Gangavathi: ರಸಗೊಬ್ಬರ-ಏಕ ಬೆಳೆ ಪದ್ಧತಿ ಕೈ ಬಿಡಲು ಸಲಹೆ
ಪಿಳ್ಳಿಪೆಸರು, ಸಾಸಿವೆ ಹಾಗೂ ಇನ್ನಿತರೆ ಬೆಳೆಗಳನ್ನು ಬೆಳೆದು ಬೆಳೆ ಪರಿವರ್ತನೆ ಪದ್ಧತಿ ಅನುಸರಿಸಬೇಕು.
Team Udayavani, Nov 29, 2023, 6:15 PM IST
ಗಂಗಾವತಿ: ಭತ್ತ ಏಕಬೆಳೆ ಪದ್ಧತಿ ಹಾಗೂ ಯಥೇಚ್ಛವಾಗಿ ರಾಸಾಯನಿಕಗಳನ್ನು ಬಳಸುವು ದರಿಂದ ಮಣ್ಣಿನ ಆರೋಗ್ಯ ಹಾಳಾಗುತ್ತಿದ್ದು, ರಾಸಾಯನಿಕಗಳನ್ನು ಕಡಿಮೆ ಮಾಡಿ ಸಾವಯವ ಗೊಬ್ಬರ ಹೆಚ್ಚಾಗಿ ಬಳಸಬೇಕೆಂದು ಕೃಷಿ ಇಲಾಖೆಯ ಅಧಿಕಾರಿ ಪ್ರಕಾಶ ಹೇಳಿದರು.
ಅವರು ತಾಲೂಕಿನ ಮಲ್ಲಾಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರದ ವತಿಯಿಂದ ಆತ್ಮ ಯೋಜನೆ ಅಡಿಯಲ್ಲಿ ರೈತರಿಗೆ ಬೇಸಿಗೆ ಹಂಗಾಮಿನಲ್ಲಿ ಭತ್ತದ ಬದಲು ಬೇರೆ ಬೆಳೆಗಳನ್ನು ಬೆಳೆಯುವುದು ಹಾಗೂ ಎಫ್‌ಐಡಿ ನೋಂದಣಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆ ಎದುರಾಗಿ ಬರ ಆವರಿಸಿದ್ದು, ಹಿಂಗಾರಿನಲ್ಲಿ ತುಂಗಭದ್ರಾ ಕಾಲುವೆಗಳಲ್ಲಿ ನೀರು ಹರಿಸುವುದು
ಅನುಮಾನವಿರುವುದರಿಂದ ಹಿಂಗಾರಿನಲ್ಲಿ ಭತ್ತದ ಬದಲಾಗಿ ಲಭ್ಯವಿರುವ ತೇವಾಂಶದಲ್ಲಿ ದ್ವಿದಳ ಧಾನ್ಯ ಹಾಗೂ ಹಸಿರೆಲೆ ಗೊಬ್ಬರದ ಬೆಳೆಗಳಾದ ಅಲಸಂದಿ, ಸೆಣಬು, ಧೈಂಚಾ, ಪಿಳ್ಳಿಪೆಸರು, ಸಾಸಿವೆ ಹಾಗೂ ಇನ್ನಿತರೆ ಬೆಳೆಗಳನ್ನು ಬೆಳೆದು ಬೆಳೆ ಪರಿವರ್ತನೆ ಪದ್ಧತಿ ಅನುಸರಿಸಬೇಕು.
ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆ, ಬೆಳೆನಷ್ಟ ಪರಿಹಾರ, ಪಿಎಂ ಕಿಸಾನ್, ಕೃಷಿ ಸಾಲ ಮತ್ತು ಇತರೆ ಯೋಜನೆಗಳ ಡಿಬಿಟಿ ಸೌಲಭ್ಯ ಪಡೆಯಲು ಕೃಷಿ ಇಲಾಖೆಯ ಪ್ರೂಟ್ಸ್ ತಂತ್ರಾಂಶದಲ್ಲಿ ಎಫ್‌ಐಡಿ ನೋಂದಣಿ ಕಡ್ಡಾಯವಾಗಿರುತ್ತದೆ. ಗಂಗಾವತಿ ಹೋಬಳಿಯಲ್ಲಿ ಇನ್ನೂ 2803 ಬಾಕಿ ಇದ್ದು, ಗ್ರಾಮವಾರು ಬಾಕಿ ಉಳಿದಿರುವ ರೈತರ ಪಟ್ಟಿಯನ್ನು ಎಲ್ಲಾ ಗ್ರಾಮ ಪಂಚಾಯಿತಿಗಳ ಸೂಚನಾಫಲಕದಲ್ಲಿ ಅಳವಡಿಲಾಗಿದ್ದು, ರೈತರು ತಮ್ಮ ಆಧಾರ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಇತ್ತೀಚಿನ ಪಹಣಿ ಪತ್ರಿಕೆಗಳನ್ನು ಒದಗಿಸಿ ಎಫ್‌ಐಡಿ ನೋಂದಣಿ ಮಾಡಿಕೊಳ್ಳಬೇಕೆಂದರು.
ಸಹಾಯಕ ಕೃಷಿ ಅಧಿಕಾರಿ ಡಾ| ದೀಪಾ ಎಚ್. ಮಾತನಾಡಿ, ಕೃಷಿ ಇಲಾಖೆ ಯೋಜನೆಗಳಾದ ಕೃಷಿ ಪರಿಕರಗಳ ವಿತರಣೆ, ಸಸ್ಯ ಸಂರಕ್ಷಣೆ, ಕೃಷಿ ಯಾಂತ್ರೀಕರಣ, ಸೂಕ್ಷ್ಮ ನೀರಾವರಿ, ಕೃಷಿ ಸಂಸ್ಕರಣೆ ಮತ್ತು ಇತರೆ ಯೋಜನೆಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.
ಗ್ರಾಪಂ ಅಧ್ಯಕ್ಷ ಕೃಷ್ಣ ಆಲೂರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊನ್ನಪ್ಪ ನಾಯಕ, ಉಪಾಧ್ಯಕ್ಷ ಎಚ್.ಎಂ. ವಿರೂಪಾಕ್ಷಯ್ಯ, ಆತ್ಮ ಯೋಜನೆಯ ತಾಲೂಕು ತಾಂತ್ರಿಕ ವ್ಯವಸ್ಥಾಪಕ ಶಾರುಫ್ ಪಾಷಾ, ನಾಗರಾಜ ಅನಾಲಿಸ್ಟ್, ಶಹಾಬುದ್ದಿನ್, ಸಂಘದ ಕಾರ್ಯದರ್ಶಿ ನವೀನ್ ರಾಮಸಾಗರ, ಚನ್ನಯ್ಯ ಹಿರೇಮಠ, ಕೃಷಿ ಸಖಿ ಶ್ರೀದೇವಿ, ಗ್ರಾಮದ ಪ್ರಗತಿಪರ ರೈತರು, ಮಲ್ಲಾಪುರ, ರಾಂಪುರ, ಬಸವನದುರ್ಗಾ, ಲಕ್ಷ್ಮಿಪುರ, ಸಂಗಾಪುರ ಗ್ರಾಮದ ರೈತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.