ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಪ್ರಥಮ ಪಿಯುಸಿ ಆರಂಭೋತ್ಸವ
Team Udayavani, Jun 1, 2019, 6:00 AM IST
ಗಂಗೊಳ್ಳಿ: ವಿದ್ಯಾರ್ಥಿಗಳು ತಮ್ಮ ಗುರಿಯೆಡೆಗೆ ನಿರಂತರ ಪರಿಶ್ರಮದಿಂದ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಉತ್ತಮ ವಾದ ವ್ಯಕ್ತಿತ್ವ ನಿರ್ಮಾಣದ ಜೊತೆಗೆ ಯಶಸ್ಸು ಸಾಧ್ಯವಾಗುತ್ತದೆ. ಇದಕ್ಕೆ ನಮ್ಮ ನಡುವಿನ ಅನನ್ಯ ವ್ಯಕ್ತಿತ್ವದ ಪ್ರೇರಣೆಗಳನ್ನು ಮಾದರಿಯಾಗಿಟ್ಟುಕೊಳ್ಳಬೇಕು ಎಂದು ಜಿ.ಎಸ್. ವಿ. ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ| ಕಾಶೀನಾಥ ಪೈ ಹೇಳಿದರು.
ಇಲ್ಲಿಯ ರೋಟರಿ ಸಭಾಂಗಣದಲ್ಲಿ ನಡೆದ ಇಲ್ಲಿನ ಸರಸ್ವತಿ ವಿದ್ಯಾಲಯ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿ ಸರಸ್ವತಿ ವಿದ್ಯಾಲಯ ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಶಿಸ್ತು ಪಾಲನೆ ನೀತಿ ನಿಯಮಗಳ ಬಗೆಗೆ ಮಾಹಿತಿ ನೀಡಿದರು.
ಭೌತಶಾಸ್ತ್ರ ಉಪನ್ಯಾಸಕ ಕೃಷ್ಣ ಗುಜ್ಜಾಡಿ ವಿದ್ಯಾಲಯ ಬಳಗವನ್ನು ಪರಿಚಯಿಸಿದರು.
ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ದೊರೆಯುವ ವಿವಿಧ ಸೌಲಭ್ಯ ಗಳ ಬಗೆಗೆ ಉಪನ್ಯಾಸಕ ನಾರಾಯಣ ಈ. ನಾಯ್ಕ ಮತ್ತು ಕಚೇರಿ ಮುಖ್ಯಸ್ಥ ಭಾಸ್ಕರ್ ಎಚ್. ಜಿ. ವಿವರಿಸಿದರು.
ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಎಂಟನೇ ಸ್ಥಾನ ಪಡೆದ ಪ್ರಿಯಾ ಜಿ. ಪೈ.ಎಂ. ಮತ್ತು ಹತ್ತನೇ ಸ್ಥಾನ ಪಡೆದ ಎಮ್. ಅನಘ ಪೈ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಅಭಿನಂದಿಸಲಾಯಿತು. ರಾಷ್ಟ್ರ ಮಟ್ಟದ ಕ್ರೀಡಾ ಸಾಧಕರನ್ನು ಪುರಸ್ಕರಿಸಲಾಯಿತು.
ಪ್ರಾಂಶುಪಾಲೆ ಕವಿತಾ ಎಮ್. ಸಿ. ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕ ರಾಘವೇಂದ್ರ ಭಟ್, ಪ್ರವೀಣ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.
ಆಂಗ್ಲಭಾಷಾ ಉಪನ್ಯಾಸಕ ಥಾಮಸ್ ಪಿ. ಪ್ರಸ್ತಾವಿಸಿದರು. ಸಂಸ್ಕೃತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್. ಸಿ. ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್. ನಿರೂಪಿಸಿದರು. ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.