ಪಾಳು ಬಿದ್ದಿರುವ ಪಡುಹಿತ್ಲು ಕೆರೆಗೆ ದೊರೆಯಲಿ ಕಾಯಕಲ್ಪ

Team Udayavani, Jun 29, 2019, 5:04 AM IST

2806RA4E_2806MN__1

ಪಡುಬಿದ್ರಿ: ನೂರಾರು ಎಕರೆ ಕೃಷಿ ಭೂಮಿಗೆ ನೀರುಣಿಸುತ್ತಿದ್ದ ರಮಣ ಬಡಾವಣೆ ಹಿಂಭಾಗದ ಸುಮಾರು 35 ಸೆಂಟ್ಸ್‌ ವಿಸ್ತೀರ್ಣದ ಪಡುಹಿತ್ಲು ಕೆರೆಯು ಈಗ ಪಾಳು ಬಿದ್ದಿದೆ. ಇದು ಈಗ ಕೊಳಚೆ ನೀರಿನ ಸಂಗ್ರಹ ತಾಣವಾಗಿ ಮಾರ್ಪಟ್ಟಿದೆ.

ಕಳೆಗಿಡಗಳಿಂದ ತುಂಬಿರುವ ಈ ಕೆರೆಯ ಮಲಿನ ನೀರಿನಿಂದ ಪರಿಸರವೆಲ್ಲ ದುರ್ನಾತ ಬೀರುತ್ತಿದೆ. ಅಲ್ಲದೆ ಕೆರೆಯ ಸುತ್ತಮುತ್ತಲಿನ ಜಮೀನುಗಳೆಲ್ಲ ಹಡಿಲು ಬಿದ್ದಿದ್ದು, ಗಿಡಗಂಟಿಗಳಿಂದ ತುಂಬಿ ಹೋಗಿವೆ. ಇದನ್ನು ತೆರವು ಮಾಡಿ ನೀರು ಸರಾಗವಾಗಿ ಹರಿಯಲು ಪಂಚಾಯತ್‌ ಕ್ರಮ ಕೈಗೊಳ್ಳಬೇಕಿದೆ. ಕೆರೆಯ ಹೊಳೆತ್ತಿ ಸ್ವಚ್ಛಗೊಳಿಸಿದಲ್ಲಿ ಬೀಚ್‌ನತ್ತಲೂ ಇಲ್ಲಿಂದ ನೀರು ಸರಬರಾಜು ಸಾಧ್ಯವೆಂಬುದು ಸಾರ್ವಜನಿಕ ಅಭಿಪ್ರಾಯವಾಗಿದೆ.

ಬ್ಲೂ ಫ್ಲ್ಯಾಗ್‌ ಬೀಚ್ಗೆ ಶುದ್ಧ ನೀರಿನ ಸರಬರಾಜಿಗಾಗಿ ಕೊಳವೆ ಬಾವಿ ತೋಡಿಕೊಳ್ಳಲು ಜಿಲ್ಲಾಡಳಿತವು ಶ್ರಮಿಸುತ್ತಿದೆ. ಇದಕ್ಕೆ ಪಡುಹಿತ್ಲು ಕೆರೆಯ ಅಭಿವೃದ್ಧಿಯೇ ಪರ್ಯಾಯ ಪರಿಹಾರವಾಗಬಲ್ಲುದು. ಈ ಕೆರೆಯ ಐದಾರು ಕಡೆ ಏತಗಳನ್ನು ಅಳವಡಿಸಿ ಹಿಂದೆ ಕೃಷಿ ಭೂಮಿಗೆ ನೀರು ಹಾಯಿಸಲಾಗುತ್ತಿತ್ತು. ಇಂದು ಅದು ಪಾಳು ಬಿದ್ದಂತಾಗಿದೆ. ಕೆರೆಯ ದುರಸ್ತಿಗಾಗಿ 5 ವರ್ಷಗಳ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿದ್ದರೂ, ಏನು ಪ್ರಯೋಜನವಾಗಿಲ್ಲ. ಇದೀಗ ಬ್ಲೂ ಪ್ಲ್ರಾಗ್‌ ಬೀಚ್ಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಕೆರೆಯನ್ನು ದುರಸ್ತಿ ಪಡಿಸಿ ಸ್ಥಳೀಯ ವಾರ್ಡ್‌ ಹಾಗೂ ಬೀಚ್ಗೆ ನೀರು ಪೂರೈಸಲು ಕ್ರಮಕೈಗೊಳ್ಳಲಿ ಎಂದು ಸ್ಥಳೀಯರಾದ ಲೋಹಿತಾಕ್ಷ ಸುವರ್ಣ ಹೇಳುತ್ತಾರೆ.

