ಅಂಗಡಿಗೆ ಬೆಂಕಿ: ಅಪರಾಧ ಸಾಬೀತು
Team Udayavani, Dec 6, 2018, 11:06 AM IST
ಕುಂದಾಪುರ: ಮೂರು ವರ್ಷಗಳ ಹಿಂದೆ ಗಂಗೊಳ್ಳಿಯಲ್ಲಿ ಕೋಮುದ್ವೇಷದಿಂದ ಅಂಗಡಿಗೆ ಬೆಂಕಿ ಹಾಕಿದ್ದ ಪ್ರಕರಣದ ಆರೋಪ ಸಾಬೀತಾಗಿದ್ದು, ತಪ್ಪಿತಸ್ಥರಿಗೆ ಡಿ.10ರಂದು ಶಿಕ್ಷೆ ಪ್ರಕಟಿಸುವುದಾಗಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ಗಂಗೊಳ್ಳಿ ಬಾದ್‌ಶಾ ಮೊಹಲ್ಲಾದ ಮಹ್ಮದ್ ಜುನೈದ್ ಹಾಗೂ ವೆಲ್ಡಿಂಗ್ ಜಾಫರ್ ಯಾನೆ ಜಾಫರ್ ಅವರು 2015ರ ಜ. 21ರಂದು ನುಸುಕಿನ ಜಾವ 2.20ಕ್ಕೆ ಗಂಗೊಳ್ಳಿ ಮುಖ್ಯರಸ್ತೆಯ ವೆಂಕಟೇಶ ಭಾಸ್ಕರ ಶೆಣೈ ಅವರ ಅಂಗಡಿಯ ಗೋದಾಮು, ಕಾರು ಹಾಗೂ ಬೈಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ್ದರು. ಪ್ರಕರಣದಲ್ಲಿ ಒಟ್ಟು 28 ಸಾಕ್ಷಿಗಳಿದ್ದು, ಈ ಪೈಕಿ 14 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್ ಖಂಡೇರಿ ಅವರು ಅಪರಾಧ ಸಾಬೀತಾಗಿದೆ ಎಂದು ಪ್ರಕಟಿಸಿದ್ದಾರೆ. ಸರಕಾರದ ಪರ ಜಿಲ್ಲಾ ಸಹಾಯಕ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.