Malpe ಮೀನುಗಾರರ ಅಪಹರಣ ಪ್ರಕರಣ: ಭಟ್ಕಳದ ಏಳು ಮಂದಿಯ ಬಂಧನ
Team Udayavani, Mar 1, 2024, 9:59 PM IST
ಮಲ್ಪೆ: ಮಲ್ಪೆ ಮೀನುಗಾರರನ್ನು ಭಟ್ಕಳದಲ್ಲಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಭಟ್ಕಳದ ಸುಬ್ರಹ್ಮಣ್ಯ ಖಾರ್ವಿ (34), ರಾಘವೇಂದ್ರ ಖಾರ್ವಿ (38), ಹರೀಶ್ ನಾರಾಯಣ ಖಾರ್ವಿ (40), ನಾಗೇಶ್ ನಾರಾಯಣ (42), ಗೋಪಾಲ್ ಮಾಧವ್(38), ಸಂತೋಷ್ ದೇವಯ್ಯ (43), ಲಕ್ಷಣ್ (50) ಬಂಧಿತರು.
ಫೆ. 26ರಂದು ಮಲ್ಪೆಯ ಚೇತನ್ ಸಾಲ್ಯಾನ್ ಅವರಿಗೆ ಸೇರಿದ ಕೃಷ್ಣ ನಂದನ ಆಳಸಮುದ್ರ ಬೋಟಿನಲ್ಲಿ ಈ ಘಟನೆ ನಡೆದಿದೆ.
ಮೀನುಗಾರಿಕೆ ಮುಗಿಸಿ ವಾಪಸ್ ಬರುತ್ತಿರುವಾಗ ಆಳಸಮುದ್ರ ಬೋಟಿಗೆ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಈ ವೇಳೆ ಭಟ್ಕಳದ ಮೀನುಗಾರರ ತಂಡ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ಸಹಿತ 7 ಮಂದಿ ಮೀನುಗಾರರನ್ನು25 ಜನರ ತಂಡ ಭಟ್ಕಳದ ಮಾವಿನ ಕುರ್ವೆ ಬಂದರಿನಲ್ಲಿ ಅಪಹರಿಸಿತ್ತು. ಅಪಹರಣಕಾರರು ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ಕಸಿದು ಮಾರಾಟ ಮಾಡಿದ್ದರು. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.