ಎಫ್‌ಎಸ್‌ಎಲ್ ಇಂಡಿಯಾ ಕಚೇರಿ: ಸಚಿವ ಮಧ್ವರಾಜ್ ಭೇಟಿ; ಸಂವಾದ
Team Udayavani, Sep 11, 2017, 7:40 AM IST
ಕುಂದಾಪುರ: ತಲ್ಲೂರಿನ ಶೆಟ್ಟರಕಟ್ಟೆಯಲ್ಲಿರುವ ಎಫ್‌ಎಸ್‌ಎಲ್ ಇಂಡಿಯಾ ಆಡಳಿತ ಕಚೇರಿಗೆ ಯುವಜನ, ಕ್ರೀಡಾ, ಮೀನುಗಾರಿಕಾ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಸೆ. 7ರಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ರಾಖೇಶ್ ಸೋನ್ಸ್ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ವಿವರಿಸಿ, ವಿವಿಧ ಕಾರ್ಯಕ್ರಮಗಳಾದ ಕಡಲಾಮೆ ಸಂರಕ್ಷಣೆ, ಅಂತಾರಾಷ್ಟ್ರಿಯ ಮಟ್ಟದಲ್ಲಿ ಯುವಕರ ಕಾರ್ಯಕ್ರಮ, ಪರಿಸರ ಶಿಕ್ಷಣ ಹಾಗೂ ಭಾರತದ ಇತರ ಭಾಗಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಎಫ್‌ಎಸ್‌ಎಲ್ ಸಂಸ್ಥೆಯು ಅಳವಡಿಸಿಕೊಂಡಿರುವುದನ್ನು ಸಚಿವರು ಪ್ರಶಂಶಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ವಿವಿಧ ದೇಶಗಳ 40 ಅಭ್ಯರ್ಥಿಗಳ ಅನಿಸಿಕೆಯನ್ನು ಸಚಿವರು ಆಸಕ್ತಿಯಿಂದ ಆಲಿಸಿ, ಸಂವಾದ ನಡೆಸಿದರು.
ವಿವಿಧ ದೇಶದಿಂದ ಬಂದ ಯುವಕರು ಭಾರತದ ಸಂಸ್ಕೃತಿ, ಆಚಾರ-ವಿಚಾರ ಕಲಿಯುವ ಬಗ್ಗೆ ಮತ್ತು ಅದನ್ನು ತಿಳಿದುಕೊಳ್ಳುವ ಬಗ್ಗೆ ಇರುವ ಆಸಕ್ತಿಯನ್ನು ಸಂಸ್ಥೆಯು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.