ಜಿ. ಜಗದೀಶ್ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ
Team Udayavani, Aug 19, 2019, 9:09 PM IST
ಉಡುಪಿ: ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಕೋಲಾರ ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ. ಜಗದೀಶ್ ಅವರಿಗೆ ವರ್ಗಾವಣೆ ಯಾಗಿದೆ. ಪ್ರಸ್ತುತ ಇರುವ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರಿಗೆ ವರ್ಗವಾಗಿದ್ದು ಹುದ್ದೆ ಇನ್ನಷ್ಟೇ ನಿಗದಿಯಾಗಬೇಕಾಗಿದೆ.
ಜಗದೀಶ್ ಕೆಎಎಸ್ ಅಧಿಕಾರಿಯಾಗಿ ಐಎಎಸ್ ಶ್ರೇಣಿಗೆ ಭಡ್ತಿಗೊಂಡವರು. ಒಟ್ಟು 13 ವರ್ಷಗಳ ಸೇವೆ ಯಲ್ಲಿ ಅವರು ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಪೊನ್ನುರಾಜ್, ಹೇಮಲತಾ ಅವರ ಅವಧಿಯಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಅನಂತರ ಸವಣೂರು, ಶಿರಸಿಯಲ್ಲಿ ಸಹಾಯಕ ಕಮಿಷನರ್, ಹಾವೇರಿಯಲ್ಲಿ ಅಪರ ಜಿಲ್ಲಾಧಿಕಾರಿ, ನಗರಾಭಿವೃದ್ಧಿ ಇಲಾಖೆಯಲ್ಲಿ ಬೆಂಗಳೂರಿನಲ್ಲಿ ಜಂಟಿ ಕಾರ್ಯದರ್ಶಿ, ಮೈಸೂರು ಮಹಾ ನಗರಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.ಈಗ ಮೊದಲ ಬಾರಿ ಡಿಸಿ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಜಗದೀಶ್ ಮೂಲತಃ ಸೊರಬದವರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.