![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 10, 2023, 4:13 PM IST
ಮಣಿಪಾಲ: 80 ಬಡಗಬೆಟ್ಟು ಗ್ರಾಮದ ಮಂಚಿ ರಾಜೀವನಗರದ ಮೀಸಲು ಅರಣ್ಯ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕಾಡಿನಲ್ಲಿ ಹತ್ತಿಕೊಂಡ ಬೆಂಕಿಯ ಕೆನ್ನಾಲಿಗೆ ಇಡೀ ಸುತ್ತಮುತ್ತಲಿನ ಪರಿಸರಕ್ಕೆ ವ್ಯಾಪಕವಾಗಿ ಹರಡಿದೆ. ಇದರಿಂದ ಸುತ್ತಮುತ್ತ ಪರಿಸರದಲ್ಲಿ ಕೆಲಕಾಲ ದಟ್ಟ ಹೊಗೆ ಆವರಿಸಿಕೊಂಡಿತ್ತು. ರಾಜೀವನಗರದ ರತ್ನ ಆಚಾರ್ಯ ಅವರ ಹಡಿಲು ಗದ್ದೆಯ ಹುಲ್ಲು ಗಾವಲು, ಮನೆಯೊಂದರ ಬಳಿ ರಾಶಿ ಹಾಕಿದ್ದ ಕಟ್ಟಿಗೆಯ ರಾಶಿ, ಕಾಡಿನ ಅಕೇಶಿಯ ಮರಗಳು ಬೆಂಕಿಗೆ ಆಹುತಿಯಾಗಿವೆ.
ಮೊದಲಿಗೆ ಕಾಡಿನಲ್ಲಿ ಕಾಣಿಸಿಕೊಂಡ ಬೆಂಕಿಯ ಸಣ್ಣ ಕಿಡಿ, ನೋಡ ನೋಡುತ್ತಿದ್ದಂತೆ ವ್ಯಾಪಕವಾಗಿ ಹರಡಿದೆ. ರಾಜೀವನಗರದ 6ನೇ ಅಡ್ಡ ರಸ್ತೆಯ ಬಳಿಯ ಎರಡು ಎಕರೆಯಷ್ಟು ವ್ಯಾಪ್ತಿಯಲ್ಲಿ ಬೆಂಕಿ ಅಟ್ಟಹಾಸ ಮೆರೆದಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.