ಹೈನುಗಾರಿಕೆಯಲ್ಲಿ ಯಶಸ್ವಿಯಾದ 66ರ ಹರೆಯದ ಗಣಪ ಪೂಜಾರಿ
ಸಾವಯವ ಕೃಷಿಕಾಯಕದಲ್ಲಿ ತಂದೆಯೊಂದಿಗೆ ಕೈಜೋಡಿಸಿದ ಮಕ್ಕಳು
Team Udayavani, Dec 24, 2019, 8:00 AM IST
ಹೆಸರು: ಗಣಪ ಪೂಜಾರಿ
ಏನೇನು ಕೃಷಿ: ಅಡಿಕೆ, ಭತ್ತ, ತೆಂಗು, ಬಾಳೆ, ಕಾಳುಮೆಣಸು
ಎಷ್ಟು ವರ್ಷ : 66
ಕೃಷಿ ಪ್ರದೇಶ : ಸುಮಾರು 3.5 ಎಕ್ರೆ
ನಾವು ಅದೆಷ್ಟು ಆಧುನಿಕಗೊಂಡರೂ ಉಣ್ಣುವ ಅನ್ನವನ್ನು ಸೃಷ್ಟಿಸಲಾರೆವು; ಆದ್ದರಿಂದಲೇ ಭೂಮಿಯ ಜತೆಗೆ ಒಡನಾಡುವ ಕೃಷಿಗೆ ಮಹತ್ವದ ಸ್ಥಾನ. ಇದೇ ಹಿನ್ನೆಲೆಯಲ್ಲಿ ಉದಯವಾಣಿಯು ಕಿಸಾನ್ ದಿನಾಚರಣೆಯ ಸಂದರ್ಭ ರೈತರ ಸಾಧನೆಯ ಚಿತ್ರಣ ನೀಡುವ “ಕೃಷಿ ಕಥನ’ವನ್ನು ಆರಂಭಿಸಿದೆ. ಈ ಹೊಸ ಸರಣಿಯು ಇನ್ನಷ್ಟು ಮಂದಿಗೆ ಪ್ರೇರಣೆಯಾಗಲೆಂದು ಸರಕಾರದಿಂದ ಪ್ರಶಸ್ತಿ ಪುರಸ್ಕಾರಗಳಿಂದ ಗುರುತಿಸಲ್ಪಟ್ಟ ರೈತರನ್ನು ಪರಿಚಯಿಸುವ ಪ್ರಯತ್ನ.
ಹೆಬ್ರಿ: ಚಾರ ಮಣಿಬಚ್ಚಲು ನಿವಾಸಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಉತ್ತಮ ಹೈನುಗಾರ ಪ್ರಶಸ್ತಿ ಪಡೆದ ಪ್ರಗತಿಪರ ಕೃಷಿಕ ಗಣಪ ಪೂಜಾರಿ ಬಾಲ್ಯದಿಂದಲೂ ಕೃಷಿಯಲ್ಲಿ ತೊಡಗಿಸಿಕೊಂಡು ಹೈನುಗಾರಿಕೆಯಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ.
ತನ್ನ 66ರ ಹರೆಯದಲ್ಲಿ ನಿರಂತರವಾಗಿ ತನ್ನ ಎರಡು ಗಂಡು ಮಕ್ಕಳೊಂದಿಗೆ ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಂಡು ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿದ್ದು, ಪರಿಶ್ರಮವಿದ್ದರೆ ಯಶಸ್ಸು ಕಂಡಿತ ಎನ್ನುವುದಕ್ಕೆ ಗಣಪ ಪೂಜಾರಿ ಉದಾಹರಣೆಯಾಗಿದ್ದಾರೆ. ಸುಮಾರು 3.5 ಎಕ್ರೆ ಜಾಗದಲ್ಲಿ ಮುಖ್ಯವಾಗಿ 2,500 ಅಡಿಕೆ, 1ಎಕ್ರೆ ಜಾಗದಲ್ಲಿ ಭತ್ತ, ತೆಂಗು, ಬಾಳೆ ಹಾಗೂ ಉಪಬೆಳೆಗಳಾದ ಕಾಳುಮೆಣಸು, ಹುಲ್ಲು ಮೊದಲಾದ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ರಾಸಾಯನಿಕ ಬಳಸಿ ಕೃಷಿ ಮಾಡುತ್ತಿರುವಾಗ ಆರ್ಥಿಕವಾಗಿ ನಷ್ಟವನ್ನು ಅನುಭವಿಸುತ್ತಿದ್ದಾಗ ಹೊಳೆದದ್ದು ಸಾವಯವ ಕೃಷಿ. ಹಟ್ಟಿಗೊಬ್ಬರ ಬಳಸಿ ಶೂನ್ಯ ಬಂಡವಾಳದೊಂದಿಗೆ ಸಾವಯವ ಕೃಷಿಯೊಂದಿಗೆ 15 ವರ್ಷಗಳಿಂದ ಕೃಷಿಯಲ್ಲಿ ಯಶಸ್ಸು ಕಂಡಿದ್ದಾರೆ.