ಇದೇ ಗ್ರಾ. ಪಂ. ವಾರ್ಡ್‌ನಲ್ಲಿನ ಬೀಡಿನಕರೆ ಅಂಗನವಾಡಿ ಮುಂಭಾಗದ ಪ್ರದೇಶವಂತೂ ಕೊಚ್ಚೆ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳ ಆಹ್ವಾನ ಕೇಂದ್ರವಾಗಿ ಮಾರ್ಪಟ್ಟಿದೆ. ಇದು ಅಂಗನವಾಡಿ ಮಕ್ಕಳು ಹಾಗೂ ಪರಿಸರದ ಜನರ ಅನಾರೋಗ್ಯಕ್ಕೂ ಕಾರಣವಾಗಿದೆ. ಇಲ್ಲಿನ ಪಾಳು ಬಿದ್ದ ಜಮೀನಿನಲ್ಲಿ ನೀರು ಸರಾಗವಾಗಿ ಹರಿಯದೆ ದುರ್ನಾತ ಬೀರುತ್ತಿದೆ. ಈ ಬಗ್ಗೆ ಗ್ರಾ. ಪಂ.ಗೆ ಹಲವು ಬಾರಿ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಮಕ್ಕಳ ಪಾಲಕರು ದೂರಿದ್ದಾರೆ.

ಬೀದಿ ನಾಯಿ ಹಾವಳಿ ಹಾಗೂ ನಿರುಪಯುಕ್ತ ಬಾವಿ ನೀರು
ಹೆಜಮಾಡಿ ಹಾಗೂ ಪಡುಬಿದ್ರಿ ಗ್ರಾಪಂನ ಗಡಿ ಭಾಗವಾಗಿರುವ ಈ ವಾರ್ಡ್‌ನ ರಸ್ತೆಯಲ್ಲಿ ಪ್ಲಾಸ್ಟಿಕ್‌ ಚೀಲಗಳಲ್ಲಿ ತುಂಬಿಸಿದ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಸುರಿಯುತ್ತಿರುವುದರಿಂದ ಬೀದಿ ನಾಯಿಗಳ ಹಾವಳಿಗೂ ಕಾರಣವಾಗಿದೆ. ಈ ಭಾಗದ ಕೆಲ ಮನೆಗಳಲ್ಲಿ ಬಾವಿಯಿದ್ದರೂ ಕೆಸರುಮಯವಾಗಿ ಅದರ ನೀರು ಬಳಕೆಗೆ ಅಯೋಗ್ಯವಾಗಿದೆ. ಗ್ರಾ. ಪಂ. ನ ನಳ್ಳಿ ನೀರಿನ ಸಂಪರ್ಕವೇ ಇವರಿಗೆ ಆಧಾರವಾಗಿದೆ.

ಸಮಸ್ಯೆಪರಿಹರಿಸಲಾಗುವುದುಬೀಡಿನಕರೆ ಅಂಗನವಾಡಿ ಬಳಿಯ ಕೊಳಚೆ ನೀರು ಹಾಗೂ ಅಲ್ಲಿನ ಸಮಸ್ಯೆಗಳ ಬಗ್ಗೆ ಗ್ರಾಪಂ ಸದಸ್ಯರು ವಿವರಿಸಿದ್ದಾರೆ. ಸ್ಥಳ ಪರಿಶೀಲನೆ ನಡೆಸಿ ವಾರದೊಳಗೆ ಕೊಳಚೆ ನೀರು ಸಮಸ್ಯೆ ಪರಿಹರಿಸಲಾಗುವುದು.
-ಪಂಚಾಕ್ಷರಿ ಸ್ವಾಮಿ ಕೆರಿಮಠ, ಪಡುಬಿದ್ರಿ ಗ್ರಾ.ಪಂ. ಪಿಡಿಒ.

ಟಾಪ್ ನ್ಯೂಸ್

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.