“ರಾಷ್ಟ್ರ ನಿರ್ಮಾಣದಲ್ಲಿ ಎಲ್ಲರೂ ಕೈ ಜೋಡಿಸಿ’
Team Udayavani, Mar 18, 2017, 5:03 PM IST
ಕುಂದಾಪುರ: ಭಾರತೀಯ ಸಂಸ್ಕೃತಿ ಸಂಸ್ಕಾರವನ್ನು ಉಳಿಸಲು ಮಾತೆಯರು ಮುಂದಾಗಬೇಕು. ಹೆಣ್ಣು ಮಕ್ಕಳಿಗೆ ಬಾಲ್ಯದಲ್ಲಿ ನಮ್ಮ ಹಿಂದೂ ಸಂಸ್ಕೃತಿ, ಆಚಾರ ವಿಚಾರಗಳನ್ನು ಮನದಟ್ಟು ಮಾಡಬೇಕು. ಬಲಿಷ್ಠ ಹಿಂದೂ ಸಮಾಜ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಎಲ್ಲರೂ ಕೈ ಜೋಡಿಸಬೇಕು. ದೇಶದ ಭದ್ರತೆ ಹಾಗೂ ಭಯೋತ್ಪಾದನೆ ವಿಚಾರದಲ್ಲಿ ಎಲ್ಲರೂ ಜಾತಿ ಮತಭೇದ ಮರೆತು ದೇಶವನ್ನು ಕಾಪಾಡಲು ಒಂದಾಗಬೇಕು ಎಂದು ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆ ಸಂಚಾಲಕ ಅರವಿಂದ ಕೋಟೇಶ್ವರ ಹೇಳಿದರು.
ಅವರು ಗಂಗೊಳ್ಳಿಯ ಸ್ಫೂಧಿರ್ತಿ ಮಹಿಳಾ ಘಟಕದ ಆಶ್ರಯದಲ್ಲಿ ಗಂಗೊಳ್ಳಿ ದೊಡ್ಡಹಿತ್ಲು ವಠಾರದಲ್ಲಿ ಜರಗಿದ ಸಂದೀಪ್ ಉನ್ನಿಕೃಷ್ಣನ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.
ನಮ್ಮ ದೇಶದಲ್ಲಿ ನಾವು ಸುರಕ್ಷಿತವಾಗಿರಬೇಕಿದ್ದರೆ ನಮ್ಮ ದೇಶದ ಗಡಿಯನ್ನು ಕಾಯುತ್ತಿ ರುವ ಯೋಧರು ಮುಖ್ಯ ಕಾರಣ. ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ದೇಶ ಸೇವೆಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ ಎಂದರು.
ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆ ಸಹಸಂಚಾಲಕ ವಾಸು ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಗಂಗೊಳ್ಳಿಯ ಉದ್ಯಮಿ ಎಂ.ಜಿ. ರಾಘವೇಂದ್ರ ಭಂಡಾರ್‌ಕಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೋಹನ ಖಾರ್ವಿ ಶುಭ ಹಾರೈಸಿದರು. ಸ್ಫೂರ್ತಿ ಮಹಿಳಾ ಘಟಕದ ಅಧ್ಯಕ್ಷೆ ಅರ್ಚನಾ ಉಪಸ್ಥಿತರಿದ್ದರು. ದೀಕ್ಷಿತಾ ಸ್ವಾಗತಿಸಿ, ನಿರೂಷಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.