ಕಾದಿರುವರು ರೈತರು ವಾರಾಹಿ ನೀರು ಬರುವುದೆಂದು

ಮಾಸಾಂತ್ಯದಲ್ಲಿ ಕಾಲುವೆಯಲ್ಲಿ ನೀರು ; 40 ವರ್ಷ ಪೂರೈಸಿದ ಯೋಜನೆ ;ಕುಂಟುತ್ತಾ ಸಾಗಿದೆ ಕಾಲುವೆ ಕಾಮಗಾರಿ

Team Udayavani, Dec 10, 2019, 5:34 AM IST

0912KDLM5PH1

ಕುಂದಾಪುರ: ಭತ್ತದ ಎರಡನೆ ಬೆಳೆ ಬಿತ್ತನೆ ಸೇರಿದಂತೆ ಕೃಷಿ ಚಟುವಟಿಕೆಗೆ ವಾರಾಹಿ ಕಾಲುವೆಯಲ್ಲಿ ಯಾವಾಗ ನೀರು ಬರುವುದು ಎಂದು ವಾರಾಹಿ ಎಡದಂಡೆ ಕಾಲುವೆ ಭಾಗದ ರೈತರು ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪ್ರತಿವರ್ಷ ಡಿ.1ರ ಅಂದಾಜಿಗೆ ಕಾಲುವೆಯಲ್ಲಿ ನೀರು ಹರಿಸಲಾಗುತ್ತದೆ. ಆದರೆ ಈ ಬಾರಿ ನೀರು ಹರಿಸುವ ಕುರಿತು ಯಾವುದೇ ಮಾಹಿತಿ ಬಂದಿಲ್ಲ ಎಂದು ರೈತರು ಚಿಂತಿತರಾಗಿದ್ದಾರೆ. ಜತೆಗೆ ಅತ್ತ ಮಳೆಯೂ ಸರಿಯಾಗಿ ಬಾರದೇ, ಇತ್ತ ಬೇಸಗೆಯೋ ಚಳಿಗಾಲವೋ ಎಂಬ ಗೊಂದಲದ ವಾತಾವರಣ ಇದೆ. ಇದರಿಂದ ರೈತರು ಮುಂದಿನ ಬೆಳೆ ತೆಗೆಯುವ ಕುರಿತು ಅನಿಶ್ಚಿತತೆ ಎದುರಿಸುತ್ತಿದ್ದಾರೆ.

ವಾರಾಹಿ
ವಾರಾಹಿ ಯೋಜನೆಗೆ ಭರ್ತಿ ನಲುವತ್ತು ವರ್ಷ. 1979ರಲ್ಲಿ ಆರಂಭವಾದ ಯೋಜನೆ ಕುಂಟುತ್ತಾ ಸಾಗಿ ಎಡದಂಡೆಯಷ್ಟೇ ಉಪಯೋಗಕ್ಕೆ ದೊರೆತು ಬಲದಂಡೆ ಹೆಸರಿಗಷ್ಟೇ ಸೀಮಿತವಾಗಿದೆ. 9.43 ಕೋ.ರೂ.ಗಳಲ್ಲಿ ಆರಂಭವಾದ ಯೋಜನೆ 650 ಕೋ.ರೂ.ಗೆ ತಲುಪಿದೆ. ಎಡದಂಡೆ ಕಾಲುವೆ 44.35 ಕಿ.ಮೀ. ಆಗಬೇಕಿದ್ದು 38 ಕಿ.ಮೀ. ರಚನೆಯಾಗಿದೆ. ಬಲದಂಡೆ ಯೋಜನೆಗೆ 8 ಕೋ.ರೂ.ಗಳ ಅಂದಾಜುಪಟ್ಟಿ ತಯಾರಿಸಿದೆ. 18 ಕಿ.ಮೀ. ಸಾಗಬೇಕಾದ ಇದಕ್ಕೆ ಇನ್ನೂ ಚಾಲನೆ ದೊರೆತಿಲ್ಲ.
2003ರಲ್ಲಿ ಯೋಜನೆಯ ಶೀಘ್ರ ಅನು ಷ್ಠಾನದ ಸಲುವಾಗಿ ಕರ್ನಾಟಕ ನೀರಾವರಿ ನಿಗಮಕ್ಕೆ ಹಸ್ತಾಂತರಿಸಲಾಗಿತ್ತು. ಸಿದ್ದಾಪುರದ ಹೊರಿಯಬ್ಬೆ ಎಂಬಲ್ಲಿ ಭೂಗರ್ಭ ಜಲ ವಿದ್ಯುದಾಗಾರ ಇದ್ದು ವಿದ್ಯುತ್‌ ಉತ್ಪಾದನೆಗೆ ಉಪಯೋಗಿಸಿದ ಬಳಿಕ 1,100 ಕ್ಯುಸೆಕ್‌ ನೀರು ಪ್ರತಿದಿನ ಎಡದಂಡೆ ಹಾಗೂ ಬಲದಂಡೆಗಳ ಮೂಲಕ ಹರಿಸಿ ಉಪಕಾಲುವೆಗಳ ಮೂಲಕ ರೈತರ ಜಮೀನಿಗೆ ನೀರೊದಗಿಸಬೇಕೆನ್ನುವುದು ಯೋಜನೆಯ ಆಶಯ.

