ಗೌರಿ ಲಂಕೇಶ್ ಹತ್ಯೆ: ಉಡುಪಿ ಪತ್ರಕರ್ತರ ಸಂಘದಿಂದ ಪ್ರತಿಭಟನೆ
Team Udayavani, Sep 7, 2017, 6:35 AM IST
ಉಡುಪಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಜಯಕರ ಸುವರ್ಣ, ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವುದು ತೀವ್ರ ಖಂಡನೀಯ. ಇಂತಹ ಘಟನೆಗಳಿಂದ ಪತ್ರಕರ್ತರು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪತ್ರಿಕಾ ಬಂಧುಗಳಿಗೆ ಸರಕಾರ ರಕ್ಷಣೆ ನೀಡಬೇಕು. ಹತ್ಯೆಗೈದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಯಲಿದೆ ಎಂದರು.
ವೈಚಾರಿಕ ಭಿನ್ನಾಭಿಪ್ರಾಯಗಳಿಗೆ ಸಾವೇ ಪರಿಹಾರವಲ್ಲ. ಹತ್ಯೆಯಿಂದ ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಹತ್ಯೆ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಸಂಘದ ಮಾಜಿ ಅಧ್ಯಕ್ಷ ಕಿರಣ್ ಮಂಜನಬೈಲು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗೌರಿ ಲಂಕೇಶ್ ಅವರಿಗೆ ಮೌನ ಪ್ರಾರ್ಥನೆ ಮೂಲಕ ಗೌರವ ಸಲ್ಲಿಸಲಾಯಿತು.ಪತ್ರಕರ್ತ ದೀಪಕ್ ಜೈನ್ ಮಾತನಾಡಿದರು. ಕೋಶಾಧಿಕಾರಿ ರಾಜೇಶ್ ಶೆಟ್ಟಿ, ಪದಾಧಿಕಾರಿಗಳಾದ ನಝೀರ್ ಪೊಲ್ಯ, ಸಂತೋಷ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.