ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಸಿ ರಹಿತ ದಿನ: ಡಿಸಿ

Team Udayavani, Jun 7, 2019, 6:10 AM IST

dc

ಉಡುಪಿ: ಪರಿಸರ ರಕ್ಷಣೆ ಹಾಗೂ ಜಾಗತಿಕ ಪರಿಸರ ತಾಪಮಾನವನ್ನು ತಗ್ಗಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎÇÉ ಸರಕಾರಿ ಕಚೇರಿಗಳ ಎಸಿಗಳನ್ನು ಆಫ್ ಮಾಡಿ ಕಾರ್ಯ ನಿರ್ವಹಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಅವರು ಗುರುವಾರ ಹೋದ ವಾರದಂತೆ ಈ ವಾರವೂ ಸಮೂಹ ಸಾರಿಗೆಯಲ್ಲಿ ಕಚೇರಿಗೆ ತೆರಳುವಾಗ ಈ ವಿಷಯದ ಬಗ್ಗೆ ತಿಳಿಸಿದರು.

ವಿಶ್ವ ಪರಿಸರ ದಿನದ ಅಂಗವಾಗಿ ಈ ವರ್ಷದ ಘೋಷವಾಕ್ಯ ವಾಯು ಮಾಲಿನ್ಯ ನಿಯಂತ್ರಣ ಕುರಿತಾಗಿದೆ. ಇದನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವ ಕುರಿತಂತೆ ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಪ್ರತಿ ಸೋಮವಾರ ಎÇÉ ಸರಕಾರಿ ಕಚೇರಿಗಳಲ್ಲಿ ಎಸಿ ಬಳಕೆ ಮಾಡದೆ ಕಾರ್ಯ ನಿರ್ವಹಿಸಲು ಎÇÉ ಅಧಿಕಾರಿಗಳು ಒಮ್ಮತ ಸೂಚಿಸಿದ್ದಾರೆ. ವಿದ್ಯುತ್‌ ಉಳಿತಾಯದ ಜತೆಗೆ ಪರಿಸರದಲ್ಲಿ ಜಾಗತಿಕ ತಾಪಮಾನ ಕಡಿಮೆ ಮಾಡಲು ಜಿಲ್ಲಾಡಳಿತದಿಂದ ಸಾಧ್ಯವಾದ ಪ್ರಯತ್ನ ಮಾಡಲಾಗುತ್ತಿದೆ ಎಂದು ಡಿಸಿ ಹೇಳಿದರು.

ಸಮೂಹ ಸಾರಿಗೆ ಬಳಕೆಗೆ ಕರೆ
ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಉದ್ದೇಶದಿಂದ ಈಗಾಗಲೇ ಪ್ರತಿ ಗುರುವಾರ ಕಚೇರಿಗೆ ಸಮೂಹ ಸಾರಿಗೆಯಲ್ಲಿ ವಿವಿಧ ಅಧಿಕಾರಿಗಳು ಮತ್ತು ಸಿಬಂದಿಯೊಂದಿಗೆ ಪ್ರಯಾಣಿಸುವುದರ ಮೂಲಕ ವಾಯು ಮಾಲಿನ್ಯ ನಿಯಂತ್ರಣಕ್ಕೆ ಸಾಧ್ಯವಾದಷ್ಟು ಕೊಡುಗೆ ನೀಡಲು ನಿರ್ಧರಿಸಲಾಗಿದೆ. ಇದೇ ಮಾದರಿಯಲ್ಲಿ ಜಿಲ್ಲೆಯ ವಿವಿಧ ಖಾಸಗಿ ಸಂಸ್ಥೆಗಳು, ಬ್ಯಾಂಕ್‌ಗಳು, ಕಾರ್ಪೊàರೇಟ್‌ ಸಂಸ್ಥೆಗಳು ತಮ್ಮ ಸಿಬಂದಿಗಳಿಗೆ ವಾರದಲ್ಲಿ ಒಂದು ದಿನ ಸಮೂಹ ಸಾರಿಗೆ ವ್ಯವಸ್ಥೆ ಕಲ್ಪಿಸುವುದರ ಮೂಲಕ ಪರಿಸರ ಸಂರಕ್ಷಣೆ ತಮ್ಮದೆ ಆದ ಕೊಡುಗೆ ನೀಡಬಹುದು ಎಂದು ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದರು.

ಪರಿಸರ ಸಂರಕ್ಷಣೆ ಉದ್ದೇಶದಿಂದ ಜಿಲ್ಲಾಡಳಿತ ಕೈಗೊಂಡಿರುವ ವಿವಿಧ ರೀತಿಯ ಕ್ರಮಗಳನ್ನು ದಿನನಿತ್ಯದ ಸರಕಾರಿ ಕರ್ತವ್ಯಕ್ಕೆ ಯಾವುದೇ ಅಡಚಣೆಯಾಗದಂತೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಡಿಸಿ ಹೇಳಿದರು.
ಸಮೂಹ ಸಾರಿಗೆಯಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್‌ ನಾಯಕ್‌ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.