ಮೀನುಗಾರರಿಗೆ ಸರಕು ಸಾಗಾಟ ವಾಹನದಲ್ಲಿ ಸಂಚರಿಸಲು ಅವಕಾಶ ನೀಡಲು ಮನವಿ
Team Udayavani, Jul 13, 2019, 5:12 AM IST
ಉಡುಪಿ: ಕರಾವಳಿ ಕರ್ನಾಟಕದ ಮೀನುಗಾರರಿಗೆ ಸರಕು ಸಾಗಾಟದ ವಾಹನದಲ್ಲಿ ಸಂಚರಿಸಲು ಅವಕಾಶ ನೀಡಬೇಕು ಎಂದು ದ.ಕ.ಜಿಲ್ಲಾ ಮೊಗವೀರ ಮಹಾಜನ ಸಂಘ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿದೆ.
ಮಳೆಗಾಲದ ಸಮಯದಲ್ಲಿ ನಾಡ ದೋಣಿಗಳಲ್ಲಿ ದುಡಿಯುವ ಮೀನುಗಾರರು ಮೀನುಗಾರಿಕಾ ಬಲೆ ಮತ್ತು ಇತರ ಪರಿಕರಗಳೊಂದಿಗೆ ಸರಕು ಸಾಗಾಟದ ಟೆಂಪೋದಲ್ಲಿ ಬಂದರುಗಳಿಗೆ ತೆರಳುವಾಗ ಮತ್ತು ಮಹಿಳೆಯರು ಮೀನು ಮಾರಾಟಕ್ಕೆ ಸಣ್ಣ ಟೆಂಪೋದಲ್ಲಿ ಸಂಚರಿಸುವಾಗ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ. ಮುಂಜಾನೆ ಯಾವುದೇ ಬಸ್ಸಿನ ವ್ಯವಸ್ಥೆ ಇರುವುದಿಲ್ಲ ಮತ್ತು ಮೀನುಗಾರ ಮಹಿಳೆಯರಿಗೆ ಬುಟ್ಟಿಯೊಂದಿಗೆ ಬಸ್ಸುಗಳಲ್ಲಿ ಸಂಚರಿಸಲು ಅವಕಾಶ ನೀಡದ ಕಾರಣ ಸರಕು ಸಾಗಾಟದ ವಾಹನಗಳಲ್ಲಿ ಪ್ರಯಾಣಿಸುವುದು ಅನಿವಾರ್ಯವಾಗಿರುತ್ತದೆ. ಆದ್ದರಿಂದ ಈ ವಾಹನಗಳಲ್ಲಿ ಸಂಚರಿಸಲು ಅವಕಾಶ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ದ.ಕ.ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಸಮಿತಿಯ ಸದಸ್ಯರಾದ ಲೀಲಾಧರ ಪಡುಬಿದ್ರಿ, ವಿನಯ ಕರ್ಕೆರ, ರವೀಂದ್ರ ಶ್ರಿಯಾನ್, ದಾಸ ಕೋಟ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.