ಉಡುಪಿ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ
Team Udayavani, Apr 11, 2021, 3:57 PM IST
ಉಡುಪಿ: ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಹೆಸರಿನಲ್ಲಿ ಯಾರೋ ಖದೀಮರು ನಕಲಿ ಫೇಸ್‌ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.
ಜಿಲ್ಲಾಧಿಕಾರಿಕಾರಿಗಳ ವೈಯಕ್ತಿಕ ಫೇಸ್‌ಬುಕ್ ಖಾತೆಯಾಗಿರುವ ಜಿ. ಜಗದೀಶ್ ಮಲಲಗದ್ದೆ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಹಲವು ಮಂದಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗಿದೆ. ಬಹುತೇಕ ಮಂದಿ ಇವರ ನಕಲಿ ಖಾತೆಯಲ್ಲಿ ಫ್ರೆಂಡ್ಸ್ ಆಗಿದ್ದಾರೆ.
ಈ ನಕಲಿ ಖಾತೆಯಲ್ಲಿ ಫ್ರೆಂಡ್ಸ್ ಆಗಿರುವವರಿಗೆ ಕಿಡಿಗೇಡಿಗಳು ಸಂದೇಶ ಕಳುಹಿಸಿ ತುರ್ತು ಹಣ ಕಳುಹಿಸುವಂತೆ ಮನವಿ ಮಾಡುತ್ತಿದ್ದಾರೆ. ಇದರಿಂದ ಅನುಮಾನಗೊಂಡ ಕೆಲವರು ಈ ಬಗ್ಗೆ ಜಿÇÉಾಧಿಕಾರಿಯ ಗಮನಕ್ಕೆ ತಂದಿದ್ದಾರೆ. ಆಗ ಇದೊಂದು ನಕಲಿ ಖಾತೆ ಎಂಬುವುದು ಗೊತ್ತಾಗಿದೆ.
ಈ ಬಗ್ಗೆ ಮಾಹಿತಿ ತಿಳಿದ ಜಿಲ್ಲಾಧಿಕಾರಿಕಾರಿ ಜಿ.ಜಗದೀಶ್ ಅವರು ತನ್ನ ಫೇಸ್‌ಬುಕ್‌ನಲ್ಲಿ ಈ ನಕಲಿ ಖಾತೆ ಹಾಗೂ ಫ್ರೆಂಡ್ಸ್‌ಗಳಿಗೆ ಕಳುಹಿಸಿರುವ ಸಂದೇಶದ ಸ್ಕ್ರೀನ್‌ಶಾಟ್‌ಗಳನ್ನು ಹಾಕಿ, ನನ್ನ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿ ಮಾಡಿದ್ದಾರೆ. ಇದರ ಬಗ್ಗೆ ನಾನು ದೂರು ನೀಡಿದ್ದೇನೆ. ಯಾರು ಹಣ ಹಾಕಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.