ಗುರಿಯಂತೆ ಕಾರ್ಯಕ್ರಮ ರೂಪಿಸಿ: ಜಿಲ್ಲಾಧಿಕಾರಿ ಸೂಚನೆ
Team Udayavani, Jul 16, 2019, 5:15 AM IST
ಉಡುಪಿ: ಜಿಲ್ಲೆಯಲ್ಲಿ ಜು. 15ರಿಂದ 27 ವರೆಗೆ ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ನಡೆಯುವ ಕ್ಷಯರೋಗದ ಪತ್ತೆ ಹಚ್ಚುವಿಕೆಯ ಚಟುವಟಿಕೆಗಳಲ್ಲಿ ನಿರ್ದಿಷ್ಟವಾದ ಟಾರ್ಗೆಟ್ ಸಿದ್ಧಪಡಿಸಿಕೊಂಡು ಕಾರ್ಯಕ್ರಮ ರೂಪಿಸಿ ದಿನ ನಿತ್ಯ ನಡೆಯುವ ಚಟುವಟಿಕೆಗಳ ವರದಿ ತಯಾರಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು.ಅವರು ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬಂದಿಗಳ ಕುರಿತು ಮಾಹಿತಿ ಹಾಗೂ ಕ್ಷಯರೋಗ ಪತ್ತೆ ಹಚ್ಚುವಿಕೆಯ ಕಾರ್ಯಕ್ರಮದ ರೂಪುರೇಖೆಗಳ ಬಗ್ಗೆ ಮಾಹಿತಿ ಪಡೆದರು. ಆರೋಗ್ಯ ಅಧಿಕಾರಿಗಳು ಹಾಗೂ ಸಿಬಂದಿಗಳಿಗೆ ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸುವ ಜತೆಗೆ ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿರುವ ಸಿಬಂದಿಗಳು, ಆರೋಗ್ಯ ಸೇವೆಗಳು ಹಾಗೂ ರೋಗಿಗಳ ಬಗ್ಗೆ ಸ್ಪಷ್ಟವಾದ ಮಾಹಿತಿ ಹೊಂದಿರಬೇಕು ಎಂದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು, ಕ್ಷಯರೋಗ ಪತ್ತೆ ಹಚ್ಚುವಿಕೆಯ ಕುರಿತ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡುತ್ತಾ, ಈ ಕಾರ್ಯಕ್ರಮದ ಅಭಿಯಾನದ ಮೂಲಕ ಕ್ಷಯರೋಗ ಹರಡುವ ಸಾಧ್ಯತೆ ಇರುವಂತಹ ಅಪಾಯಕಾರಿ ಪ್ರದೇಶಗಳ ಮನೆ ಮನೆಗೆ ಭೇಟಿ ನೀಡುತ್ತೇವೆ. ರೋಗದ ಲಕ್ಷಣಗಳು ಕಂಡು ಬಂದಲ್ಲಿ ಅವರನ್ನು ತಪಾಸಣೆಗೆ ಒಳಪಡಿಸಿ ಖಚಿತ ಪಡಿಸಿಕೊಂಡು ಚಿಕಿತ್ಸೆ ನೀಡುವುದಾಗಿ ತಿಳಿಸಿದರು. ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಎಂ.ಜಿ. ರಾಮ, ಡಾ| ರಾಮ್‌ರಾವ್ ಮತ್ತಿತರರು ಉಪಸ್ಥಿತರಿದ್ದರು.
1.4 ಲಕ್ಷ ಜನರ ಪರೀಕ್ಷೆ
ಪ್ರಸಕ್ತ ವರ್ಷದ ಜನವರಿ 2 ರಿಂದ 14ರ ವರೆಗೆ ನಡೆದ ದ್ವಿತೀಯ ಹಂತದ ಕಾರ್ಯಕ್ರಮದಲ್ಲಿ 1,40,838 ಮಂದಿಗೆ ಸ್ಕ್ರೀನಿಂಗ್ ಮಾಡಲಾಗಿದ್ದು, ಕಫ ಪರೀಕ್ಷೆಯಲ್ಲಿ 19 ಮಂದಿಗೆ ಕ್ಷಯರೋಗದ ಗುಣ ಲಕ್ಷಣಗಳು ಕಂಡು ಬಂದಿದ್ದವು. ಇದರಲ್ಲಿ 4 ಮಂದಿಯಲ್ಲಿ ಕ್ಷಯರೋಗ ಪತ್ತೆ ಮಾಡಿದ್ದು ಒಟ್ಟು 23 ಕ್ಷಯರೋಗದ ಪ್ರಕರಣವನ್ನು ಕಳೆದ ಬಾರಿ ಪತ್ತೆ ಹಚ್ಚಲಾಗಿದೆ. ಈ ಬಾರಿ ತೃತೀಯ ಹಂತದ ಕಾರ್ಯಕ್ರಮದಲ್ಲಿ 403 ತಂಡಗಳು ಹಾಗೂ 806 ಮಂದಿ ಸಿಬಂದಿ ಭಾಗವಹಿಸಲಿದ್ದು ವಿವಿಧ ಚಟುವಟಿಕೆಗಳನ್ನು ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.