ಗೋಪಾಲ ಭಂಡಾರಿ ಅಂತ್ಯಕ್ರಿಯೆ
Team Udayavani, Jul 6, 2019, 9:56 AM IST
ಹೆಬ್ರಿ: ಸರಳ ಸಜ್ಜನಿಕೆಯ ರಾಜಕಾರಣಿ ಕಾರ್ಕಳದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ಶುಕ್ರವಾರ ಅಪರಾಹ್ನ ಹುಟ್ಟೂರು ಹೆಬ್ರಿಯ ನಿವಾಸದ ಬಳಿ ನಡೆಯಿತು.
ಪಾರ್ಥಿವ ಶರೀರವನ್ನು ಬೆಳಗ್ಗೆ 10ಕ್ಕೆ ಮಂಗಳೂರಿನಿಂದ ಕಾರ್ಕಳಕ್ಕೆ ತಂದು 12 ಗಂಟೆ ತನಕ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಯಿತು. ಬಳಿಕ ಕಾರ್ಕಳದಿಂದ ಹೆಬ್ರಿಗೆ ಕೊಂಡೊಯ್ಯಲಾಯಿತು. ದಾರಿಯುದ್ದಕ್ಕೂ ಸಹಸ್ರಾರು ಅಭಿಮಾನಿಗಳು ದರ್ಶನ ಪಡೆದರು.
ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಮಧ್ಯಾಹ್ನ 1ರಿಂದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಯಿತು. ಸಹಸ್ರ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿ ಗಳು ಗೊಂದಲ ಇಲ್ಲದೆ ಅಂತಿಮ ಗೌರವ ಸಲ್ಲಿಸಿದರು.
ಕೇಂದ್ರದ ಮಾಜಿ ಸಚಿವ ಡಾ| ಎಂ. ವೀರಪ್ಪ ಮೊಲಿ, ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ, ಶಾಸಕ ಸುನಿಲ್ ಕುಮಾರ್, ಪ್ರತಾಪ್‌ಚಂದ್ರ ಶೆಟ್ಟಿ, ಪ್ರಮೋದ್ ಮಧ್ವರಾಜ್, ಗೋಪಾಲ ಪೂಜಾರಿ, ವಿನಯಕುಮಾರ್ ಸೊರಕೆ, ಮೃತರ ಪತ್ನಿ ಪ್ರಕಾಶಿನಿ, ಪುತ್ರರಾದ ಸುದೀಪ್, ಪ್ರದೀಪ್, ದೀಪಾ ಮೊದಲಾದವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.
ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು. ತಹಶೀಲ್ದಾರ್ ಮಹೇಶ್ಚಂದ್ರ, ಪ್ರಾಂಶುಪಾಲ ಮಂಜುನಾಥ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.