ಗೋಲ್ಡನ್ ಜ್ಯುಬಿಲಿ ಫೌಂಡೇಶನ್:ಆ್ಯಂಬುಲೆನ್ಸ್ ಹಸ್ತಾಂತರ
Team Udayavani, Jul 4, 2019, 5:21 AM IST
ಉಡುಪಿ: ಭಾರತೀಯ ಜೀವ ವಿಮಾ ನಿಗಮವು ಸುವರ್ಣ ಮಹೋತ್ಸವ (2006) ಆಚರಣೆಯ ಸಂದರ್ಭದಲ್ಲಿ ಸ್ಥಾಪಿಸಲ್ಪಟ್ಟ ಗೋಲ್ಡನ್ ಜ್ಯುಬಿಲಿ ಫೌಂಡೇಶನ್ ಮುಖಾಂತರ ಲಕ್ಷಾಂತರ ಜನರಿಗೆ ಶಿಕ್ಷಣಕ್ಕಾಗಿ ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಸಮಾಜದ ಸ್ವಾಸ್ಥಕ್ಕಾಗಿ ಆರೋಗ್ಯ ಕ್ಷೇತ್ರದಲ್ಲೂ ಬಹಳಷ್ಟು ಸಂಸ್ಥೆಗಳಿಗೆ ಧನ ಸಹಾಯ ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಜು.1 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಉಜಿರೆ ಇವರಿಗೆ ಆ್ಯಂಬುಲೆನ್ಸ್ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು.
ಎಲ್.ಐ.ಸಿ.ಯ ಆಡಳಿತ ನಿರ್ದೇಶಕ ಟಿ.ಸಿ.ಸುಶೀಲ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಾಹನದ ಕೀಲಿ ಕೈಯನ್ನು ಹಸ್ತಾಂತರಿಸಿದರು.
ಎಲ್.ಐ.ಸಿ.ಯ ದಕ್ಷಿಣ ಮಧ್ಯ ವಲಯದ ವಲಯಾಧಿಕಾರಿ ಮಿನಿ ಐಪೆ, ವಲಯ ಕಚೇರಿ ಬೆಂಗಳೂರಿನ ಪ್ರಾದೇಶಿಕ ಮಾರುಕಟ್ಟೆ ಮುಖ್ಯಸ್ಥ ಜಗನ್ನಾಥ್, ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿ ಕೆ. ಅನಂತ ಪದ್ಮನಾಭ, ಮಾರುಕಟ್ಟೆ ಪ್ರಬಂಧಕ ವೆಂಕಟರಮಣ ಶಿರೂರು, ಆರೋಗ್ಯ ವಿಮೆ ಉಡುಪಿ ವಿಭಾಗದ ಮುಖ್ಯಸ್ಥ ಎ.ಮೋಹನದಾಸ್ ಹಾಗೂ ಎಲ್.ಐ.ಸಿ.ಯ ಅಧಿಕಾರಿ ವೃಂದದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.