Udupi ಡಿಸಿ ಹೆಸರಲ್ಲಿ ನಕಲಿ ವಾಟ್ಸ್ ಆ್ಯಪ್ ಖಾತೆ
Team Udayavani, Nov 21, 2023, 8:22 PM IST
ಉಡುಪಿ: ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಹೆಸರಿನಲ್ಲಿ ನಕಲಿ ವಾಟ್ಸ್ ಆ್ಯಪ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಸಂದೇಶ ಕಳುಹಿಸುತ್ತಿರುವ ಕುರಿತು ಜಿಲ್ಲಾಧಿಕಾರಿಗಳು ಉಡುಪಿ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯಲ್ಲಿ ಜಿಲ್ಲಾಧಿಕಾರಿ ಬರೆದುಕೊಂಡಿದ್ದು ಜಾಲತಾಣಗಳನ್ನು ಬಳಸಿಕೊಂಡು, ನಕಲಿ ಖಾತೆಗಳನ್ನು ಸೃಜಿಸಿ ಹಣ ಕೇಳುತ್ತಿರುವ ಘಟನೆಗಳು ನಡೆಯುತ್ತಿವೆ. Dr K VidyaKumari IAS,DC ಎಂದು Whatsapp ನಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿ ಸಂದೇಶಗಳನ್ನು ಕಳುಹಿಸುತ್ತಿರುವುದು ಹಾಗೂ ಹಣ ಕೇಳುತ್ತಿರುವ ವಿಚಾರವು ಗಮನಕ್ಕೆ ಬಂದಿರುತ್ತದೆ.
ಈ ಬಗ್ಗೆ ಎಚ್ಚರದಿಂದ ಇರುವಂತೆ ತಿಳಿಸಿರುವ ಅವರು ತತ್‌ಕ್ಷಣ ಅಗತ್ಯ ಮಾಹಿತಿಯೊಂದಿಗೆ ಸ್ಥಳೀಯ ಠಾಣಾಧಿಕಾರಿಯವರಿಗೆ ದೂರು ನೀಡುವಂತೆ ಕೋರಿದ್ದಾರೆ.
ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು “ದುಷ್ಕರ್ಮಿಗಳು ತನ್ನ ಹೆಸರನ್ನು ಬಳಸಿದ್ದು, ಆದರೆ ಅದರಲ್ಲಿ ಇರುವ ಮೊಬೈಲ್ ಸಂಖ್ಯೆ ನನ್ನದಲ್ಲ. ಅದೇ ರೀತಿ ನನ್ನ ಖಾತೆಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಫೋಟೋವನ್ನು ಬಳಸಿಕೊಳ್ಳಲಾಗಿದೆ. ದುಷ್ಕರ್ಮಿಗಳು ಹಣ ಕಳುಹಿಸುವಂತೆ ಕೆಲವು ತಹಶೀಲ್ದಾರ್‌ಗಳಿಗೆ ಸಂದೇಶ ಕಳುಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.