ನಾಗದೇವರ, ದೈವಗಳ ಪುನರ್‌ಪ್ರತಿಷ್ಠೆ, ನೇಮ​​​​​​​


Team Udayavani, Mar 15, 2019, 12:55 AM IST

1403vtl-chelladka1.jpg

ವಿಟ್ಲ: ಚೆಲ್ಲಡ್ಕ ಕುಟುಂಬದ ಸಾಮಾಜಿಕ ಕಳಕಳಿ ಮಹತ್ವ ಪೂರ್ಣವಾಗಿದೆ. ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಕೈಂಕರ್ಯ ಶ್ರೇಷ್ಠವಾಗಿದೆ. ಸಾಮಾಜಿಕ ಸೇವೆಯ ಮೂಲಕ ರಾಷ್ಟ್ರ ಸದೃಢಗೊಳಿಸುವ ಕಾರ್ಯ ಶ್ರೇಷ್ಠವಾಗಿದೆ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಶ್ಲಾಘಿಸಿದರು.

ಅವರು ಕೇಪು ಗ್ರಾಮದ ಚೆಲ್ಲಡ್ಕ ಕುಟುಂಬಸ್ಥರು ನೂತನವಾಗಿ ನಿರ್ಮಿಸಿದ ತರವಾಡು ಮನೆಯಲ್ಲಿ ನಾಗದೇವರ ಹಾಗೂ ಶ್ರೀ ಕಡ್ತಲೆ ಧೂಮಾವತಿ ಮತ್ತು ಅಂಗಡಿ ಧೂಮಾವತಿ, ಸಪರಿವಾರ ದೈವಗಳ ಪುನರ್‌ ಪ್ರತಿಷ್ಠೆ, ಕಲಶಾಭಿಷೇಕ ಮತ್ತು ನೇಮದ ಸಂದರ್ಭ ಏರ್ಪಡಿಸಿದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಸಮಿತಿ ಗೌರವಾಧ್ಯಕ್ಷ ಕುಟುಂಬದ ಹಿರಿಯರಾದ ವಿಟuಲ ಆಳ್ವ ಚೆಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ವಿಟ್ಲ ಅರಮನೆಯ ಕೃಷ್ಣಯ್ಯ ಕೆ.ವಿಟ್ಲ, ಗುರುರಾಜ ತಂತ್ರಿ ಕುಂಟುಕುಡೇಲು, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಕರ್ನಿರೆ, ಅಧ್ಯಕ್ಷ ಬಾಳಪ್ಪ ಆಳ್ವ ಚೆಲ್ಲಡ್ಕ, ರಾಜಶೇಖರ ಚೌಟ ದೇವಸ್ಯ, ಯು.ಪಿ. ಪ್ರಕಾಶ್‌ ಭಾಗವಹಿಸಿದ್ದರು.

ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ತುಕಾರಾಮ ಪೂಜಾರಿ ಧಾರ್ಮಿಕ ಉಪನ್ಯಾಸ ನೀಡಿದರು. ಇದೇ ಸಂದರ್ಭ ಡಾ| ಹಂಸರಾಜ ಆಳ್ವ ಮತ್ತು ವಿಟuಲ ಆಳ್ವ ಚೆಲ್ಲಡ್ಕ ಅವರನ್ನು ಸಮ್ಮಾನಿಸಲಾಯಿತು. ಉಪಾಧ್ಯಕ್ಷ ಸೀತಾರಾಮ ಆಳ್ವ ಚೆಲ್ಲಡ್ಕ ಮತ್ತು ಸುರೇಶ್‌ ಶೆಟ್ಟಿ ಪಡಿಬಾಗಿಲು ಅವರು ಸಮ್ಮಾನಿತರನ್ನು ಪರಿಚಯಿಸಿದರು.

ಕುಸುಮೋಧರ ಡಿ. ಶೆಟ್ಟಿ ಚೆಲ್ಲಡ್ಕ ದಡ್ಡಂಗಡಿ ಸ್ವಾಗತಿಸಿ, ಸಮಿತಿ ಕಾರ್ಯಾಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ದಡ್ಡಂಗಡಿ ಪ್ರಸ್ತಾವಿಸಿದರು. ಪುರುಷೋತ್ತಮ ಭಂಡಾರಿ ನಿರೂಪಿಸಿದರು. ಚಂದ್ರಹಾಸ ಆಳ್ವ ವಂದಿಸಿದರು. 

ಕಲಶಾಭಿಷೇಕ, ಪುನರ್‌ ಪ್ರತಿಷ್ಠೆ
ಬೆಳಗ್ಗೆ ಗಣಪತಿ ಹವನ, ದೈವಗಳ ಪುನರ್‌ ಪ್ರತಿಷ್ಠೆ ಮತ್ತು ಕಲಶಾಭಿಷೇಕ, ದೈವಸ್ಥಾನದಲ್ಲಿ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಬೈಕಡ್ತಿ ಕಟ್ಟೆಯಲ್ಲಿ ದೈವಗಳ ಪ್ರತಿಷ್ಠೆ, ಕಲಶಾಭಿಷೇಕ, ಕೊರತಿ ದೈವದ ಪ್ರತಿಷ್ಠೆ, ಕಲಶಾಭಿಷೇಕ, ಕುಪ್ಪೆ, ಪಂಜುರ್ಲಿ ದೈವದ ಪುನರ್‌ ಪ್ರತಿಷ್ಠೆ, ಕಲಶಾಭಿಷೇಕ ನೆರವೇರಿತು.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

suicide (2)

Manipal: ಬಾವಿಗೆ ಬಿದ್ದು ಕಾರ್ಮಿಕ ಸಾ*ವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.