ಎಸೆಸೆಲ್ಸಿ :ಕುಂದಾಪುರ “ಟಾರ್ಗೆಟ್- 95′; ಬೈಂದೂರು “ಟಾರ್ಗೆಟ್ -90
Team Udayavani, Jan 21, 2019, 12:50 AM IST
ಕುಂದಾಪುರ: ಎಸೆಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಸಜ್ಜಾಗುತ್ತಿದ್ದು, ಈ ನಿಟ್ಟಿನಲ್ಲಿ ವಲಯವಾರು ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಣ ಇಲಾಖೆ, ಶಿಕ್ಷಕರು ಕೂಡ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮುಂದಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಕುಂದಾಪುರ ವಲಯ ಶೇ.95 ಹಾಗೂ ಬೈಂದೂರು ವಲಯ ಶೇ.90ಕ್ಕಿಂತ ಹೆಚ್ಚಿನ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಮಾ. 21 ರಂದು ಎಸೆಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಎ. 9ರ ವರೆಗೆ ನಡೆಯಲಿದೆ. ಅವಿಭಜಿತ ಕುಂದಾಪುರ ತಾಲೂಕಿನ ಉಭಯ ವಲಯಗಳಾದ ಕುಂದಾಪುರ ಹಾಗೂ ಬೈಂದೂರಿನಲ್ಲಿ ಹಿಂದಿನ ಫಲಿತಾಂಶವನ್ನು ಮತ್ತಷ್ಟು ಹೆಚ್ಚಿಸಲು ಸತತ ಪ್ರಯತ್ನ ನಡೆಯುತ್ತಿದೆ.
ಕುಂದಾಪುರ: “ಟಾರ್ಗೆಟ್ -95′
ಕಳೆದ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿದರೆ, ಕುಂದಾಪುರ ವಲಯ ಶೇ.90.18 ಫಲಿತಾಂಶ ಪಡೆದು ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯದಲ್ಲಿ ಒಟ್ಟಾರೆ 13 ನೇ ಸ್ಥಾನ ಪಡೆದಿತ್ತು. ಇದನ್ನು ಹೆಚ್ಚಿಸಲು ಈ ಬಾರಿ “ಟಾರ್ಗೆಟ್ -95′ ಯೋಜನೆ ಹಾಕಿಕೊಂಡಿದೆ. ಕಳೆದ ಬಾರಿ “ಟಾರ್ಗೆಟ್ -90′ ಯೋಜನೆ ಹಾಕಿಕೊಂಡ ಕುಂದಾಪುರ ಅದರಲ್ಲಿ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ.
ಕುಂದಾಪುರ ವಲಯದಲ್ಲಿ 20 ಸರಕಾರಿ, 12 ಅನುದಾನ ರಹಿತ ಹಾಗೂ 8 ಅನುದಾನಿತ ಸೇರಿದಂತೆ ಒಟ್ಟು 40 ಪ್ರೌಢಶಾಲೆಗಳಿದ್ದು, ಸುಮಾರು 2,300 ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಬಾರಿ ಎಸೆಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ.
ಬೈಂದೂರು : “ಟಾರ್ಗೆಟ್-90′
ಬೈಂದೂರು ಕಳೆದ ಬಾರಿ ಜಿಲ್ಲೆಯಲ್ಲಿ ವಲಯವಾರು ಫಲಿತಾಂಶದಲ್ಲಿ 5 ನೇ ಸ್ಥಾನ ಪಡೆದಿದ್ದರೂ, ಒಟ್ಟಾರೆ ಫಲಿತಾಂಶವನ್ನು ಹೆಚ್ಚಿಸಿಕೊಂಡಿತ್ತು. ಕಳೆದ ಬಾರಿ ಶೇ. 85.09 ಫಲಿತಾಂಶ ಗಳಿಸಿದ್ದು, ಈ ಬಾರಿ “ಟಾರ್ಗೆಟ್-90′ ಯೋಜನೆಯೊಂದಿಗೆ ಅನೇಕ ಕ್ರಮಗಳನ್ನು ಕೈಗೊಂಡಿದೆ. ಬೈಂದೂರು ವಲಯದಲ್ಲಿ 16 ಸರಕಾರಿ, 5 ಅನುದಾನಿತ ಹಾಗೂ 11 ಅನುದಾನ ರಹಿತ ಸೇರಿ ಒಟ್ಟು 32 ಪ್ರೌಢಶಾಲೆಗಳಿದ್ದು, ಸುಮಾರು 2,100 ಕ್ಕೂ ಅಧಿಕ ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ.
ಫಲಿತಾಂಶ ಹೆಚ್ಚಳಕ್ಕೆ ಕೈಗೊಂಡ ಕ್ರಮಗಳು
ಹಿಂದಿನ ಫಲಿತಾಂಶವನ್ನು ಉಳಿಸಿಕೊಂಡು, ಮತ್ತಷ್ಟು ಹೆಚ್ಚಿಸುವ ಕುರಿತಂತೆ ಅನೇಕ ಪೂರ್ವ ತಯಾರಿಗಳನ್ನು ಮಾಡುತ್ತಿದೆ. ಈ ಕುರಿತು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಾಮತ್ ಹಾಗೂ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಒ.ಆರ್. ಪ್ರಕಾಶ್ ಫಲಿತಾಂಶ ಹೆಚ್ಚಿಸಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದ್ದಾರೆ.
1. ಡಿಸ್ಟಿಂಕ್ಷನ್ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ತಲಾ 4 ಶಾಲೆಗಳಂತೆ ವಿಶೇಷ ಪ್ರೇರಣಾ ಶಿಬಿರ.
2. ಪ್ರತೀ ಶಾಲೆಯಲ್ಲಿಯೂ ಹೆತ್ತವರ ಸಭೆ ನಡೆಸಿ, ಸಂಪನ್ಮೂಲ ವ್ಯಕ್ತಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಉಪನ್ಯಾಸ.
3. ಸಂಜೆ ಹೆಚ್ಚುವರಿಯಾಗಿ ವಿಶೇಷ ತರಗತಿಗಳನ್ನು, ಸಮೂಹ ಅಧ್ಯಯನ, ವಿಷಯವಾರು ಶಿಕ್ಷಕರಿಗೆ ಪ್ರತ್ಯೇಕ ಕಾರ್ಯಾಗಾರ.
4. ಈ ಬಾರಿ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಹೊಸ ಪಠ್ಯ ಕ್ರಮವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ 6 ವಿಷಯಗಳದ್ದೂ ಕೂಡ ಪ್ರಶ್ನೆಪ್ರತ್ರಿಕೆ ಕಾರ್ಯಾಗಾರ.
5. 3 ಬಾರಿ ಮುಖ್ಯ ಶಿಕ್ಷಕರ ಸಭೆ ನಡೆಸಲಾಗಿದ್ದು, ಶಾಲೆ ಫಲಿತಾಂಶ ಹೆಚ್ಚಿಸಲು ಸೂಕ್ತ ಸಲಹೆ ನೀಡಲಾಗಿದೆ.
6. ಕಳೆದ ಬಾರಿ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ಹೆಚ್ಚಿನ ಒತ್ತು, ಫಲಿತಾಂಶ ಹೆಚ್ಚಳಕ್ಕೆ ಪ್ರಯತ್ನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.