Drought ನಿರ್ವಹಣೆಯಲ್ಲಿ ಸರಕಾರ ವಿಫ‌ಲ: ಕೋಟ ಶ್ರೀನಿವಾಸ ಪೂಜಾರಿ

Team Udayavani, Nov 6, 2023, 10:56 PM IST

Drought ನಿರ್ವಹಣೆಯಲ್ಲಿ ಸರಕಾರ ವಿಫ‌ಲ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಬಣ ರಾಜ ಕೀಯ, ಭಿನ್ನಾಭಿಪ್ರಾಯದಲ್ಲಿ ಸರಕಾರ ಜನರ ಸಮಸ್ಯೆಗಳನ್ನು ಬಗೆಹರಿಸಲು ಸಂಪೂರ್ಣ ವಿಫ‌ಲವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸರಕಾರ ನಡೆಸಲು ಸಾಧ್ಯವಾಗದೇ ಇದ್ದರೆ ಬಿಟ್ಟು ಹೋಗಬಹುದು ಎಂದು ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ರಾಜ್ಯದ 216 ತಾಲೂಕಿನಲ್ಲಿ ಗಂಭೀರ ಬರ ಪರಿಸ್ಥಿತಿಯಿದೆ. ಇದರ ನಿಯಂತ್ರಣ ಸಂಬಂಧ ಬೆಳೆ ನಷ್ಟ ಪರಿಹಾರಕ್ಕೆ 5000 ಕೋ.ರೂ. ಬಿಡುಗಡೆ ಮಾಡಿ, ಜಿಲ್ಲಾಧಿಕಾರಿಗಳ ಮೂಲಕ ಪರಿಹಾರ ಕಾರ್ಯಕ್ರಮಗಳನ್ನು ನಡೆಸಬೇಕು. ಅದನ್ನು ಬಿಟ್ಟು ರಾಜ್ಯದ ಕಾಂಗ್ರೆಸ್‌ ನಾಯಕರು ತಮ್ಮ ವೈಫ‌ಲ್ಯ ಮರೆಮಾಚಲು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯುತ್ನ ಮಾಡುತ್ತಿದ್ದಾರೆ. ಕೇಂದ್ರ ಸರಕಾರದಿಂದ ಬರ ಪರಿಹಾರಕ್ಕೆ ಅನುದಾನ ಬರಲಿದೆ. ಆದರೆ, ರಾಜ್ಯ ಸರಕಾರ ತುರ್ತು ಪರಿಹಾರ ಕಾರ್ಯ ಕೈಗೊಳ್ಳುವುದನ್ನು ಮರೆತು ಜನರಿಗೆ ಅನ್ಯಾಯ ಮಾಡುತ್ತಿದೆ ಎಂದವರು ತಿಳಿಸಿದರು.

ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಯಡಿ ಮೊದಲ ಕಂತು ಮಾತ್ರ ಸರಿಯಾಗಿ ನೀಡಿದ್ದಾರೆ. ಉಳಿದ ಕಂತುಗಳನ್ನು ಎಲ್ಲರಿಗೂ ನೀಡಿಲ್ಲ. ಶಕ್ತಿ ಯೋಜನೆಯಡಿ ಉಚಿತ ಬಸ್‌ ಪ್ರಯಾಣಕ್ಕೆ ಬಸ್‌ಗಳನ್ನೇ ಬಿಟ್ಟಿಲ್ಲ. ಗ್ಯಾರಂಟಿ ಯೋಜನೆಗೆ ಹಣಕಾಸಿನ ಲಭ್ಯತೆಯ ಬಗ್ಗೆಯೂ ಸರಕಾರದಲ್ಲಿ ಸ್ಪಷ್ಟತೆಯಿಲ್ಲ. ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಭೆ ಮಾಡು ವುದನ್ನು ಬಿಟ್ಟು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಡಿನ್ನರ್‌ ಪಾರ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಧ್ಯಯನ ತಂಡ
ಬಿಜೆಪಿಯಿಂದ ಹಿರಿಯ ನಾಯಕ ರಾದ ಬಿ.ಎಸ್‌.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ರಾಜ್ಯ ನಾಯಕರನ್ನು ಒಳಗೊಂಡ 17 ತಂಡ ರಚನೆ ಮಾಡಲಾಗಿದೆ. ರಾಜ್ಯಾದ್ಯಂತ ಸಂಚಾರ ಮಾಡಿ ಬರ ಪರಿಸ್ಥಿತಿ ಅಧ್ಯಯನ ನಡೆಸಲಿದೆ ಎಂದು ಹೇಳಿದರು.

ಶೀಘ್ರ ಆಯ್ಕೆಯ ನಿರೀಕ್ಷೆ
ವಿಧಾನಸಭೆ ಹಾಗೂ ವಿಧಾನಪರಿಷತ್‌ಗೆ ವಿಪಕ್ಷ ನಾಯಕರನ್ನು ಈಗಾಗಲೇ ಆಯ್ಕೆ ಮಾಡಬೇಕಿತ್ತು. ಈ ಬಗ್ಗೆ ಕೇಂದ್ರ ನಾಯಕರ ಗಮನವನ್ನು ಸೆಳೆದಿದ್ದೇವೆ. ಆದಷ್ಟು ಬೇಗ ಆಯ್ಕೆ ಪ್ರಕ್ರಿಯೆ ನಡೆಸುವ ನಿರೀಕ್ಷೆಯಿದೆ. ಸಾಮೂಹಿಕ ನಾಯಕತ್ವದೊಂದಿಗೆ ಮುಂದಿನ ಅಧಿವೇಶನದಲ್ಲಿ ರಾಜ್ಯ ಸರಕಾರದ ವೈಫ‌ಲ್ಯಗಳನ್ನು ಜನರ ಮುಂದಿಡುವ ಎಲ್ಲ ಪ್ರಯತ್ನ ಮಾಡಲಿದ್ದೇವೆ. ರಾಜ್ಯಾಧ್ಯಕ್ಷರ ಆಯ್ಕೆಯೂ ನಡೆಯಲಿದೆ ಎಂದರು.

ಪಕ್ಷದ ಕೆಲವು ಸಂಘಟನಾತ್ಮಕ ವಿಷಯಗಳು, ಹಿಂದುಳಿದ ವರ್ಗಗಳ ಮೀಸಲಾತಿ ಸಹಿತ ವಿವಿಧ ವಿಚಾರಗಳ ಚರ್ಚೆಗೆ ನನ್ನನ್ನು ಸೇರಿದಂತೆ ಕೆ.ಎಸ್‌.ಈಶ್ವರಪ್ಪ, ಪಿ.ಸಿ. ಮೋಹನ್‌ ಅವರನ್ನು ಕೇಂದ್ರದ ನಾಯಕರು ಆಹ್ವಾನಿಸಿ ಮಾತುಕತೆ ನಡೆಸಿದ್ದಾರೆ. ನಮ್ಮಿಂದ ಕೇಳಿರುವ ಮಾಹಿತಿ ನೀಡಿದ್ದೇವೆ ಎಂದವರು ತಿಳಿಸಿದರು.

ಟಾಪ್ ನ್ಯೂಸ್

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

missing

ಬರಿಮಾರು ವ್ಯಕ್ತಿ ನಾಪತ್ತೆ; ನದಿ ಕಿನಾರೆಯಲ್ಲಿ ಪಾದರಕ್ಷೆ, ಮೇವಿನ ಕಟ್ಟು ಪತ್ತೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.