ರಾಜ್ಯ ಯುವಜನ ಮೇಳ ಸಮಾಪನ
Team Udayavani, Mar 6, 2017, 12:37 PM IST
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಉಡುಪಿಯಲ್ಲಿ 3 ದಿನಗಳ ಕಾಲ ನಡೆದ ರಾಜ್ಯಮಟ್ಟದ ಯುವಜನ ಮೇಳವು ರವಿವಾರ ಸಮಾಪನಗೊಂಡಿತು.
ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅವರು ಅಧ್ಯಕ್ಷತೆ ವಹಿಸಿದ್ದರು. “ನಗದು ಬಹುಮಾನ-ಆದೇಶ’ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಇಲಾಖೆಯ ಸುತ್ತೋಲೆಯಂತೆ ಸ್ಪರ್ಧಾ ವಿಜೇತರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಬೇಕು. ಯುವಜನ ಮೇಳದಲ್ಲಿ ಭಾಗವಹಿಸಿದ ಅನ್ಯ ಜಿಲ್ಲೆಗಳ ಅದೆಷ್ಟೋ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಯುವಜನರಲ್ಲಿ ಬ್ಯಾಂಕ್ ಖಾತೆಗಳೇ ಇರಲಿಲ್ಲ. ಇದನ್ನು ಮನಗಂಡು ನಗದು ರೂಪದಲ್ಲಿ ಬಹುಮಾನ ವಿತರಣೆಗೆ ಅವಕಾಶ ಕಲ್ಪಿಸುವಂತೆ ಇಲಾಖೆಯ ನಿರ್ದೇಶಕರಿಗೆ ಮನವಿ ಮಾಡಿದ್ದೆ. ನಗದು ನೀಡಲು ಅವರು ಆದೇಶಿಸಿದಂತೆ ವಿಜೇತರಿಗೆ ನಗದು ರೂಪದಲ್ಲಿ ಬಹುಮಾನ ವಿತರಿಸಲಾಗಿದೆ ಎಂದರು.
ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಮುಖ್ಯ ಅತಿಥಿಯಾಗಿದ್ದರು. ಯುವ ಒಕ್ಕೂಟದ ಅಧ್ಯಕ್ಷ ಚಿಕ್ಕಪ್ಪ ಜಾಧವ್, ತಾಲೂಕು ಕ್ರೀಡಾಧಿಕಾರಿಗಳಾದ ನಾರಾಯಣ ರಾವ್, ಫೆಡ್ರಿಕ್ ಲೂಯಿಸ್, ಕುಸುಮಾಕರ ಶೆಟ್ಟಿ, ಉಪನ್ಯಾಸಕ ಪ್ರೊ| ನಾಗರಾಜ್ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.