ಗ್ಯಾಸ್ ಸಿಲಿಂಡರ್ ಮಿತಿ: ಗ್ರಾಹಕರಿಗೆ ಫಜೀತಿ
Team Udayavani, Dec 29, 2022, 7:50 AM IST
ಉಡುಪಿ: ಗೃಹ ಬಳಕೆಗೆ (ಡೊಮೆಸ್ಟಿಕ್ ಯೂಸ್) ವಾರ್ಷಿಕ 15 ಗ್ಯಾಸ್ ಸಿಲಿಂಡರ್ ಮಾತ್ರ ನೀಡಲಾಗುವುದು ಎಂಬ ನಿಯಮ ಜಾರಿಗೆ ಬಂದ ಅನಂತರದಲ್ಲಿ ಗ್ರಾಹಕರಿಗೆ ಸಂಕಷ್ಟ ಎದುರಾಗಿದೆ.
ಈ ಹಿಂದೆ ತಿಂಗಳಿಗೆ ಒಂದರಂತೆ 12 ಗ್ಯಾಸ್ ಸಿಲಿಂಡರ್ ವರ್ಷಕ್ಕೆ ಪಡೆಯುವ ನಿಯಮ ತಂದಾಗ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ಬಂದ ಹಿನ್ನೆಲೆಯಲ್ಲಿ ನಿರ್ದಿಷ್ಟ ಮಿತಿಯನ್ನು ಕೇಂದ್ರ ಸರಕಾರ ತೆರವುಗೊಳಿಸಿತ್ತು. ಇದರಿಂದ ಗ್ರಾಹಕರು ತಮಗೆ ಬೇಕಾದಷ್ಟು ಬಳಕೆ ಮಾಡಿಕೊಳ್ಳುತ್ತಿದ್ದರು. ಇದೀಗ ಮತ್ತೆ ವರ್ಷಕ್ಕೆ 15 ಸಿಲಿಂಡರ್‌ಗಳನ್ನು ಮಾತ್ರ ಪಡೆದುಕೊಳ್ಳಬೇಕು ಎಂಬ ನಿಯಮ ಬಂದಿರುವ ಹಿನ್ನೆಲೆಯಲ್ಲಿ 15 ಗ್ಯಾಸ್ ಸಿಲಿಂಡರ್ ಮಿತಿ ದಾಟಿರುವವರಿಗೆ ಗ್ಯಾಸ್ ಸಿಲಿಂಡರ್ ಬುಕ್ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ಪೂರೈಕೆಯೂ ಆಗುತ್ತಿಲ್ಲ.
ಮಾಹಿತಿಯೇ ಇಲ್ಲ
ಕೆಲವು ಕುಟುಂಬಗಳಿಗೆ ಎರಡುತಿಂಗಳಿಗೆ ಒಂದು ಗ್ಯಾಸ್ ಸಿಲಿಂಡರ್ ಬಳಕೆಗೆ ಸಾಕಾದರೆ ಇನ್ನು ಅನೇಕ ಕುಟುಂಬಗಳಿಗೆ ಪ್ರತೀ ತಿಂಗಳಿಗೆ ಎರಡರಿಂದ ಮೂರು ಗ್ಯಾಸ್ ಸಿಲಿಂಡರ್ ಬೇಕಾಗುತ್ತದೆ. ವಾರ್ಷಿಕ 12 ಸಿಲಿಂಡರ್ ಮಾತ್ರ ಎಂಬ ಮಿತಿ ಸಡಿಲಗೊಂಡ ಅನಂತರದಲ್ಲಿ ನಾವು ಕುಟುಂಬಕ್ಕೆ ಮಾಸಿಕ ಎಷ್ಟು ಬೇಕು ಅಷ್ಟು ಸಿಲಿಂಡರ್ ಮುಂಗಡ ಕಾದಿರಿಸಿಕೊಳ್ಳುತ್ತಿದ್ದೇವೆ. ಈಗ ಏಕಾಏಕಿ 15 ಸಿಲಿಂಡರ್ ಮಾತ್ರ ನೀಡಲಾಗುವುದು ಎಂಬ ನಿಯಮ ಮಾಡಿದ್ದಾರೆ. ಈಗಾಗಲೇ 15 ಸಿಲಿಂಡರ್ ಈ ವರ್ಷ ಬಳಕೆ ಮಾಡಿದವರೆ ಮುಂದಿನ ಎಪ್ರಿಲ್ ತನಕ ಸಿಲಿಂಡರ್ ನೀಡಲಾಗುವುದಿಲ್ಲ ಎಂದೂ ಹೇಳಲಾಗುತ್ತಿದೆ. ಸರಿಯಾದ ಮಾಹಿತಿ ನೀಡದೆ ಇಂತಹ ನಿರ್ಬಂಧ ಹಾಕುವುದು ಸರಿಯಲ್ಲ. ಇದರಿಂದ ಅನೇಕ ಕುಟುಂಬಕ್ಕೆ ಸಮಸ್ಯೆಯಾಗಲಿದೆ ಎಂದು ಕೆಲವರು ಆಕ್ರೋಶ ಹೊರ ಹಾಕಿದ್ದಾರೆ.
ಈ ಮೊದಲು ವಾರ್ಷಿಕ 12 ಗ್ಯಾಸ್ ಸಿಲಿಂಡರ್ ಮಿತಿ ಇತ್ತು. ಅದನ್ನು ಸಡಿಲಗೊಳಿಸಲಾಗಿತ್ತು. ಇತ್ತೀಚೆಗೆ 15 ಗ್ಯಾಸ್ ಸಿಲಿಂಡರ್ ಮಿತಿ ನಿಗದಿ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್‌ಗೆ ಈ ಮಿತಿ ವಿಧಿಸಲಾಗಿದೆ. ವಾಣಿಜ್ಯ ಉದ್ದೇಶಕ್ಕೆ ಬಳಸುವ ಗ್ಯಾಸ್ ಸಿಲಿಂಡರ್‌ಗಳಿಗೆ ಯಾವುದೇ ಮಿತಿ ಇಲ್ಲ ಎಂದು ಬಾಲಾಜಿ ಗ್ಯಾಸ್ ಏಜೆನ್ಸಿ ಮಾಲಕ ರಾಘವೇಂದ್ರ ಆಚಾರ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.