ಜಲಾಮೃತ ಯೋಜನೆಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ


Team Udayavani, Jun 19, 2019, 5:35 AM IST

jalamruta

ಉಡುಪಿ: ರಾಜ್ಯ ಸರಕಾರದ ಮಹತ್ವಾಂಕಾಂಕ್ಷಿ ಯೋಜನೆಯಾದ ಜಲಾಮೃತ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದ್ದು, ಎಲ್ಲ ಜಿಲ್ಲೆಗಳಲ್ಲೂ ಯಶಸ್ವಿಯಾಗಿ ನಡೆಯುತ್ತಿದೆ.

ರಾಜ್ಯದಲ್ಲಿ ನೀರನ್ನು ಉಳಿಸುವ ಉದ್ದೇಶದಿಂದ 2019ನೇ ವರ್ಷವನ್ನು ಸರಕಾರ ಜಲವರ್ಷ ಎಂದು ಘೋಷಿಸಿಕೊಂಡಿತ್ತು. ಹನಿ ನೀರನ್ನು ಉಳಿಸಿ ಮುಂದಿನ ಪೀಳಿಗೆಗೆ ನೀಡುತ್ತೇವೆ ಎಂಬುವುದು ಜಲಾಮೃತ ಕಾರ್ಯಕ್ರಮದ ಪ್ರತಿಜ್ಞಾ ವಿಧಿಯಾಗಿದೆ. ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಈ ಕಾರ್ಯಕ್ರಮ ಅನುಷ್ಠಾನವಾಗಲಿದೆ. ಈ ಯೋಜನೆಗಾಗಿ ರಾಜ್ಯ ಸರಕಾರದಿಂದ 500 ಕೋ.ರೂ.ಗಳನ್ನು ಮೀಸಲಿಟ್ಟಿದೆ.

ಜಾಗೃತಿ ಮೂಡಿಸುವ ಕೆಲಸ

ಪ್ರತೀ ಜಿಲ್ಲೆಯಲ್ಲಿ ಜಿ.ಪಂ.ನ 5 ತಂಡಗಳು ಇದಕ್ಕಾಗಿ ಕಾರ್ಯನಿರ್ವಹಿಸುತ್ತಿವೆ. 1 ತಂಡದಲ್ಲಿ 3 ಮಂದಿ ಸದಸ್ಯರಿರುತ್ತಾರೆ. ಜಿಲ್ಲಾಡಳಿತದ ಮೂಲಕ ಇವರಿಗೆ ವಾಹನ ಸೌಲಭ್ಯ ಒದಗಿಸಲಾಗುತ್ತದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ತಲಾ 1 ಗಂಟೆಯಂತೆ ಇವರು ಮಾಹಿತಿ ನೀಡಲಿದ್ದಾರೆ. ಉಳಿದಂತೆ ಬೆಳಗ್ಗೆ 9ರಿಂದ ಸಂಜೆ 6.30ರ ವರೆಗೂ ವಿವಿಧ ಪ್ರದೇಶಗಳಿಗೆ ತೆರಳಿ ಪವರ್‌ ಪಾಯಿಂಟ್, ಜಾಗೃತಿ ಕಾರ್ಯಕ್ರಮಗಳನ್ನೂ ಕೂಡ ಆಯೋಜಿಸುತ್ತಾರೆ.

ಏನಿದು ಜಲಾಮೃತ ಯೋಜನೆ?

ರಾಜ್ಯದಲ್ಲಿ ಬರಸ್ಥಿತಿಯನ್ನು ಎದುರಿಸಲು 2019-20ನೇ ಸಾಲಿನ ಬಜೆಟ್‌ನಲ್ಲಿ 2019ನೇ ವರ್ಷವನ್ನು ಜಲಾಮೃತ ವರ್ಷ ಎಂದು ಘೋಷಿಸಿಕೊಂಡಿತ್ತು. ಜಲಸಂರಕ್ಷಣೆ, ಜಲಸಾಕ್ಷರತೆ, ಜಲಮೂಲಗಳ ಪುನಶ್ಚೇತನ ಮತ್ತು ಹಸುರೀಕರಣವನ್ನು ಕೇಂದ್ರವಾಗಿಟ್ಟುಕೊಂಡು ಈ ಯೋಜನೆಯನ್ನು ಆರಂಭಿಸಲಾಗಿದೆ.

