ಕೊರೊನಾ ನಿಯಂತ್ರಣಕ್ಕೆ ತಜ್ಞರ ಸಲಹೆ ಪಾಲನೆ; ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ
Team Udayavani, Nov 10, 2020, 12:31 AM IST
ಸಾಂದರ್ಭಿಕ ಚಿತ್ರ
ಉಡುಪಿ: ಜಿಲ್ಲೆಯಲ್ಲಿ 2ನೇ ಹಂತದ ಕೋವಿಡ್ ಹರಡದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು, ತಜ್ಞರ ಸಮಿತಿ ನೀಡುವಂತಹ ಸಲಹೆಗಳನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಕರೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಗಳು ಗಣನೀ ಯವಾಗಿ ಕಡಿಮೆ ಯಾಗು ವುದರ ಜತೆಗೆ ಮರಣ ಪ್ರಮಾಣವು ಸಹ ಇಡೀ ರಾಜ್ಯದಲ್ಲೇ ಅತ್ಯಂತ ಕಡಿಮೆಯಾಗಿದೆ. ಸಾರ್ವಜನಿಕರು ಇದರಿಂದ ಮೈ ಮರೆಯದೆ ತಜ್ಞರು ಈಗಾಗಲೇ ಸಲಹೆ ನೀಡಿರುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ತಪ್ಪದೇ ಮಾಸ್ಕ್ ಧರಿಸುವುದರೊಂದಿಗೆ ಸಾಮಾಜಿಕ ಅಂತರ ಸೇರಿದಂತೆ ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದರು.
ವೈದ್ಯರಿಗೆ ಅಭಿನಂದನೆ
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರಕಾರಿ ಮತ್ತು ಖಾಸಗಿ ವೈದ್ಯರು ಉತ್ತಮವಾಗಿ ಸೇವೆ ಸಲ್ಲಿಸಿದ್ದು, ಇದಕ್ಕಾಗಿ ಅವರಿಗೆ ಜಿಲ್ಲಾಡಳಿತದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಜಿಲ್ಲಾಧಿಕಾರಿ, ಮುಂದಿನ ದಿನಗಳಲ್ಲಿ ಇನ್ನೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವುದರೊಂದಿಗೆ ಜಿಲ್ಲೆಯನ್ನು ಕೋವಿಡ್ ಮುಕ್ತವಾಗಿಸಬೇಕು ಎಂದರು.
ಡಿಎಚ್‌ಒ ಡಾ| ಸುಧೀರ್ ಚಂದ್ರ ಸೂಡ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ| ಪ್ರಶಾಂತ ಭಟ್, ಡಾ| ಪ್ರೇಮಾನಂದ್ ಹಾಗೂ ತಜ್ಞರ ಸಮಿತಿಯ ವೈದ್ಯರು ಉಪಸ್ಥಿತರಿದ್ದರು.
ಹೊರರಾಜ್ಯ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ
ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳು ತೆರೆಯಲಿದ್ದು, ಜಿಲ್ಲೆಗೆ ಹೊರರಾಜ್ಯಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಬೇಕು. ಯಾವುದೇ ಸಭೆ ಸಮಾರಂಭಗಳಲ್ಲಿ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಜನ ಸೇರದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಈ ಬಗ್ಗೆ ಪರಿಶೀಲಿಸಲು ಅಧಿಕಾರಿಯೊಬ್ಬರನ್ನು ನಿಯೋಜಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ತೀವ್ರತರ ಕಾಯಿಲೆಗಳಿಗೆ ದಾಖಲಾಗುವ ರೋಗಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು
ಜಿಲ್ಲಾಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.