ಮುಂಗಾರು ಪ್ರವೇಶಿಸಿದರೂ ತೋಡುಗಳ ಹೂಳೆತ್ತಲಿಲ್ಲ !

Team Udayavani, Jun 11, 2018, 6:15 AM IST

0706tke2.jpg

ತೆಕ್ಕಟ್ಟೆ: ಮುಂಗಾರು ಆಗಮನ ಇನ್ನೇನು ಶುರು ಎಂದರೂ ತೆಕ್ಕಟ್ಟೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಮಳೆಗಾಲದ ಸಿದ್ಧತೆ ಮಾತ್ರ ನಡೆದೇ ಇಲ್ಲ. 

ರಾ.ಹೆ.66 ಚತುಷ್ಪಥ ಕಾಮಗಾರಿ ಪೂರ್ಣಗೊಂಡಿದೆ ಆದರೂ ಕೂಡಾ ಮಳೆ ನೀರು ಹರಿದು ಹೋಗಲು ಸಮರ್ಪಕವಾದ ಒಳ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂಧ ನೀರು ಪ್ರಮುಖ ರಸ್ತೆಗೆ, ತಾತ್ಕಾಲಿಕ ಬಸ್‌ ತಂಗುದಾಣ ಹಾಗೂ ಕೃಷಿ ಭೂಮಿಗಳಿಗೆ ನುಗ್ಗುವ ಸಾಧ್ಯತೆಗಳಿವೆ.

ಎಲ್ಲೆಲ್ಲಿ ಸಮಸ್ಯೆ? 
ಹೆದ್ದಾರಿಯ ಬಳಿಯ ಗ್ರಾ.ಪಂ. ಬಳಿ ಭಾರಿ ಪ್ರಮಾಣದಲ್ಲಿ ಹರಿದು ಬರುವ ಮಳೆ ನೀರು ನೇರವಾಗಿ ಬಂದು ತೆಕ್ಕಟ್ಟೆ ಪ್ರಮುಖ ಭಾಗದಲ್ಲಿರುವ ಬಸ್‌ ತಂಗುದಾಣವನ್ನು ಆವರಿಸುತ್ತಿದೆ. ಮಲ್ಯಾಡಿ ಒಳ ರಸ್ತೆಗೆ ಅಳವಡಿಸಿರುವ ಸಿಮೆಂಟ್‌ ಪೈಪ್‌ಗ್ಳು ಕಿರಿದಾಗಿದ್ದು ಹೂಳು ತುಂಬಿಕೊಂಡಿದೆ. ಪರಿಣಾಮ ವಾಗಿ ಚರಂಡಿ ನೀರು ರಸ್ತೆಯ ಮೇಲೆ ಹರಿಯುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ತೆಕ್ಕಟ್ಟೆ ಕೊಮೆ ಇತ್ತೀಚೆಗಷ್ಟೆ ಕಾಂಕ್ರಿಟ್‌ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಹೆದ್ದಾರಿಯಿಂದ ಸುಮಾರು 300 ಮೀ. ಒಳಗೆ ಎರಡೂ ಬದಿ ಒಳ ಚರಂಡಿ ನಿರ್ಮಿಸಲಾಗಿದೆಯಾದರೂ ಕೃಷಿ ಭೂಮಿಗಳು ಇರುವ ಭಾಗದಲ್ಲಿ ಈ ಕಾರ್ಯ ಆಗಿಲ್ಲ. ಪರಿಣಾಮ ಹೆದ್ದಾರಿಯಿಂದ ಬಂದ ನೀರು ಕೃಷಿ ಭೂಮಿಗೆ ನುಗ್ಗುವ ಸಾಧ್ಯತೆ ಇದೆ.  

ಕೃತಕ ನೆರೆಯ ಭೀತಿ 
ಗ್ರಾಮದ ಪ್ರಮುಖ ಭಾಗದಲ್ಲಿ ರುವ ಅಂಗಡಿ ಮುಂಗಟ್ಟು ಗಳ ಎದುರು ಮಳೆಗಾಲದಲ್ಲಿ ಸರಾಗವಾಗಿ ನೀರು ಹರಿದು ಹೋಗಲು ಅವಕಾಶವಿಲ್ಲ. ಇದರಿಂದ ಕೃತಕ ನೆರೆ ಸೃಷ್ಟಿಯಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೂ ನಡೆದಾಡಲು ಸಾಧ್ಯವಾಗದೇ ಹೆದ್ದಾರಿಯಲ್ಲೇ ನಡೆಯಬೇಕಾದ ಕಷ್ಟವಿದೆ. 

ಸಮಸ್ಯೆ ಬಗ್ಗೆ ಗಮನಹರಿಸಲು ಸೂಚನೆ  
ಮುಂಗಾರು ಆರಂಭದ ಪೂರ್ವದಲ್ಲಿಯೇ ಗ್ರಾ.ಪಂ. ವ್ಯಾಪ್ತಿಯಲ್ಲಿ  ಬೆಳೆದು ನಿಂತ ಗಿಡಗಂಟಿಗಳ ತೆರವು ಕಾರ್ಯ ಹಾಗೂ ಒಳ ಚರಂಡಿ ಸಮಸ್ಯೆಗಳಿರುವ ಕಡೆ ಗಮನಹರಸಿ ಪರಿಹಾರ ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ.
– ವೀರಶೇಖರ್‌, ತೆಕ್ಕಟ್ಟೆ  ಪಿಡಿಒ

ಕ್ರಮ ಅಗತ್ಯ
ಗ್ರಾ.ಪಂ.ವ್ಯಾಪ್ತಿಯಲ್ಲಿ  ಮಳೆಗಾಲದ ಸಿದ್ಧತೆ ಇನ್ನೂ ಆರಂಭಗೊಂಡಿಲ್ಲ .ರಾ.ಹೆ.66 ರಿಂದ ಬರುವ ಅಪಾರ ಪ್ರಮಾಣದ ನೀರು ಕೃಷಿ ಭೂಮಿಯನ್ನು ಆವರಿಸುವ ಸಾಧ್ಯತೆ ಇದೆ.  ತೋಡುಗಳ ಹೂಳೆತ್ತುವ ಬಗ್ಗೆ ಸಂಬಂಧಪಟ್ಟ ಸ್ಥಳೀಯಾಡಳಿತ ಕ್ರಮ ಕೈಗೊಳ್ಳಬೇಕಾಗಿದೆ.
– ವಿಟಲ್‌ ದೇವಾಡಿಗ, ತೆಕ್ಕಟ್ಟೆ  ಕೃಷಿಕರು.

– ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.