Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಅರ್ಚಕನ ಬಂಧನ
Team Udayavani, Sep 22, 2024, 10:59 AM IST
ಗಂಗೊಳ್ಳಿ: ಗಂಗೊಳ್ಳಿಯ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರಿಗೆ ಅರ್ಪಿಸಿದ 21 ಲಕ್ಷ ರೂ. ಮೌಲ್ಯದ ಚಿನ್ನದ ಅಭರಣಗಳನ್ನು ಕಳವುಗೈದ ಆರೋಪದಲ್ಲಿ ಅದೇ ದೇವಸ್ಥಾನದ ಅರ್ಚಕ, ಶಿರಸಿ ಸಾಲಕಣಿ ಗ್ರಾಮದ ಮೂರೆಗಾರ ಎಂಬಲ್ಲಿನ ನರಸಿಂಹ ಭಟ್ (43) ಎಂಬಾತನನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಘಟನೆ ವಿವರ: ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೂರ್ತಿಗೆ ಆಡಳಿತ ಮಂಡಳಿ ಹಾಗೂ ಭಕ್ತರ ಸೇವೆ, ಹರಕೆ ರೂಪದಲ್ಲಿ ನೀಡಿದ ಚಿನ್ನಾಭರಣಗಳು ಅಲಂಕಾರ ಮಾಡಿದ ರೀತಿಯಲ್ಲಿ ಪ್ರತಿದಿನ ಮೂರ್ತಿಯಲ್ಲಿ ಇರುತ್ತಿತ್ತು. ಸೆ. 21ರಂದು ಸಂಜೆ 7 ಗಂಟೆ ಸುಮಾರಿಗೆ ದೇವಸ್ಥಾನದ ಗರ್ಭಗುಡಿಯಲ್ಲಿ ಪೂಜೆ ಮಾಡುತ್ತಿದ್ದ ಆರೋಪಿ ಅರ್ಚಕನಲ್ಲಿ ನವರಾತ್ರಿ ಉತ್ಸವದ ಸಲುವಾಗಿ ದೇವರ ಮೂರ್ತಿ ಮೇಲಿದ್ದ ಚಿನ್ನಾಭರಣಗಳನ್ನು ಶುದ್ಧ ಮಾಡಲು ನೀಡುವಂತೆ ಪಡೆದುಕೊಂಡಾಗ ಆ ಆಭರಣಗಳು ಸಂಶಯಾಸ್ಪದವಾಗಿದ್ದವು.
ಅಸಲಿ ಚಿನ್ನದಂತೆ ಕಂಡು ಬಂದಿರಲಿಲ್ಲ. ಈ ಬಗ್ಗೆ ವಿಚಾರಿಸಿದಾಗ ಅಸಲಿ ಚಿನ್ನಾಭರಣಗಳನ್ನು ತಾನು ತೆಗೆದಿರುವುದಾಗಿ ಒಪ್ಪಿ ಕೊಂಡು ಅವುಗಳನ್ನು ಸ್ವಂತಕ್ಕೆ ಬಳಸಿಕೊಂಡ ಬಗ್ಗೆ ತಿಳಿಸಿದ್ದಾನೆ. ಅಂದಾಜು 3.2 ಲಕ್ಷ ರೂ. ಮೌಲ್ಯದ 40 ಗ್ರಾಂ ತೂಕದ ಚಿನ್ನದ ಜೋಬಿನ ಸರ, 5.84 ಲಕ್ಷ ರೂ. ಮೌಲ್ಯದ 73 ಗ್ರಾಂ ತೂಕದ ಹವಳ ಸೇರಿದ ಚಿನ್ನದ ಕಾಸಿ ತಾಳಿ ಸರ, 5.84 ಲಕ್ಷ ರೂ.ಸಾವಿರ ಮೌಲ್ಯದ 73 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 5.12 ಲಕ್ಷ ರೂ. ಮೌಲ್ಯದ 64 ಗ್ರಾಂ ತೂಕದ ಚಿನ್ನದ ನಕ್ಲೇಸ್, 48 ಸಾವಿರ ರೂ.ಗಳ 6 ಗ್ರಾಂ ತೂಕದ 3 ಚಿನ್ನದ ತಾಳಿ, 64 ಸಾವಿರ ರೂ.ಗಳ 8 ಗ್ರಾಂ ತೂಕದ ಚಿನ್ನದ ಸರ ಸಹಿತ ಒಟ್ಟು ರೂ. 21.12 ಲಕ್ಷ ಮೌಲ್ಯದ 264 ಗ್ರಾಂ (33 ಪವನ್) ತೂಕದ ಚಿನ್ನಾಭರಣಗಳನ್ನು ಕಳವುಗೈಯಲಾಗಿದೆ.
ನರಸಿಂಹ ಭಟ್‌ನನ್ನು ಮೇ 16ರಿಂದ ಅರ್ಚಕನಾಗಿ ನೇಮಿಸಿಕೊಂಡು ಮಾಸಿಕ ಸಂಬಳ ಹಾಗೂ ವಾಸಕ್ಕೆ ಮನೆ ನೀಡಲಾಗಿತ್ತು. ಆರೋಪಿಯು ಮೇ 16ರಿಂದ ಸೆ. 21ರ ಅವಧಿಯಲ್ಲಿ ದೇವಸ್ಥಾನದ ಅರ್ಚಕನಾಗಿದ್ದು ದೇವಸ್ಥಾನದಲ್ಲಿ ಈ ಕುಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ.
ಗಂಗೊಳ್ಳಿ ಪಿಎಸ್‌ಐ ಹರೀಶ್ ಆರ್. ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ. ಘಟನೆ ಸುದ್ದಿ ಹಬ್ಬಿದಾಗ ನೂರಾರು ಮಂದಿ ದೇವಸ್ಥಾನದ ಬಳಿ ಜಮಾಯಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.