ಒಬ್ಬರ ರಕ್ತದಿಂದ ನಾಲ್ಕು ಜೀವ ಉಳಿಸಬಹುದು’
Team Udayavani, Jun 15, 2019, 6:00 AM IST
ಉಡುಪಿ: ಒಬ್ಬ ವ್ಯಕ್ತಿ ನೀಡಿದ ರಕ್ತದಿಂದ ಕನಿಷ್ಠ ನಾಲ್ಕು ಜೀವವನ್ನು ಉಳಿಸಬಹುದು. ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಯಾವುದೇ ಕೆಟ್ಟ ಪರಿಣಾಮವಾಗುವುದಿಲ್ಲಎಂದು ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ| ಮಧುಸೂದನ್ ನಾಯಕ್ ಹೇಳಿದರು.
ಅವರು ಶುಕ್ರವಾರ ಜಿಲ್ಲಾಡಳಿತ, ಜಿ.ಪಂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಯಲಕ್ಷ್ಮೀ ಸಿಲ್ಕ್ಸ್ ಜಯಲಕ್ಷ್ಮೀ ಆರ್ಕೇಡ್ ಉದ್ಯಾವರ, ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರ ಜ್ಞಾನ ಸಾಧನಾ ಉದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯಾವರದ ಜ್ಞಾನ ಸಾಧನಾ ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆದ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ದಾನಿಗಳು ನೀಡಿದ ರಕ್ತವನ್ನು 35 ದಿನಗಳ ಕಾಲ ಮಾತ್ರ ಸಂಗ್ರಹಿಸಿಡಬಹುದು. ಪ್ಲೇಟ್ಲೆಟ್ಸ್ 5 ದಿನಗಳ ಕಾಲ ಮಾತ್ರ ಇಡಬಹುದು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಉದ್ಯಾವರ ಜ್ಞಾನ ಸಾಧನ ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಂಶುಪಾಲ ಜೋನ್ ಎಂ. ಡಿ’ಸೋಜಾ ಮಾತನಾಡಿ, ರಕ್ತದಾನದಿಂದ ಒಂದು ಜೀವ ಉಳಿಸುವುದೇ ನಾವು ಮಾಡುವ ಶ್ರೇಷ್ಠದಾನ ಎಂದರು.
ವಾಹನ ಚಾಲನೆ: ಜಾಗರೂಕತೆ ಅಗತ್ಯ
ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮ್‌ರಾವ್ ಮಾತನಾಡಿ ಆಕ್ಸಿಡೆಂಟ್ ಆದಂತಹ ಸಂದರ್ಭ ಅತೀ ಹೆಚ್ಚಾಗಿ ರಕ್ತದ ಅವಶ್ಯಕತೆ ಇರುವುದು. ಆದ್ದರಿಂದ ವಾಹನ ಚಲಾಯಿಸುವಾಗ ಯುವ ಜನತೆ ಜಾಗರೂಕರಾಗಿರಬೇಕು ಎಂದು ಹೇಳಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು ಎಸ್.ವಿ ರಕ್ತದ ಮಹತ್ವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿಗಳು ರಕ್ತದಾನ ಮಾಡಿ ಜೀವ ಉಳಿಸಲು ಸಹಕಾರಿಯಾಗಬೇಕು ಎಂದು ರಕ್ತದಾನಿ ಹೆಬ್ರಿಯ ನರಸಿಂಹ ನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದರು.
ರಕ್ತದಾನಿಗಳಿಗೆ ಸಮ್ಮಾನದ ಅಗತ್ಯವಿಲ್ಲ, ರಕ್ತದಾನದಿಂದ ಒಂದು ಜೀವ ಉಳಿದರೆ ಅದೇ ರಕ್ತದಾನಿಗೆ ಸನ್ಮಾನ ಎಂದು ರಕ್ತದಾನಿ ಶೈಲೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ 6 ಮಂದಿ ದಾನಿಗಳನ್ನು ಸನ್ಮಾನಿಸಲಾಯಿತು. ರಕ್ತದಾನ ಮತ್ತು ಸುರಕ್ಷಿತ ರಕ್ತ ವಿಷಯದ ಕುರಿತು ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ| ವೀಣಾ ಕುಮಾರಿ ವಿಶೇಷ ಉಪನ್ಯಾಸ ಮಾಡಿದರು.
ಉದ್ಯಾವರ ಜ್ಞಾನ ಸಾಧನಾ ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದ ಜೆಟಿಒ ನಾಗೇಂದ್ರ ಕುಮಾರ್ ಸ್ವಾಗತಿಸಿದರು. ಜಿಲ್ಲಾ ಮೇಲ್ವಿಚಾರಕ ಮಹಾಬಲೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.