ಗೋಳಿಯಂಗಡಿ: ಬಾವಿಗೆ ಬಿದ್ದು ಸಾವು
Team Udayavani, Jun 2, 2019, 11:56 AM IST
ಸಿದ್ದಾಪುರ: ಖಾಸಗಿ ಬಾವಿಯನ್ನು ಸ್ವತ್ಛಗೊಳಿಸಲು ಇಳಿಯುತ್ತಿದ್ದಾಗ ಕಾಲು ಜಾರಿ ಬಿದ್ದು ಹಿಲಿಯಾಣ ಗ್ರಾಮದ ಕಾರಿಕೊಡ್ಲು ನಿವಾಸಿ ಪುಟ್ಟಯ್ಯ ನಾಯ್ಕ (48) ಅವರು ಸಾವನಪ್ಪಿದ ಘಟನೆ ಗೋಳಿಯಂಗಡಿಯಲ್ಲಿ ಜೂ. 1ರಂದು ಸಂಭವಿಸಿದೆ.
ದುರಂತ ಸಂಭವಿಸಿದ ಕೂಡಲೆ ಕುಂದಾಪುರ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾ ಗಿದ್ದು, ಅವರು ಆಗಮಿಸಿ ಪುಟ್ಟಯ್ಯ ನಾಯ್ಕರನ್ನು ಮೇಲಕ್ಕೆ ಎತ್ತಿದರು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದರು. ಬೆಳ್ವೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಪುಟ್ಟಯ್ಯ ನಾಯ್ಕ ಅವರದ್ದು ಬಡ ಕುಟುಂಬವಾಗಿದ್ದು, ಬಾವಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಅವರು ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.