“ಮೀನುಮಾರುಕಟ್ಟೆಗಳಲ್ಲಿ ತಾಜಾ ಮೀನು ಲಭ್ಯ: ಆತಂಕ ಬೇಡ’
Team Udayavani, Jun 29, 2018, 6:30 AM IST
ಮಲ್ಪೆ: ಕರಾವಳಿ ಜಿಲ್ಲೆಗಳಲ್ಲಿ ವಿವಿಧ ಮೀನುಗಾರಿಕಾ ಬಂದರುಗಳಿಂದ ನೇರವಾಗಿ ಮೀನು ಮಾರುಕಟ್ಟೆಗಳಿಗೆ ಅತೀ ಶೀಘ್ರವಾಗಿ ತಂದು ಮಾರಾಟ ಮಾಡುತ್ತಿರುವುದರಿಂದ ಯಾವುದೇ ರಾಸಾಯನಿಕ ಬಳಕೆಯ ಅಗತ್ಯತೆ ಇರುವುದಿಲ್ಲ.
ಮಳೆಗಾಲದಲ್ಲಿ ಇದೀಗ ಹೆಚ್ಚಿನ ಎಲ್ಲ ಮೀನು ಮಾರುಕಟ್ಟೆಗಳಲ್ಲಿ ತಾಜಾ ಮೀನು ದೊರೆಯುತ್ತಿರುವುದರಿಂದ ಗ್ರಾಹಕರಿಗೆ ಯಾವುದೇ ಸಂದೇಹ ಬೇಡ ಎಂದು ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್. ಸಾಲ್ಯಾನ್ ತಿಳಿಸಿದ್ದಾರೆ.
ಕರಾವಳಿಯ ಎಲ್ಲಾ ಮೀನು ಮಾರುಕಟ್ಟೆಯಲ್ಲಿ ಮಹಿಳೆಯರು ಸಾಂಪ್ರಾದಾಯಿಕ ರೀತಿಯಲ್ಲಿ ಮೀನು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದು, ಎಲ್ಲಾ ಮೀನು ಮಾರುಕಟ್ಟೆಗಳಲ್ಲಿ ತಾಜಾ ಮೀನು ವ್ಯಾಪಾರ ಸರಾಗವಾಗಿ ನಡೆಯುತ್ತಿದೆ. ಅನಾದಿಕಾಲದಿಂದಲೂ ಮೀನು ಮಾರುಕಟ್ಟೆಗಳಲ್ಲಿ ಸಾಂಪ್ರಾದಾಯಿಕ ಪದ್ಧತಿಯಲ್ಲಿ ಮಹಿಳೆಯರು ಮೀನು ವ್ಯಾಪಾರದಲ್ಲಿ ತೊಡಗಿಸಿಕೊಂಡಿರುವುದರಿಂದ ಯಾವುದೇ ರಾಸಾಯನಿಕ ಬಳಸಿದ ಮೀನುಗಳಿಗೆ ಉತ್ತೇಜನ ನೀಡುತ್ತಿಲ್ಲ. ಹಾಗಾಗಿ ಗ್ರಾಹಕರು ಮೀನುಮಾರುಕಟ್ಟೆಗಳ ಮಹಿಳೆಯರಲ್ಲಿ ದೊರೆಯುವ ತಾಜಾ ಮೀನಿನ ಬಗ್ಗೆ ಭರವಸೆ ಹೊಂದಿದ್ದಾರೆ.
ಕರಾವಳಿಯ ಬೇರೆ ಬೇರೆ ಕಡೆಗಳಲ್ಲಿ ಮೀನಿನ ಅಂಗಡಿಗಳಲ್ಲಿ ಹಾಗೂ ವಿವಿಧ ಮಾಲ್‌ಗಳಲ್ಲಿ ಮಾರಾಟ ಮಾಡಲಾಗುತ್ತಿರುವ ಶೀತಲೀಕೃತ ಮೀನುಗಳನ್ನು ಖರೀದಿಸುವ ಬದಲು ಮೀನು ಮಾರುಕಟ್ಟೆಗಳಲ್ಲಿ ಪ್ರತಿದಿನ ಶೇಖರಣೆ ಮಾಡುವ ಮೀನಿಗೆ ಹೆಚ್ಚಿನ ಬೇಡಿಕೆಯಿದೆ.
ಸೂಕ್ತ ಕ್ರಮ ಕೈಗೊಳ್ಳಬೇಕು
ಮೀನಿನ ಅಂಗಡಿಗಳಲ್ಲಿ ಕೆಲವು ದಿನಗಳ ಕಾಲ ಶೀತಲೀಕರಣ ಮಾಡಿ ಕಾಪಿಡುವ ಮೀನುಗಳ ಬಗ್ಗೆ ಗ್ರಾಹಕರ ಎಚ್ಚರ ವಹಿಸಬೇಕು. ಕರಾವಳಿಯ ಮೀನು ಮಾರಾಟಗಾರರ ಮಹಿಳೆಯರು ಪ್ರಾರಂಭದಿಂದಲೂ ಶೀತಲಿಕೃತ ಮೀನಿನ ಅಂಗಡಿಗಳನ್ನು ವಿರೋಧಿಸುತ್ತಾ ಬಂದಿರುವುದು ಇದೇ ಕಾರಣಕ್ಕಾಗಿ. ಈಗಲಾದರೂ ಸಂಬಂಧಪಟ್ಟ ಜಿಲ್ಲಾಡಳಿತ ಇಂತಹ ಮೀನಿನಂಗಡಿಗಳ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಮತ್ತು ಅನಧೀಕೃತವಾಗಿ ಕಾರ್ಯಾಚರಿಸುತ್ತಿರುವ ಶೀತಲೀಕರಣ ಮೀನಿನಂಗಡಿಗಳನ್ನು ನಿಷೇಧಿಸಬೇಕು. ಗ್ರಾಹಕರು ಕೂಡಾ ವಿವಿಧ ರಾಸಾಯನಿಕಗಳನ್ನು ಬಳಕೆ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಬೇಕು.
ಬೇರೆ ಬೇರೆ ಮೀನಿನ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಹೆಚ್ಚಿದ್ದು, ನಮ್ಮ ಎಲ್ಲ ಮೀನು ಮಾರುಕಟ್ಟೆಗಳಲ್ಲಿ ಸಮುದ್ರದಿಂದ ತಂದಿರುವ ಮತ್ತು ಹೊಳೆಯಿಂದ ಹಿಡಿದ ತಾಜಾ ಮೀನು ಮಾರಾಟ ಮಾಡಲಾಗುತ್ತದೆ ಎಂದು ಬೇಬಿ ಸಾಲ್ಯಾನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.