ಜನತೆಯ ಪ್ರೀತಿ, ಆಶೀರ್ವಾದ ಮರೆಯಲಾರೆ: ನಿರ್ಗಮನ ಜಿಲ್ಲಾಧಿಕಾರಿ ಜಗದೀಶ್
Team Udayavani, Sep 1, 2021, 6:51 AM IST
ಉಡುಪಿ: ಜಿಲ್ಲೆಯ ಜನತೆ ತೋರಿರುವ ಅಭಿಮಾನ, ಪ್ರೀತಿ ಎಂದಿಗೂ ಮರೆಯಲು ಸಾಧ್ಯವಿಲ್ಲ. ಇಲ್ಲಿಯ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯ ಉನ್ನತ ಹುದ್ದೆಗೇರಲು ಸಾಧ್ಯವಾಗಿದೆ ಎಂದು ನಿರ್ಗಮನ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ರಜತಾದ್ರಿಯ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೊರೊನಾ ನಿಯಂತ್ರಣಕ್ಕೆ ಹೆಚ್ಚಿನ ಸಮಯ ಮೀಸಲಿಟ್ಟ ಕಾರಣ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಲಿಲ್ಲ ಎಂಬ ಕೊರಗು ಇದೆ. ಆದರೆ ಅಗತ್ಯ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿಂದ ಅತೀ ಕಡಿಮೆ ಸಾವು ಸಂಭವಿಸಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಜಿಲ್ಲೆಗೆ ದೊರೆತಿದೆ ಎಂದರು.
ಹಲವು ಯೋಜನೆಗಳ ಪ್ರಸ್ತಾವನೆ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ದಿಪಡಿಸುವ ಅನೇಕ ಯೋಜನೆಗಳನ್ನು ರೂಪಿಸಿ ಅವುಗಳ ಪ್ರಸ್ತಾವನೆ
ಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಕಂದಾಯ ಸೇವೆಗಳನ್ನು ಒದಗಿಸುವಲ್ಲಿ ಜಿಲ್ಲೆ ಇಂದಿಗೂ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಅಲ್ಲದೇ ಸಂಸದರು ಮತ್ತು ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಿಸಿ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಸಹ ಪ್ರಥಮ ಸ್ಥಾನದಲ್ಲಿದೆ. ಕೋವಿಡ್ ಲಸಿಕೆ ನೀಡುವಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದರು.
ಉತ್ತಮ ಸಹಕಾರ :
ಶಾಸಕ ರಘುಪತಿ ಭಟ್ ಮಾತನಾಡಿ, ಮರಳು ವಿತರಣೆಯನ್ನು ಅಧಿಕಾರಿ ಸ್ವೀಕರಿಸಿದ ಒಂದೂವರೆ ತಿಂಗಳಿನಲ್ಲಿಯೇ ಕಾನೂನು ಚೌಕಟ್ಟಿನೊಳಗೆ ಪರಿಹಾರ ಮಾಡಿದ ಡಿಸಿ ಜಿ.ಜಗದೀಶ್, ಕೋವಿಡ್ ಸಮಸ್ಯೆಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಿದ್ದಾರೆ. ಮಾತ್ರವಲ್ಲದೇ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳಿಗೆ ಉತ್ತಮ ಸಹಕಾರ ನೀಡಿದ್ದಾರೆ ಎಂದರು.
ಜಿ.ಜಗದೀಶ್ ಅವರ ಪತ್ನಿ ಸೌಮ್ಯಾ, ಮಕ್ಕಳಾದ ಅನುಷ್ಕಾ ಮತ್ತು ಅಭಿಘ್ನ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಕರಾವಳಿ ಕಾವಲು ಪಡೆ ಎಸ್ಪಿ ನಿಖೀಲ್, ಕುಂದಾಪುರ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು. ನೂತನ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಸೆ. 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.