ಮಲ್ಯಾಡಿ: ಗ್ರಾಮೀಣ ಯುವಕರಿಂದ ಹೊಳೆ ಮೀನು ಬೇಟೆ!
Team Udayavani, Jun 18, 2018, 2:35 AM IST
ತೆಕ್ಕಟ್ಟೆ: ಮುಂಗಾರು ಮಳೆ ಆಗಮನ ಕುಂದಾಪುರ ತಾಲೂಕಿನ ತೆಕ್ಕಟ್ಟೆ, ಮಲ್ಯಾಡಿ ಸುತ್ತಮುತ್ತಲ ಹೊಳೆಸಾಲುಗಳಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದ್ದು ಹಿಂಡು ಹಿಂಡಾಗಿ ಮೀನು ಸಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಯುವಕರ ತಂಡವೊಂದು ಕಳೆದ ಮೂರು ದಿನಗಳಿಂದಲೂ ಉತ್ಸಾಹದಿಂದ ಬಲೆ ಬೀಸುವಲ್ಲಿ ಕಾರ್ಯಪ್ರವೃತ್ತರಾಗಿವೆ.
ಬೃಹತ್ ಗಾತ್ರದ ಮೀನುಗಳು
ಮಳೆಯ ಪರಿಣಾಮ ಗ್ರಾಮೀಣ ಭಾಗಗಳಿಂದ ಹಾದು ಹೋಗುವ ಹೊಳೆ ಸಾಲುಗಳಲ್ಲಿ ಅಪಾರ ಪ್ರಮಾಣದ ಮೀನುಗಳು ಕಾಣಸಿಗುತ್ತಿವೆ. ಐರ್, ಕಾಟ್ಲಾ , ಕೆಂಬೇರಿ ಜಾತಿಗೆ ಸೇರಿದ ಭಾರೀ ಬೇಡಿಕೆಯ ಮೀನುಗಳು ಹಿಂಡು ಹಿಂಡಾಗಿರುವುದರಿಂದ ಗ್ರಾಮೀಣ ಯುವಕರ ತಂಡ ಹಲ್ತೂರು, ಮಲ್ಯಾಡಿ, ಕುದ್ರುಬೈಲು, ಮಣೂರು ದೇವಸ ಸೇರಿದಂತೆ ಅಲ್ಲಲ್ಲಿ ಬಲೆ ಬೀಸಿ ಮೀನುಗಾರಿಕೆ ನಡೆಸುತ್ತಿದ್ದಾರೆ.
ಈ ತಾಜಾ ಮೀನಿಗೆ ಹೆಚ್ಚಿದ ಭಾರೀ ಬೇಡಿಕೆ
ಒಂದೊಂದು ಮೀನುಗಳ ಭಾರ ಸರಿಸುಮಾರು ಮೂರು ಕೆ.ಜಿಗೂ ಅಧಿಕ ತೂಕವನ್ನು ಹೊಂದಿದೆ. ಕೆ.ಜಿ.ಗೆ ಸುಮಾರು ರೂ.350 ಕ್ಕೂ ಅಧಿಕ ಬೆಲೆ ಇದೆ. ಪ್ರಸ್ತುತ ಸಮುದ್ರ ಮೀನುಗಾರಿಕೆ ನಿಷೇಧವಿರುವುದರಿಂದ ಗ್ರಾಮೀಣ ಭಾಗದಲ್ಲಿ ಈ ಬೀಸಿದ ಬಲೆಯಲ್ಲಿ ಸಿಕ್ಕಿದ ಬೃಹತ್ ಮೀನುಗಳ ಖರೀದಿಗಾಗಿ ಹುಡುಕಿಕೊಂಡು ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ.
3 ದಿನಗಳಿಂದ ಅಪಾರ ಮೀನು
ಮಲ್ಯಾಡಿ, ಉಳ್ತೂರು, ಬೇಳೂರು, ಕುದ್ರುಬೈಲ್ ಗಳಲ್ಲಿ ಹಲವು ಮಂದಿ ಪ್ರತಿ ದಿನ ಮುಂಜಾನೆಯಿಂದಲೇ ಈ ಭಾಗದಲ್ಲಿ ಬಲೆ ಬೀಸಿ ಮೀನು ಹಿಡಿಯುವ ಕಾಯಕದಲ್ಲಿ ನಿರತರಾಗಿದ್ದಾರೆ. ಅಲ್ಲದೆ ಹೊಳೆಸಾಲುಗಳಲ್ಲಿ ಅಲ್ಲಲ್ಲಿ ಅಡ್ಡಲಾಗಿ ಬಲೆ ಇರಿಸಲಾಗಿದೆ. ಮೀನುಗಳಿರುವ ನಿಶಾನೆಯನ್ನು ನೋಡಿಕೊಂಡು ಕೆಲವೊಮ್ಮೆ ಗೋರು ಬಲೆಯನ್ನು ಬೀಸಿ ದೊಡ್ಡ ಗಾತ್ರದ ಮೀನುಗಳನ್ನು ಹಿಡಿದಿದ್ದೇವೆ. ಕಳೆದ ಮೂರು ದಿನಗಳಿಂದ ಅಪಾರ ಪ್ರಮಾಣದ ಮೀನುಗಳು ಬಲೆಗೆ ಬಿದ್ದಿವೆೆ.
– ಮೇಲ್ತಾರು ಮನೆ ಶ್ರೀನಾಥ್ ಶೆಟ್ಟಿ, ಮೀನಿನ ಬೇಟೆಯಲ್ಲಿ ತೊಡಗಿದವರು
ಮೀನು ಖಾದ್ಯ ರುಚಿಕರ
ಮಳೆಯ ಆರಂಭದಲ್ಲೇ ದೊಡ್ಡ ಗಾತ್ರದ ಮೀನುಗಳು ಹೊಳೆಯಿಂದ ಹರಿದು ಬರುತ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಕೂಡಾ ನಾಲ್ಕೈದು ಮಂದಿ ಸ್ನೇಹಿತರು ಒಗ್ಗೂಡಿಕೊಂಡು ಹವ್ಯಾಸಕ್ಕಾಗಿ ತಾಜಾ ಮೀನುಗಳನ್ನು ಹಿಡಿಯುತ್ತಿದ್ದೇವೆ. ಈ ಮೀನುಗಳಿಂದ ತಯಾರಿಸುವ ಖಾದ್ಯಗಳು ಅತ್ಯಂತ ರುಚಿಕರವಾಗಿರುವುದರಿಂದ ಭಾರೀ ಬೇಡಿಕೆ ಇದೆ.
– ಚಂದ್ರ ಮಲ್ಯಾಡಿ, ಮೀನು ಹಿಡಿಯುವ ಹವ್ಯಾಸಿ ತಂಡ
— ಟಿ. ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.