ಹೈನುಗಾರಿಕೆ
ಸುಮಾರು 12 ವರ್ಷಗಳಿಂದ ವಿಶಾಲವಾದ ದನದ ಕೊಟ್ಟಿಗೆಯಲ್ಲಿ ಹೈನುಗಾರಿಕೆಯಲ್ಲಿ ಆಧುನಿಕ ಪದ್ಧತಿಯನ್ನು ಅಳವಡಿಸಿಕೊಂಡು 10 ದನಗಳನ್ನು ಸಾಕಿ ದಿನಕ್ಕೆ 125 ಲೀ. ಹಾಲನ್ನು ಡೈರಿಗೆ ನೀಡುತ್ತಿದ್ದಾರೆ.
ಪರ್ಯಾಯ ಮಠಕ್ಕೆ ಬಾಳೆ
ಸುಮಾರು 1 ಎಕ್ರೆ ಜಾಗದಲ್ಲಿ ಯಾವುದೇ ರಾಸಾಯನಿಕ ಬಳಸದೆ ಬೆಳೆದ ಬಾಳೆಯ ಎಲೆಯನ್ನು ಉಡುಪಿ ಪರ್ಯಾಯ ಮಠಕ್ಕೆ ಪೂರೈಕೆ ಮಾಡಲಾಗುತ್ತಿದೆ.
ಲಭಿಸಿದ ಪ್ರಶಸ್ತಿಗಳು
ಆಧುನಿಕ ಪದ್ಧತಿಯನ್ನು ಬಳಸಿಕೊಂಡು ಹೈನುಗಾರಿಕೆಯಲ್ಲಿ ಯಶಸ್ಸು ಕಂಡಿದ್ದು 2017ರಲ್ಲಿ ತಾಲೂಕು ಮಟ್ಟದ ಉತ್ತಮ ಹೈನುಗಾರಿಕೆ ಪ್ರಶಸ್ತಿ ಹಾಗೂ 2018ರಲ್ಲಿ ಜಿಲ್ಲಾಮಟ್ಟದ ಉತ್ತಮ ಹೈನುಗಾರ ಪ್ರಶಸ್ತಿ ಲಭಿಸಿದೆ.
ಯಂತ್ರೋಪಕರಣ ಬಳಕೆ
ಹೈನುಗಾರಿಕೆ ಕೃಷಿಯಲ್ಲಿ ದನದ ಹಟ್ಟಿ ತೊಳೆಯಲು ಹಾಗೂ ಹಾಲು ಕರೆಯಲು ಕಾರ್ಮಿಕರ ಕೊರತೆ ನೀಗಿಸಲು ಯಂತ್ರೋಪಕರಣಗಳ ಮೊರೆ ಹೋಗಿದ್ದಾರೆ. ಅಲ್ಲದೆ ವಿದ್ಯುತ್ ಕೈಕೊಟ್ಟಾಗ ಜನರೇಟರ್ ವ್ಯವಸ್ಥೆ ಕೂಡ ಮಾಡಲಾಗಿದೆ.
ಸಂಶೋಧನೆ
ಸಗಣಿ ನೀರು, ಗೋಮೂತ್ರವನ್ನು ಸ್ಲರಿ ಹೊಂಡದ ಮೂಲಕ ಸಂಸ್ಕರಿಸಿದ ನೀರನ್ನು ತೋಟಗಳಿಗೆ ಬಿಡಲಾಗುತ್ತಿದೆ.
ಸ್ವತಃ ತೊಡಗಬೇಕು
ಕಾರ್ಮಿಕರ ಕೊರತೆ ನೆಪವೊಡ್ಡಿ ಹೆಚ್ಚಿನ ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಆದರೆ ಸ್ವತಃ ನಾವೇ ಕೃಷಿಯಲ್ಲಿ ತೊಡಗಿಸಿಕೊಂಡಾಗ ಯಶಸ್ಸನ್ನು ಕಾಣಲು ಸಾಧ್ಯ. ನನ್ನೊಂದಿಗೆ ನನ್ನ ಮಕ್ಕಳು ಕೃಷಿಯಲ್ಲಿ ತೊಡಗಿಕೊಂಡ ಪರಿಣಾಮ ಇಂದು ಹೈನುಗಾರಿಕೆಯಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಾಗಿದೆ.
-ಗಣಪ ಪೂಜಾರಿ, ಪ್ರಗತಿಪರ ಕೃಷಿಕ, ಚಾರ ಮಣಿಬಚ್ಚಲು
ಹೆಬ್ರಿ ಉದಯಕುಮಾರ್ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.