ಹೆಬ್ರಿ: ಚಾರ ಗ್ರಾ.ಪಂ.ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ ದಾಖಲೆ ಪತ್ರ
Team Udayavani, Sep 20, 2022, 8:57 PM IST
ಹೆಬ್ರಿ: ಹೆಬ್ರಿ ಸಮೀಪ ಚಾರ ಗ್ರಾಮ ಪಂಚಾಯತ್‌ನಲ್ಲಿ ಸೆ. 19ರ ರಾತ್ರಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ದಾಖಲೆ ಪತ್ರಗಳು, ಕಂಪ್ಯೂಟರ್ ಪೀಠೊಪಕರಣಗಳು ಸುಟ್ಟು ಹೋಗಿದ್ದು ಅಪಾರ ನಷ್ಟ ಸಂಭವಿಸಿದೆ.
ವಿಷಯ ತಿಳಿದ ಪಂಚಾಯತ್ ಅಧ್ಯಕ್ಷೆ ಕುಸುಮಾ ಪ್ರಭು ಮತ್ತು ಸಿಬಂದಿ ಮಂಗಳವಾರ ಬೆಳಗ್ಗೆ ಪಂಚಾಯತ್ ಬಾಗಿಲು ತೆರೆದು ನೋಡಿದಾಗ ರೆಕಾರ್ಡ್ ರೂಮಿನಲ್ಲಿ ಬೆಂಕಿ ಹತ್ತಿ ಉರಿಯುತ್ತಿರುವುದನ್ನು ಕಂಡು ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಲಾಯಿತು. ರಾತ್ರಿ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು ಬೆಳಗ್ಗೆ ತನಕ ಬೆಂಕಿ ಉರಿದು ಹಳೆಯ ದಾಖಲೆ ಪತ್ರಗಳೆಲ್ಲ ಸಂಪೂರ್ಣ ಸುಟ್ಟು ಕರಕಲಾಗಿವೆ.
ಕಪಾಟುಗಳು, ಕೆಲವೊಂದು ಕಂಪ್ಯೂಟರ್, ಪ್ರಿಂಟರ್ ಹಾಗೂ ಪ್ಲಾಸ್ಟಿಕ್ ಚೇರ್‌ಗಳು ಸುಟ್ಟುಹೋಗಿವೆ. ಸ್ಥಳಕ್ಕೆ ಹೆಬ್ರಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಶಿಧರ ಕೆ.ಜಿ., ಕಂದಾಯ ಅಧಿಕಾರಿಗಳು, ಮೆಸ್ಕಾಂ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯುತ್ ಸಮಸ್ಯೆ :
ಹಲವಾರು ದಿನಗಳಿಂದ ವಿದ್ಯುತ್ ತಂತಿಯಲ್ಲಿ ಸಮಸ್ಯೆ ಇದೆ ಎಂದು ಮೆಸ್ಕಾಂ ಗಮನಕ್ಕೆ ತರಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ನೂಟ್‌ನಿಂದ ದಾಖಲೆ ಪತ್ರ ಸಹಿತ ಕೆಲವೊಂದು ಕಂಪ್ಯೂಟರ್ ಪೀಠೊಪರಕರಣಗಳು ಸುಟ್ಟ ಪರಿಣಾಮ ಪಂಚಾಯತ್‌ಗೆ ಅಪಾರ ನಷ್ಟವಾಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಪಂಚಾಯತ್ ಅಧ್ಯಕ್ಷೆ ಕುಸುಮಾ ಪ್ರಭು ತಿಳಿಸಿದ್ದಾರೆ.
ಆತಂಕದಲ್ಲಿ ಗ್ರಾಮಸ್ಥರು :
ಮನೆ ನಿವೇಶನ, ಉದ್ಯೋಗ ಖಾತರಿ, ತೆರಿಗೆ ಪಾವತಿ ಮೊದಲಾದ ದಾಖಲೆ ಪತ್ರಗಳು ಸೇರಿದಂತೆ ಅಪಾರ ಪ್ರಮಾಣದಲ್ಲಿ ದಾಖಲಾತಿ ಸುಟ್ಟು ಹೋದ ಕಾರಣ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.
ಶಾರ್ಟ್ ಸರ್ಕ್ನೂಟ್ ಆಗಿರುವ ಸಂಭವ ಕಡಿಮೆ :
ವಿದ್ಯುತ್‌ಶಾರ್ಟ್ ಸರ್ಕ್ನೂಟ್ ಆಗಿದ್ದರೆ ಟ್ರಿಪ್ ಆಗುತ್ತಿತ್ತು. ಆದರೆ ಇಂತಹ ಯಾವುದೇ ಪ್ರಕರಣ ನಡೆದಿಲ್ಲ. ಕಟ್ಟಡದ ವಿದ್ಯುತ್ ವಯರಿಂಗ್‌ಗೆ ಯಾವುದೇ ಹಾನಿಯಾಗಿಲ್ಲ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.