ಸುಳ್ಳು ಆಪಾದನೆ ಶಿಕ್ಷಾರ್ಹ ಅಪರಾಧ: ಉಡುಪಿ ಡಿಸಿ 


Team Udayavani, Apr 12, 2018, 10:52 AM IST

udupi-dc.jpg

ಉಡುಪಿ: ಈ ಬಾರಿಯ ಚುನಾವಣೆಯಲ್ಲಿ ಮತಯಂತ್ರದ ಜತೆಯಲ್ಲಿ ಬಳಸಲಾಗುವ ವಿವಿ ಪ್ಯಾಟ್‌ ಯಂತ್ರವು ನಮ್ಮ ಮತದಾನದ ಹಕ್ಕಿನ ಖಾತರಿಗೆ ಪೂರಕವಾಗಿದ್ದು, ವಿಶ್ವಾಸಾರ್ಹ ಮತದಾನ ಸಾಧ್ಯವಿದೆ. ವಿವಿ ಪ್ಯಾಟ್‌ ವಿರುದ್ಧ ಸುಳ್ಳು ಆಪಾದನೆ ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಹೇಳಿದರು.

ಸೋಮವಾರ ಉಡುಪಿ ವಕೀಲರ ಸಂಘದಲ್ಲಿ ಏರ್ಪಡಿಸಿದ್ದ ವಿವಿ ಪ್ಯಾಟ್‌ ಕುರಿತ ಪ್ರಾತ್ಯಕ್ಷಿಕೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಗೆ ಬಂದಿರುವ 1,400 ಇವಿಎಂ ಗಳನ್ನು ಎಲ್ಲ ಪಕ್ಷಗಳ ಪ್ರತಿನಿಧಿಗಳ ಸಮ್ಮುಖ ಪರಿಶೀಲಿಸಲಾಗಿದೆ. ಇವಿಎಂ ಗಳು ದೋಷರಹಿತ. ಚುನಾವಣೆ ದಿನ ಮತದಾನ ಆರಂಭಕ್ಕೆ ಮುನ್ನ ಮತಗಟ್ಟೆಯಲ್ಲಿರುವ ರಾಜಕೀಯ ಪಕ್ಷಗಳ ಏಜೆಂಟರ ಸಮ್ಮುಖದಲ್ಲಿ ಅಣುಕು ಮತದಾನ ಮಾಡಿ ಮತ್ತೆ ಪರಿಶೀಲನೆ ಮಾಡಲಾಗುವುದು. ಯಾವುದೇ ಮತಗಟ್ಟೆಯ ಮತಯಂತ್ರ ದಲ್ಲಿ ದೋಷ ಕಂಡುಬಂದರೆ ಕೂಡಲೇ ಬದಲಿ ಮತಯಂತ್ರ ವ್ಯವಸ್ಥೆ ಮಾಡಲಾಗುತ್ತದೆ. ಮತಯಂತ್ರವನ್ನು ಯಾವುದೇ ವಿಧದಲ್ಲಿ ಹ್ಯಾಕ್‌ ಮಾಡಲು ಸಾಧ್ಯವಿಲ್ಲ. ಇವು ಸಂಪೂರ್ಣ ಸುರಕ್ಷಿತ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸುಳ್ಳು ಹೇಳಿದರೆ ಕಾನೂನು ಕ್ರಮ
ಮತಯಂತ್ರಗಳು ಶೇ. 100 ಸರಿ ಇದೆ ಎಂದು ಖಾತರಿಯಾದ ಅನಂತರವೇ ಅಳವಡಿಸ ಲಾಗುತ್ತದೆ. ಮತದಾನದ ಅನಂತರ ವಿವಿ ಪ್ಯಾಟ್‌ ಯಂತ್ರದಲ್ಲಿ ತನ್ನ ಮತ ತಪ್ಪಾಗಿ ಚಲಾವಣೆ ಯಾಗಿದೆ ಎಂದು ಯಾರಾದರೂ ಆಕ್ಷೇಪಿಸಿದರೆ ಅಂತಹ ವ್ಯಕ್ತಿಯಿಂದ ಡಿಕ್ಲರೇಷನ್‌ ಪಡೆದು ಮತ್ತೂಮ್ಮೆ ಮತದಾನ (ಟೆಸ್ಟ್‌ ವೋಟ್‌) ಮಾಡಿಸಲಾಗುವುದು. ಆರೋಪ ಸುಳ್ಳಾಗಿದ್ದಲ್ಲಿ ದೂರುದಾರರನ್ನು ಡಿಕ್ಲರೇಷನ್‌ ಪ್ರಕಾರ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು ಎಂದು ಡಿಸಿ ಹೇಳಿದರು.

ಪ್ರಥಮ ಸ್ಥಾನ: ನ್ಯಾಯಾಧೀಶರ ಭರವಸೆ
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಟಿ. ವೆಂಕಟೇಶ್‌ ನಾಯ್ಕ ಮಾತನಾಡಿ, ಉಡುಪಿ ಜಿಲ್ಲೆ ಎಲ್ಲ ಕ್ಷೇತ್ರಗಳಲ್ಲಿ ರಾಜ್ಯದಲ್ಲಿಯೇ ಮುಂಚೂಣಿ ಯಲ್ಲಿದೆ. ಈ ಬಾರಿ ಮತದಾನ ಪ್ರಮಾಣದಲ್ಲೂ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆಯಬೇಕು. ಈ ನಿಟ್ಟಿನಲ್ಲಿ ಮೇ 12ರಂದು ನಡೆಯುವ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೆ ಮತದಾನ ಮಾಡಬೇಕು ಹಾಗೂ ಇತರರನ್ನು ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶೆ ಲತಾ, ಅಪರ ಜಿಲ್ಲಾಧಿಕಾರಿ ಅನುರಾಧಾ ಜಿ., ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಮಾಸ್ಟರ್‌ ಟ್ರೈನರ್‌ ಪ್ರಕಾಶ್‌ ಅವರು ಯಂತ್ರಗಳ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ಟಾಪ್ ನ್ಯೂಸ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

8

Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.