ಯೋಜನೆಗಳ ಮಾಹಿತಿ ನೀಡಿ: ಡಿಸಿ
Team Udayavani, Apr 6, 2017, 2:52 PM IST
ಉಡುಪಿ: ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆಗಳು ಕೈಗೊಳ್ಳುವ ಕಾರ್ಯಕ್ರಮಗಳ ಕುರಿತು ವ್ಯಾಪಕವಾದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ನಡೆದ ಪ.ಜಾತಿ ಉಪಯೋಜನೆ, ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮಸಭೆಯಲ್ಲಿ ಮಾಹಿತಿ ನೀಡಿ ಎಲ್ಲ ಇಲಾಖೆಗಳು ಪ.ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕೈಗೊಳ್ಳುವ ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ಪತ್ರವನ್ನು ಆ ಸಮುದಾಯದವರು ವಾಸ ಮಾಡುವ ಪ್ರದೇಶದಲ್ಲಿ ವಿತರಿಸಬೇಕು. ಗ್ರಾಮಸಭೆಗಳಲ್ಲಿ ಯೋಜನೆಗಳ ಮಾಹಿತಿ ನೀಡುವಂತೆ ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹಾಗೂ ಹೋಬಳಿ ಮಟ್ಟದಲ್ಲೂ ಸಹ ಮಾಹಿತಿ ಕಾರ್ಯಕ್ರಮ ಏರ್ಪಡಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕ್ರಿಯಾಯೋಜನೆ ಸಿದ್ಧಪಡಿಸಿ
ಯೋಜನೆಯಲ್ಲಿ ನಿಗದಿಪಡಿಸಿದ ಸಂಪೂರ್ಣ ಅನುದಾನವನ್ನು ನಿಗದಿತ ಅವಧಿಯಲ್ಲಿಯೇ ವೆಚ್ಚ ಮಾಡಿ, ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಬೇಕು. ಎಲ್ಲ ಇಲಾಖೆಗಳು ಪ.ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ 2017-18ರಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಕ್ರಿಯಾ ಯೋಜನೆ ಸಿದ್ಧಪಡಿಸಿಟ್ಟುಕೊಳ್ಳುವಂತೆ ಡಿಸಿ ಸೂಚಿಸಿದರು.
ಪ್ರತಿ ತಿಂಗಳ 15ನೇ ತಾರೀಕಿನಂದು ಎಸ್.ಸಿ.ಪಿ., ಟಿ.ಎಸ್.ಪಿ. ಸಭೆ ನಡೆಯಲಿದ್ದು, ಪೂರ್ವಾನುಮತಿ ಪಡೆಯದೇ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ತಿಳಿಸಿದರು. ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.