ನಿರುದ್ಯೋಗ ಸಮಸ್ಯೆಗೆ ಸರಕಾರ ಕಾರಣ
ಉಡುಪಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ
Team Udayavani, May 13, 2022, 11:22 AM IST
ಉಡುಪಿ: ನಿರುದ್ಯೋಗ ಸಮಸ್ಯೆಗೆ ಕಾರಣ, ಶೇ.40 ಭ್ರಷ್ಟ ಬಿಜೆಪಿ ಸರಕಾರ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಬನ್ನಂಜೆ ಕೆಎಸ್‌ಆರ್‌ಟಿಸಿ ನಿಲ್ದಾಣ ಸಮೀಪ ಪ್ರತಿಭಟನೆ ನಡೆಯಿತು.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪ್ಪಾಡ್ ಮಾತನಾಡಿ, ಶಿರ್ವ ಎಡ್ಮೇರುವಿನ ಎಂಬಿಎ ಪದವೀಧರೆ ಸಹನಾ ಅವರ ಆತ್ಮಹತ್ಯೆಗೆ ರಾಜ್ಯ, ಕೇಂದ್ರ ಸರಕಾರವೇ ನೇರ ಹೊಣೆ ಎಂದು ಆರೋಪಿಸಿದರು. ದೇಶದಲ್ಲಿ ನಿರುದ್ಯೋಗದಿಂದ ಯುವ ಜನರ ಆತ್ಮಹತ್ಯೆ ಸಂಖ್ಯೆ ಹೆಚ್ಚುತ್ತಿದೆ. ಶೇ.40 ಕಮಿಷನ್ ಮೂಲಕ ಜನರ ತೆರಿಗೆ ದುಡ್ಡನ್ನು ಲೂಟಿ ಮಾಡುತ್ತಿರುವ ಬಿಜೆಪಿ ಸರಕಾರಕ್ಕೆ ಜನರೆ ಬುದ್ಧಿ ಕಲಿಸುತ್ತಾರೆ. ನೇಮಕಾತಿ, ಅಭಿವೃದ್ಧಿ ಯೋಜನೆಗಳು ಎಲ್ಲವೂ ಅಕ್ರಮಗಳಿಂದಲೇ ಕೂಡಿವೆ. ಜನರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಈ ಸಂದರ್ಭ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯಾ ಕೆ.ಆರ್., ಪ್ರಧಾನ ಕಾರ್ಯದರ್ಶಿ ನಾಸಿರ್, ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುದಯ ಅಂಜುಂ, ಪ್ರಮುಖರಾದ ಗಿರೀಶ್ ಆಳ್ವ, ಮಂಜು, ಪ್ರಭಾಕರ್ ಆಚಾರ್ಯ ಮತ್ತು ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.