ಗಿಳಿಯಾರು: ಬೆಂಕಿ ಅವಘಡ; ಕಲ್ಲಂಗಡಿ ಕೃಷಿಗೆ ಹಾನಿ
Team Udayavani, Mar 25, 2017, 3:54 PM IST
ಕೋಟ: ಕೋಟ ಗ್ರಾ.ಪಂ. ವ್ಯಾಪ್ತಿಯ ಮೂಡುಗಿಳಿಯಾರಿನ ಕೃಷಿಭೂಮಿಯಲ್ಲಿ ಮಾ.23ರಂದು ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ತೀವ್ರತೆ ನೂರಾರು ಎಕ್ರೆ ಕೃಷಿಭೂಮಿಗೆ ವ್ಯಾಪಿಸಿತು ಹಾಗೂ ಹೇರಳವಾಗಿ ಬೆಳೆದಿದ್ದ ಕಲ್ಲಂಗಡಿ ಬೆಳೆಗೆ ಹಾನಿಯಾಯಿತು. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳ ಜಂಟಿ ಕಾರ್ಯಾಚರಣೆಯಿಂದ ಸಂಭಾವ್ಯ ಭಾರೀ ಅನಾಹುತ ತಪ್ಪಿದೆ.
ಅಗ್ನಿಶಾಮಕದಳ ವಾಹನದ ಅವಸ್ಥೆ ಕುಂದಾಪುರ ಅಗ್ನಿಶಾಮಕ ಠಾಣೆಯಲ್ಲಿ ಕಾರ್ಯನಿರ್ವಹಿಸುವ ವಾಹನವು ಸುಮಾರು ಇಪ್ಪತ್ತು ವರ್ಷಗಳಿಗಿಂತ ಹಳೆಯದಾಗಿದ್ದು ತುರ್ತು ಸಂದರ್ಭಗಳಲ್ಲಿ ಕಾರ್ಯಾಚರಣೆ ನಡೆಸಲು ಇದರಿಂದ ಸಾಧ್ಯವಾಗುತ್ತಿಲ್ಲ. ಗುರುವಾರ ಗಿಳಿಯಾರಿನಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಸ್ಥಳಕ್ಕಾಗಮಿಸಿದ ವಾಹನ ತುರ್ತು ಕಾರ್ಯಾಚರಿಸುವಲ್ಲಿ ವಿಫಲವಾಯಿತು. ಈ ಕುರಿತು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿ ಜಿ.ಪಂ.ಸದಸ್ಯ ರಾಘವೇಂದ್ರ ಕಾಂಚನ್ ಅವರ ಗಮನಕ್ಕೆ ತಂದರು. ಅನಂತರ ಜಿ.ಪಂ. ಸದಸ್ಯರು ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕ್ರಮಕೈಗೊಳ್ಳುವಂತೆ ವಿನಂತಿಸಿದ್ದಾಗಿ ಪತ್ರಿಕೆಗೆ ತಿಳಿಸಿದ್ದಾರೆ.
ಸ್ಥಳಕ್ಕೆ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್, ಕೋಟ ಸಿ.ಎ.ಬ್ಯಾಂಕ್ ಅಧ್ಯಕ್ಷ ತಿಮ್ಮ ಪೂಜಾರಿ, ತಾ.ಪಂ.ಮಾಜಿ ಸದಸ್ಯ ಭರತ್ ಶೆಟ್ಟಿ, ಗ್ರಾ.ಪಂ.ಸದಸ್ಯೆ ಜ್ಯೋತಿ ಬಿ.ಶೆಟ್ಟಿ ಭೇಟಿ ನೀಡಿದ್ದಾರೆ ಹಾಗೂ ಅಗ್ನಿಶಾಮಕದಳದ ಸಿಬಂದಿಗಳಾದ ನವೀನ್, ಚೆನ್ನಯ ಪೂಜಾರಿ , ಸಂತೋಷ್ ಶೆಟ್ಟಿ, ವಿಷ್ಣು ಡಿ.ಗೌಡ, ದೀಪಕ್ ಬೆಂಕಿ ನಂದಿಸುವಲ್ಲಿ ಪರಿಶ್ರಮಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.