ಗಂಗೊಳ್ಳಿ ಅಳಿವೆ: ಮಗುಚಿದ ದೋಣಿ; ಮೀನುಗಾರರು ಪಾರು
Team Udayavani, Sep 1, 2017, 9:55 AM IST
ಕುಂದಾಪುರ: ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಮೀನುಗಾರಿಕಾ ದೋಣಿಯೊಂದು ಮಗುಚಿದ್ದು ಇಬ್ಬರು ಮೀನುಗಾರರು ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.
ಗಂಗೊಳ್ಳಿ ಮೀನುಗಾರಿಕಾ ಬಂದರಿ ನಿಂದ ಮೀನುಗಾರಿಕೆ ತೆರಳಿದ್ದ ಶ್ರೀ ಸಿದ್ಧಿವಿನಾಯಕ ಹೆಸರಿನ ಮೀನು ಗಾರಿಕಾ ದೋಣಿಯು ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಕಡಲ ಅಲೆಗಳ ಹೊಡೆತಕ್ಕೆ ಸಿಲುಕಿ ಅಳಿವೆಯ ಮರಳಿನ ದಿಣ್ಣೆಗೆ ಬಡಿದು ಮಗುಚಿ ಬಿದ್ದಿದೆ ಎನ್ನಲಾಗಿದೆ.
ದೋಣಿಯಲ್ಲಿದ್ದ ಗಂಗೊಳ್ಳಿ ಸಮೀಪದ ಕಂಚುಗೋಡು ನಿವಾಸಿ ಭಾಸ್ಕರ ಖಾರ್ವಿ (40) ಮತ್ತು ಕರುಣಾ ಪೂಜಾರಿ (42) ಅವರನ್ನು ಇತರ ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದುರಂತದಲ್ಲಿ ಗಾಯಗೊಂಡ ಭಾಸ್ಕರ ಖಾರ್ವಿ ಹಾಗೂ ಕರುಣಾ ಪೂಜಾರಿ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೀಡಾದ ದೋಣಿಯನ್ನು ಕುಂದಾಪುರ ಸಮೀಪದ ಕೋಡಿ ಕಡಲ ಕಿನಾರೆಗೆ ಎಳೆದು ತರಲಾಗಿದ್ದು, ದೋಣಿ ಸಂಪೂರ್ಣವಾಗಿ ಹಾನಿ ಗೊಳಗಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮೀನುಗಾರರ ಆಗ್ರಹ
ಅಳಿವೆ ಪ್ರದೇಶದಲ್ಲಿ ಹೂಳು ತುಂಬಿಕೊಂಡಿರುವುದರಿಂದ ಪ್ರತಿ ವರ್ಷ ಒಂದಲ್ಲ ಒಂದು ದುರಂತ ಅವಘಡ ಸಂಭವಿಸುತ್ತಿದ್ದು, ಮೀನುಗಾರರ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ತುರ್ತಾಗಿ ಹೂಳೆತ್ತಬೇಕು ಮತ್ತು ಬಂದರಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ಬ್ರೇಕ್ ವಾಟರ್ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸ್ಥಳೀಯ ಮೀನುಗಾರರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.