ನೀರಾವರಿ
ಉಡುಪಿ ಜಿಲ್ಲೆಯ 38,800 ಎಕರೆ ಭೂ ಪ್ರದೇಶಕ್ಕೆ ನೀರುಣಿಸಲು ಕುಂದಾಪುರ ಹಾಗೂ ಉಡುಪಿ ತಾಲೂಕನ್ನು ಕೇಂದ್ರೀಕರಿಸಿ ವಾರಾಹಿ ಯೋಜನೆ ಆರಂಭಿಸಲಾಗಿದೆ. ಯೋಜನೆ ಆರಂಭಗೊಂಡು 25 ವರ್ಷಗಳ ಕಾಲ 37 ಕೋ.ರೂ. ವ್ಯಯಿಸಲಾಗಿತ್ತು. ರೈತರಿಗೆ ಪ್ರಯೋಜನ ಮಾತ್ರ ಶೂನ್ಯ. 2005ರಲ್ಲಿ ಮರುಹುಟ್ಟು ಪಡೆದ ಯೋಜನೆ 2011ರವೇಳೆಗೆ 375 ಕೋ.ರೂ.ಗಳ ಖರ್ಚು ಮಾಡುವಲ್ಲಿಗೆ ತಲುಪಿತು. ಕಳೆದ ವರ್ಷದ ಅವಧಿಗೆ 650 ಕೋ.ರೂ.ವರೆಗೆ ಖರ್ಚಾಗಿದ್ದು ಇನ್ನೂ ಕಾಮಗಾರಿ ಪ್ರಗತಿಯಲ್ಲಿದೆ. 2015ರಿಂದ ಬೇಸಗೆ ಹಂಗಾಮಿನ ನೀರು ಹರಿಸಿ ರೈತರ ಉಪಯೋಗಕ್ಕೆ ದೊರೆಯುತ್ತಿದೆ.

