ಮಲ್ಪೆಯಲ್ಲಿ ಉಚಿತ ಪೊಲೀಸ್ ತರಬೇತಿ ಶಿಬಿರ
Team Udayavani, Jun 28, 2019, 10:45 AM IST
ಮಲ್ಪೆ: ಕರಾವಳಿ ಭಾಗದ ಯುವಕ, ಯುವತಿಯರು ಪೊಲೀಸ್ ಇಲಾಖೆಗೆ ಸೇರ್ಪಡೆ ಯಾಗಲು ಅಗತ್ಯವಿರುವ ದೈಹಿಕ ಮತ್ತು ಲಿಖೀತ ಪರೀಕ್ಷೆಗೆ ತರಬೇತಿ ನೀಡುವ ಉಚಿತ ತರಬೇತಿ ಶಿಬಿರ ವನ್ನು ಮಲ್ಪೆಯಲ್ಲಿಯೇ ಆಯೋಜಿ ಸಲಾಗುತ್ತದೆ ಎಂದು ಕೆಎಸ್‌ಆರ್‌ಪಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಭಾಸ್ಕರ ರಾವ್ ಹೇಳಿದರು.
ಗುರುವಾರ ಮಲ್ಪೆ ಏಳೂರು ಮೊಗವೀರ ಭವನದ ಮತ್ಸನಿಧಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಕರಾವಳಿ ಕಾವಲು ಪಡೆ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ ವತಿ ಯಿಂದ ಆಯೋಜಿಸಲಾಗಿದ್ದ ಪೊಲೀಸ್ ನೇಮಕಾತಿ ವಿಶೇಷ ಕಾರ್ಯಾಗಾರ ದಲ್ಲಿ ಅವರು ಮಾತನಾಡಿದರು.
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ, ಕರಾವಳಿ ಪೊಲೀಸ್ ಪಡೆ, ಕೆಎಸ್‌ಆರ್‌ಪಿ ವತಿಯಿಂದ 5-6 ದಿನಗಳ ಈ ಶಿಬಿರವನ್ನು ಏರ್ಪಡಿಸಲಾಗುವುದು ಎಂದರು.
ಔರಾದಕರ್ ಸಮಿತಿಯ ಶಿಫಾರಸುಗಳು ಜಾರಿಗೆ ಬಂದ ಅನಂತರ ವೇತನ ಸೌಲಭ್ಯ ಉತ್ತಮವಾಗಲಿದ್ದು, ಸಿಬಂದಿ ಮತ್ತು ಕುಟುಂಬ ವರ್ಗಕ್ಕೆ ಉಚಿತ ಆರೋಗ್ಯ ಯೋಜನೆ, ಕ್ಯಾಂಟೀನ್ ಸೌಲಭ್ಯ, ಕ್ವಾಟ್ರಸ್ ಸೌಲಭ್ಯ ಕೂಡ ದೊರೆಯಲಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಕೆಎಸ್‌ಆರ್‌ಪಿ ಕಮಾಂಡೆಂಟ್ ಕೃಷ್ಣಪ್ಪ, ಉಡುಪಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಪಾರ್ಶ್ವನಾಥ್, ಮಂಗಳೂರು ಕೆಎಸ್‌ಆರ್‌ಪಿ ಕಮಾಂಡೆಂಟ್ ಜನಾರ್ದನ್, ಇಂಟೆಲಿಜೆಂಟ್ ವಿಭಾಗದ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಉಡುಪಿ ಡಿವೈಎಸ್ಪಿ ಜೈಶಂಕರ್ ಉಪಸ್ಥಿತರಿದ್ದರು.
ಪೊಲೀಸ್ ಸೇವೆಯತ್ತ ಆಸಕ್ತಿ ವಹಿಸಿ
ರಾಜ್ಯದಲ್ಲಿ ಒಟ್ಟು 27,000 ಪೊಲೀಸ್ ಹುದ್ದೆಗಳು ಖಾಲಿ ಇದ್ದು, ಕರಾವಳಿ ಭಾಗದಲ್ಲಿ 1,624 ಪೊಲೀಸ್ ಕಾನ್‌ಸ್ಟೆಬಲ್, 110 ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿ ಇವೆ. ಕರಾವಳಿ ಭಾಗದಲ್ಲಿ ಪೊಲೀಸ್ ಇಲಾಖೆಗೆ ಸೇರಬಯಸುವ ಜನರ ಸಂಖ್ಯೆ ಇತ್ತೀಚಿನ 4-5 ವರ್ಷಗಳಲ್ಲಿ ತೀರ ಇಳಿಮುಖಗೊಂಡಿದೆ. ಈ ಭಾಗದ ಯುವಕ ಯುವತಿಯರು, ಇಲಾಖೆಯ ಬಗ್ಗೆ ನಿರಾಸಕ್ತಿ ತೋರುತ್ತಿದ್ದಾರೆ. ಅದು ಸಲ್ಲದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಳ್ಳಲು ಮನಮಾಡಬೇಕು ಎಂದು ಎಡಿಜಿಪಿ ಭಾಸ್ಕರ ರಾವ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.