ನಗರದಲ್ಲಿ ಎಳನೀರಿಗೆ ಫ‌ುಲ್‌ ಡಿಮ್ಯಾಂಡ್‌

ಮಾಲ್‌ಗ‌ಳಲ್ಲಿ 20 ರೂ.ಗೆ ಮಾರಾಟ!

Team Udayavani, Jan 24, 2020, 5:47 AM IST

231UDKC1

ಉಡುಪಿ: ಬೇಸಗೆ ಇನ್ನಷ್ಟೇ ಶುರುವಾಗಬೇಕಿದ್ದರೂ ಈಗಾಗಲೇ ಬಿಸಿಲು ಧಗಧಗಿಸುತ್ತಿದೆ. ಇದನ್ನು ಮನಗಂಡು ಬೀದಿ ಬದಿ ವ್ಯಾಪಾರಿಗಳಿಗೆ ಸಡ್ಡು ಹೊಡೆವಂತೆ ನಗರದ ಮಾಲ್‌ಗ‌ಳು ಎಳನೀರನ್ನು ಕಡಿಮೆ ದರಕ್ಕೆ ಮಾರಾಟ ಮಾಡುತ್ತಿವೆ. ಮಾರಾಟವೂ ಜೋರಾಗಿದೆ.

ಕೇವಲ 20ರೂ.!
ಚಳಿಗಾಲದಲ್ಲೂ ಉಡುಪಿ ನಗರದಲ್ಲಿ 36 ಡಿಗ್ರಿ ಉಷ್ಣಾಂಶವಿದ್ದು, ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಎಳನೀರಿನ ಮೂಲಕ ಮಾಲ್‌ಗ‌ಳು ಜನರನ್ನು ಆಕರ್ಷಿಸುತ್ತಿವೆ. ಒಂದಕ್ಕೆ 20 ರೂ.ಗಳಂತೆ ಮಾರಾಟವಾಗುತ್ತಿದ್ದು, ಸಾಫ್ಟ್ ಡ್ರಿಂಕ್ಸ್‌ಗಳಿಗೆ ಪೈಪೋಟಿ ಒಡ್ಡಿವೆ. ನಗರದ ಇತರ ಕಡೆಗಳಲ್ಲಿ ಎಳನೀರು ದರ 35 ರೂ. ಆಗಿದೆ.

ಉತ್ತಮ ಪ್ರತಿಕ್ರಿಯೆ
ಜನರಿಂದ ಉತ್ತಮ ಬೇಡಿಕೆ ಕಂಡುಬಂದಿದೆ. ಆರಂಭದಲ್ಲಿ ಎಳನೀರನ್ನು ಸ್ಥಳದಲ್ಲೆ ಕುಡಿಯಲು ನೀಡಲಾಗುತ್ತಿತ್ತು ಈಗ ಮನೆಗೂ ಕೊಂಡೊಯ್ಯಲು ಅವಕಾಶವಿದೆ. ಯಾವುದೇ ಲಾಭಾಂಶವಿಲ್ಲದೆ ನೇರ ಬೆಲೆಯಲ್ಲಿ ಗ್ರಾಹಕರಿಗೆ ಕೊಡಲಾಗುತ್ತಿದೆ. ಕಳೆದ 15 ದಿನದಿಂದ ಹೀಗೆ ವ್ಯಾಪಾರ ಮಾಡುತ್ತಿರುವುದಾಗಿ ಮಾಲ್‌ ಒಂದರ ವ್ಯವಸ್ಥಾಪಕರು ಹೇಳಿದ್ದಾರೆ.

ಮಂಡ್ಯ ಭಾಗದಿಂದ ಪೂರೈಕೆ
ಮಂಡ್ಯ, ಮದ್ದೂರು ಹೊಳೆನರಸೀಪುರ, ಮಳವಳ್ಳಿ ಭಾಗಗಳಿಂದ ಎಳನೀರನ್ನು ತರಿಸಿ ಮಾಲ್‌ಗ‌ಳಿಗೆ ಪೂರೈಸಲಾಗುತ್ತಿದೆ. ಮುಂಬಯಿ, ಹೊಸದಿಲ್ಲಿ, ರಾಜಸ್ತಾನ, ಪುಣೆ, ಗುಜರಾತ್‌, ಕೊಚ್ಚಿ, ಮೊದಲಾದ ಭಾಗಗಳಿಗೂ ಪೂರೈಕೆ ಮಾಡಲಾಗುತ್ತಿದೆ.

ಆರೋಗ್ಯಕಾರಿ
ಮಾಲ್‌ಗ‌ಳಲ್ಲಿ ಅಗ್ಗದ ಬೆಲೆಯಲ್ಲಿ ಎಳನೀರು ಲಭ್ಯವಾಗುತ್ತಿದೆ. ಮೂರು ದಿನಗಳಿಂದ ಖರೀದಿಸುತ್ತಿದ್ದೇನೆ. ಆರೋಗ್ಯದ ದೃಷ್ಟಿಯಿಂದ ಎಳನೀರು ಸೇವನೆ ಉತ್ತಮವಾಗಿದ್ದು, ಕಡಿಮೆ ದರಕ್ಕೆ ಮಾರಾಟ ಮಾಡುತ್ತಿರುವುದು ಉತ್ತಮ ಬೆಳವಣಿಗೆ.
-ಕೇಶವ್‌ ಕಾಮತ್‌ ,
ಸ್ಥಳೀಯರು

ಬೇಡಿಕೆ ಹೆಚ್ಚಳ
19-20 ರೂ.ಗೆ ಉಡುಪಿ ಮಂಗಳೂರು ಪುತ್ತೂರು ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಈ ಎಳನೀರನ್ನು ಪೂರೈಕೆ ಮಾಡಲಾಗುತ್ತಿದೆ. ಈಗ ಬೇಡಿಕೆಯೂ ಹೆಚ್ಚಿದೆ. ಹೋಲ್‌ಸೇಲ್‌ ಮೂಲಕ ಪೂರೈಕೆ ಮಾಡುವ ಕಾರಣ ನಮಗೆ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟಾಗುವುದಿಲ್ಲ.
-ಸತೀಶ್‌, ಎಳನೀರು ಪೂರೈಕೆದಾರರು ಕೆಆರ್‌ಪೇಟೆ

ಅತ್ಯಧಿಕ ಸಂಖ್ಯೆಯಲ್ಲಿ ಮಾರಾಟ
ಒಂದು ಲೋಡ್‌ ಲಾರಿಯಲ್ಲಿ 5 ಸಾವಿರದಷ್ಟು ಎಳನೀರುಗಳಿರುತ್ತವೆ. ನಗರದ ವಿವಿಧ ಮಾಲ್‌ಗ‌ಳಿಗೆ ಒಂದು ವಾರದಿಂದ 2ರಿಂದ3 ಲೋಡ್‌ಗಳಷ್ಟು ಎಳನೀರು ಸರಬರಾಜು ಆಗಿವೆ. ಮಾಲ್‌ಗ‌ಳಲ್ಲಿ ದಿನವೊಂದಕ್ಕೆ 500ರಿಂದ 800ರಷ್ಟು ಎಳನೀರು ಬಿಕರಿಯಾಗುತ್ತವೆ. ಕೆಲವರು 5-10 ಎಳನೀರು ಕೊಂಡೊಯ್ಯುವುದೂ ಇದೆ.

ಟಾಪ್ ನ್ಯೂಸ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.