ವಿಳಂಬಕ್ಕೆ ಕಾರಣ ಹಲವು
ಮೂಲ ಯೋಜನೆಯಲ್ಲಿನ ವಿನ್ಯಾಸದಲ್ಲಿ ಬದಲಾವಣೆ, ಕಂದಾಯ ಇಲಾಖೆಯ ಅಡಚಣೆಗಳು, ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವಿಳಂಬ, ಅರಣ್ಯ ಇಲಾಖೆಯ ಆಕ್ಷೇಪಗಳು, ಸ್ಥಳೀಯರ ಕೆಲವೊಂದು ಬೇಡಿಕೆಗಳು, ಅಕಾಲಿಕ ಮಳೆ ಹೀಗೆ ಬೇರೆ ಬೇರೆ ಕಾರಣಗಳಿಂದ ಯೋಜನೆ ವಿಳಂಬವಾಗಿದೆ. ಮೂಲಯೋಜನೆ ಪ್ರಕಾರ 1,019 ಎಕರೆ ಆರಣ್ಯನಾಶ ಆಗುತ್ತಿತ್ತು. ಅದನ್ನು ತಪ್ಪಿಸಿ ಅರಣ್ಯ ಭೂಮಿ ಉಳಿಸುವ ಸಲುವಾಗಿ 2001ರಲ್ಲಿ ಯೋಜನೆಯಲ್ಲಿ ಒಂದಷ್ಟು ಮಾರ್ಪಾಡುಗಳನ್ನು ಮಾಡಲಾಯಿತು. ಇದರಿಂದ 129 ಎಕರೆ ಅರಣ್ಯ ನಾಶ ತಪ್ಪಿದಂತಾಯಿತು. ಉಡುಪಿ ಜಿಲ್ಲೆಯ 38,800 ಎಕರೆ ಕೃಷಿಭೂಮಿಗೆ ನೀರುಣಿಸಬೇಕಿದ್ದ ಯೋಜನೆ ಈಗ 15,702 ಎಕರೆ ಕೃಷಿಭೂಮಿಗೆ ನೀರುಣಿಸಲು ಸೀಮಿತಗೊಳಿಸಲಾಗಿದೆ.

ಮಾಸಾಂತ್ಯದಲ್ಲಿ ನೀರು
ಈ ಬಾರಿಯ ಮಳೆಗಾಲದಲ್ಲಿ ಕುಳುಂಜೆ ಗ್ರಾಮದ ಸಿಂಗನಕೊಡ್ಲು ಎಂಬಲ್ಲಿ ನೀರುಹರಿಸುವ ಕಾಲುವೆ ಕುಸಿತವಾಗಿತ್ತು. ಇದರ ಕಾಮಗಾರಿ ಭರದಿಂದ ನಡೆಯುತ್ತಿದ್ದು ಇನ್ನು ಸ್ಲಾಬ್‌ ರಚನೆಯಷ್ಟೇ ಬಾಕಿಯಾಗಿದೆ. ಸುಮಾರು 15-20 ದಿನಗಳ ಕಾಲಾವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು ಈ ಮಾಸಾಂತ್ಯದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ನೀರು ಹರಿಸಲಾಗುವುದು. ಡಿಸೆಂಬರ್‌ ಮೊದಲ ವಾರದಲ್ಲೂ ಅನಿಶ್ಚಿತವಾಗಿ ಮಳೆ ಬಂದ ಕಾರಣ ಕಾಮಗಾರಿ ಕೈಗೊಳ್ಳುವುದು ತ್ರಾಸದಾಯಕವಾಗಿತ್ತು. ಈ ಹಿನ್ನೆಲೆಯಲ್ಲಿ ವಿಳಂಬವಾಗಿದೆ.
-ಪ್ರಸನ್ನ,ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ವಾರಾಹಿ ನೀರಾವರಿ ನಿಗಮ

ನೀರು ಯಾವಾಗ?
ವಾರಾಹಿ ಕಾಲುವೆಯಲ್ಲಿ ನೀರು ಯಾವಾಗ ಬಿಡುತ್ತಾರೆ ಎಂದು ತಿಳಿಯದೇ ರೈತರು ಎರಡನೆ ಭತ್ತದ ಬೆಳೆ ಬೆಳೆಯಲು ಸಿದ್ಧತೆ ಮಾಡಿಕೊಳ್ಳಲು ಕಷ್ಟವಾಗುತ್ತಿದೆ. ಈ ಕುರಿತು ಸ್ಪಷ್ಟ ಮಾಹಿತಿ ಯಾವುದೇ ಇಲಾಖೆಯಿಂದ ಲಭ್ಯವಾಗಿಲ್ಲ.
-ರಾಘವೇಂದ್ರ ಹಾಲಾಡಿ, ಕೃಷಿಕರು

-ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.