ಸಬ್‌ಜೈಲಿನಲ್ಲಿ ಹೊಡೆದಾಟ: ಟೋನಿಯ ಮೂತಿ ಒಡೆದರು


Team Udayavani, May 23, 2017, 3:41 PM IST

fighting.jpg

ಉಡುಪಿ: ಅಂಜಾರಿನಲ್ಲಿರುವ ಜಿಲ್ಲಾ ಸಬ್‌ಜೈಲಿನಲ್ಲಿ ಕೈದಿಗಳ ನಡುವೆ ರವಿವಾರ ರಾತ್ರಿ ಹೊಡೆದಾಟ ನಡೆದಿದ್ದು, ಕಾಸರಗೋಡಿನ ವಿಚಾರಣಾಧೀನ ಕೈದಿ ಟೋನಿ(30)ಯ ಮೂತಿಯನ್ನು ಸಹಕೈದಿಗಳು ಜಜ್ಜಿದ್ದು, 2 ಹಲ್ಲುಗಳು ಉದುರಿ ಹೋಗಿವೆ. ಸೊಂಟಕ್ಕೂ ಪೆಟ್ಟಾಗಿದೆ. ನಡೆದಾಡಲು ಕಷ್ಟಪಡುತ್ತಿದ್ದಾನೆ. ಹಲ್ಲೆ ಗೊಳಗಾಗಿರುವ ಟೋನಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿರುವ ಕೈದಿಗಳ ಚಿಕಿತ್ಸಾ ಸೆಲ್‌ಗೆ ದಾಖಲಿಸಲಾಗಿದೆ.

ಸಬ್‌ಜೈಲಿನ ಕೈದಿಗಳ ಬ್ಯಾರಕ್‌ನಲ್ಲಿ 30-35 ಮಂದಿ ಇದ್ದರು. ರವಿವಾರ ರಾತ್ರಿ ಮುಂಬೈ ಇಂಡಿಯನ್ಸ್‌ ಹಾಗೂ ಪುಣೆ ತಂಡಗಳ ಮಧ್ಯೆ ಐಪಿಎಲ್‌ ಕ್ರಿಕೆಟ್‌ ಮ್ಯಾಚ್‌ ಇತ್ತು. ಕೈದಿಗಳೆಲ್ಲರೂ ಮ್ಯಾಚ್‌ ನೋಡುತ್ತಿದ್ದರು. ಟಿ.ವಿ. ರಿಮೋಟ್‌ ವಿಚಾರಕ್ಕೆ ಸಂಬಂಧಿಸಿ ಹಲ್ಲೆ ನಡೆಸಲಾಗಿದೆ. ಮ್ಯಾಚ್‌ ಮುಗಿದ ಬಳಿಕ ಟಿ.ವಿ. ಸೌಂಡ್‌ ಜಾಸ್ತಿ ಇಟ್ಟದ್ದಕ್ಕಾಗಿ ಹೊಡೆದಾಟ ಪ್ರಾರಂಭವಾಗಿದೆ ಎಂದು ಹೇಳಲಾಗಿದೆ. ಟೋನಿ ಹೇಳುವ ಪ್ರಕಾರ ಟಿವಿ ಚಾನಲ್‌ನಲ್ಲಿ ಮ್ಯಾಚ್‌ ನೋಡಿದ ಬಳಿಕ ಇತರ ಕೈದಿಗಳ ಜತೆಗೆ ತನ್ನತ್ತ ಆಗಮಿಸಿದ ಸಹಕೈದಿ ಪ್ರಶಾಂತ್‌, ಇದು ನಮ್ಮ ರಾಜ್ಯ ಕರ್ನಾಟಕ. ನನ್ನನ್ನು ಅಣ್ಣಾ ಎಂದು ಕರೆಯಬೇಕು. 10 ಸಾವಿರ ರೂ. ಕೊಡಬೇಕು ಎಂದಾಗ ನಾನು ಒಪ್ಪಲಿಲ್ಲ. ಆಗ ಆತ ಮತ್ತು  ಹಲವರು ಸೇರಿ ಕೇರಮ್‌ ಬೋರ್ಡ್‌, ಚೆಂಬು ಮತ್ತಿತರ ಸೊತ್ತುಗಳಿಂದ ಹೊಡೆದು ಹಲ್ಲೆ ನಡೆಸಿದ್ದಾರೆ ಎಂದಿದ್ದಾನೆ.

“ಮಂಗಳೂರಿನಿಂದ ಸ್ಥಳಾಂತರಗೊಂಡಿದ್ದ’
ಹಲವು ಪ್ರಕರಣಗಳ ಆರೋಪಿ ಟೋನಿ ವಿಚಿತ್ರ ವ್ಯಕ್ತಿತ್ವದ ಕೈದಿಯಾಗಿದ್ದ. ಕೇರಳ ಸಹಿತ ವಿವಿಧೆಡೆಗಳಲ್ಲಿ ಈತನ ಮೇಲೆ ಪ್ರಕರಣಗಳು ದಾಖಲಾಗಿದ್ದವು. ಶಿವಮೊಗ್ಗ, ಧಾರವಾಡ, ಬೆಳಗಾವಿ, ಮಂಗಳೂರು ಮೊದಲಾದ ಜೈಲುಗಳಲ್ಲಿ ಆತ ಇದ್ದ. 2012ರಲ್ಲಿ ಹಿರಿಯಡಕ ಸಬ್‌ಜೈಲಿನಲ್ಲಿ ವಿನೋದ್‌ ಶೆಟ್ಟಿಗಾರ್‌ ಹತ್ಯೆಯ ಆರೋಪಿ ಸಂತೋಷ್‌ ಪೂಜಾರಿಯ ಮೇಲೆ ನಡೆದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮೇ 31ಕ್ಕೆ ಉಡುಪಿ ಕೋರ್ಟ್‌ನಲ್ಲಿ ವಿಚಾರಣೆ ಇತ್ತು. ಹಾಗಾಗಿ ಕಳೆದೊಂದು ತಿಂಗಳಿನಿಂದ ಮಂಗಳೂರು ಜೈಲಿನಲ್ಲಿದ್ದ ಟೋನಿಯನ್ನು ಮೇ 19ರಂದು ಹಿರಿಯಡಕ ಅಂಜಾರಿನ ಸಬ್‌ಜೈಲಿಗೆ ಸ್ಥಳಾಂತರಿಸಲಾಗಿತ್ತು. ಅದಕ್ಕೂ ಮೊದಲು ಆತ ಬೆಳಗಾವಿ ಜೈಲಿನಲ್ಲಿದ್ದ. ವಿವಿಧ ಕಡೆಗಳ ಜೈಲುಗಳಲ್ಲಿ ಸಹಕೈದಿಗಳೊಂದಿಗೆ ಗಲಾಟೆ ನಡೆಸುವುದು ಆತನ ಖಯಾಲಿಯಾಗಿತ್ತೆಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.