಬಂದಾಗ ನಾನು ಅಭಿವೃದ್ಧಿ ಕಾಣಲು ಸಾಧ್ಯ. ಇತರ ದೇಶಗಳಿಗೆ ಹೋಲಿಸಿದರೆ ನಾವು ಭಾರತೀಯರು ಅವರಿಂದ ಸ್ವಚ್ಛತೆಯ ಬಗ್ಗೆ ಸಾಕಷ್ಟು ಕಲಿಯಲು ಇದೆ ಎಂದವರು ತಿಳಿಸಿದರು.
ರೋಟರಿ ಕ್ಲಬ್ ಶಂಕರಪುರ ಇದರ ಅಧ್ಯಕ್ಷ ಚಂದ್ರ ಪೂಜಾರಿ, ಕೆಥೊಲಿಕ್ ಸಭಾ ಪಾಂಗಾಳ ಘಟಕದ ಉಪಾಧ್ಯಕ್ಷ ವಿಕ್ಟರ್ ಮೆಂಡೊನ್ಸಾ, ರೋಟರಾಕ್ಟ್ ಕ್ಲಬ್ ಸುಭಾಸ್ ನಗರ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಐಸಿವೈಎಮ್ ಅಧ್ಯಕ್ಷ ಅÂರನ್ ಡಿಸೋಜಾ, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಮಾರ್ಕ್ ವಾಜ್ ಮತ್ತಿತರರು ಉಪಸ್ಥಿತರಿದ್ದರು.
ಅಭಿಯಾನದ ಪ್ರಯುಕ್ತ ಜಿಲ್ಲೆಯ 50 ಚರ್ಚುಗಳಲ್ಲಿ ಪರಿಸರ ರಕ್ಷಣೆ ಕುರಿತು ಮಾಹಿತಿ ಕಾರ್ಯಾಗಾರ, ಜಾಗೃತಿ ಶಿಬಿರ, ಸ್ವಚ್ಚತಾ ಕಾರ್ಯಕ್ರಮ, ಗಿಡಗಳ ವಿತರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.