ಉತ್ತಮ ಸ್ಪಂದನೆ

ಜಿಲ್ಲೆಯಲ್ಲಿ ಜಲಾಮೃತ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಇದನ್ನು ಆಲಿಸಿ ಅನುಷ್ಠಾನದ ಬಗ್ಗೆಯೂ ಮಾಹಿತಿ ಕೇಳಿ ಪಡೆದುಕೊಳ್ಳುತ್ತಿದ್ದಾರೆ. ಜೂನ್‌ 11ರಿಂದ ಆರಂಭಗೊಂಡಿದ್ದು, ಬ್ರಹ್ಮಾವರ, ಕೋಟೇಶ್ವರ, ಬಸ್ರೂರು, ಶಿರಿಯಾರ, ಯಡ್ತಾಡಿ, ಸ್ಯಾಬ್ರಕಟ್ಟೆ, ಹಾಲಾಡಿ, ಸಿದ್ದಾಪುರ, ಶಂಕರನಾರಾಯಣ, ಹಳ್ಲಿಹೊಳೆ, ಬಸ್ರೂರು, ನೆಲ್ಲಿಕಟ್ಟೆ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮ ಪೂರ್ಣಗೊಂಡಿದೆ. ವಾಹನ ಸಂಚರಿಸಿದ ಜಾಗದಲ್ಲೆಲ್ಲ ಜನರು ಆಸಕ್ತಿಯಿಂದ ಬಂದು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
-ಜೋಸೆಫ್ ಜಿ.ಎಂ.ರೆಬೆಲ್ಲೋ,ತಂಡದ ಸದಸ್ಯ
ನೀರಿನ ಸಂರಕ್ಷಣೆಗೆ ಆದ್ಯತೆ

ನೀರಿನ ಸಂರಕ್ಷಣೆಗೆ ಆದ್ಯತೆ ನೀಡುವ ಯೋಜನೆ ಇದಾಗಿದೆ. ಜಿಲ್ಲೆಯ ಪ್ರತೀ ಗ್ರಾ.ಪಂ.ಗಳಲ್ಲೂ 500 ಗಿಡಗಳನ್ನು ನೆಡುವ ಪ್ರಕ್ರಿಯೆ ಆರಂಭಗೊಂಡಿದೆ. ನರೇಗಾ ಸಹಿತ ಇನ್ನಿತರ ಯೋಜನೆಗಳ ಮೂಲಕ ಕೆರೆಗಳ ಹೂಳೆತ್ತುವಿಕೆ ಸಹಿತ ಇತರ ಪ್ರಕ್ರಿಯೆಗಳು ನಿರಂತರ ನಡೆಯಲಿವೆ.
-ಸಿಂಧೂ ಬಿ. ರೂಪೇಶ್‌,ಜಿ.ಪಂ. ಸಿಇಒ
ನೀರಿನ ಮಿತ ಬಳಕೆಯ ಅರಿವು

ವೈಜ್ಞಾನಿಕವಾಗಿ ನೀರು ಸಂಗ್ರಹಣೆ ಮಾಡಲು ಜಲಮೂಲಗಳ ನಿರ್ಮಾಣ ಮಾಡುವುದು ನೀರಿನ ಲಭ್ಯತೆ ಮತ್ತು ಮಿತಬಳಕೆ ಬಗ್ಗೆ ಅರಿವು ಮೂಡಿಸಲಿದ್ದಾರೆ. ಫ‌ಲಾನುಭವಿಗಳ ಸ್ವಂತ ಮನೆಯಲ್ಲಿ ಮಳೆ ಕೊಯ್ಲು ಅಳವಡಿಸುವುದು ಮುಂತಾದ ಕಾರ್ಯಕ್ರಮಗಳು ಇದರ ವ್ಯಾಪ್ತಿಗೆ ಬರುತ್ತದೆ.
ಕೆರೆಗಳ ಪುನರುಜ್ಜೀವನ

ನಿಷ್ಕ್ರಿಯವಾಗಿರುವ ಜಲಾಶಯಗಳು, ನದಿಗಳು, ಕೆರೆಗಳು, ಕಾಲುವೆಗಳನ್ನು ಗುರುತಿಸಿ ಅದಕ್ಕೆ ಪುನರುಜ್ಜೀವನ ನೀಡುವಂತಹ ಕೆಲಸದ ಮಾಹಿತಿ ನೀಡುವ ಕೆಲಸವೂ ಈ ತಂಡದಿಂದ ಆಗಲಿದೆ.
ಹಸುರೀಕರಣ

ಅಂತರ್ಜಲ ಮಟ್ಟ ಹಾಗೂ ಮಳೆಯ ಪ್ರಮಾಣವನ್ನು ಹೆಚ್ಚಿಸುವುವ ಸಲುವಾಗಿ ಪ್ರತೀ ಜಿಲ್ಲೆಯಲ್ಲಿ 50 ಲಕ್ಷ ಸಸಿಗಳನ್ನು ಸಮುದಾಯದ ಸಹಭಾಗಿತ್ವದಲ್ಲಿ ಅರಣ್ಯೀಕರಣ ಮಾಡುವ ಉದ್ದೇಶವನ್ನೂ ಹೊಂದಲಾಗಿದೆ. ಕೆಲಕಾಮಗಾರಿಗಳು ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕೂಡ ನಡೆಯಲಿದೆ.

– ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.