![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 28, 2017, 3:16 PM IST
ಕಾಪು: ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾಗುವ ಹಂತದಲ್ಲಿದ್ದು, ಅದನ್ನು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅನುಷ್ಠಾನಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಡ ಹೇರಲಾಗುತ್ತಿದೆ. ಇದಕ್ಕಾಗಿ ಈಗಾಗಲೇ 80 ಬಡಗಬೆಟ್ಟು ಮತ್ತು ಬೆಳಪುವಿನಲ್ಲಿ ಸ್ಥಳಾವಕಾಶ ಲಭ್ಯವಿರುವ ಬಗ್ಗೆ ಮಾಹಿತಿ ನೀಡಲಾಗಿದ್ದು, ಬೆಳಪುವಿನಲ್ಲೇ ಮೆಡಿಕಲ್ ಕಾಲೇಜು ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಕಾಪು ಶಾಸಕ ವಿನಯ ಕುಮಾರ್ ಸೊರಕೆ ಹೇಳಿದರು.
ಬೆಳಪು ಗ್ರಾಮದಲ್ಲಿ ಸುಮಾರು 5.30 ಕೋ. ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕುಗ್ರಾಮವಾಗಿದ್ದ ಬೆಳಪು ಗ್ರಾಮವು ಸುಗ್ರಾಮವಾಗಿಮೂಡಿಬರು ತ್ತಿದ್ದು, ಇಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ವರ್ಲ್ಡ್ ಕ್ಲಾಸ್ ಸೈಯನ್ಸ್ ಸೆಂಟರ್‌ಗೆ ಈಗಗಾಲೇ 50 ಕೋ. ರೂ. ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಂಜೂ
ರಾತಿ ಹಂತದಲ್ಲಿದೆ. ಕೈಗಾರಿಕಾ ಪಾರ್ಕ್‌ನಿರ್ಮಾಣ ಕಾಮಗಾರಿಯೂ ವೇಗವಾಗಿ ನಡೆಯುತ್ತಿದೆ ಎಂದರು.
ಬೆಳಪು ಗ್ರಾ. ಪಂ. ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿ. ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ತಾ. ಪಂ. ಸದಸ್ಯ ಯು. ಸಿ. ಶೇಕಬ್ಬ, ಬಡಾ ಗ್ರಾ.ಪಂ. ಅಧ್ಯಕ್ಷೆ ನಾಗರತ್ನ, ಬೆಳಪು ಗ್ರಾ.ಪಂ. ಉಪಾಧ್ಯಕ್ಷೆ ಶೋಭಾ ಭಟ್, ಮಾಜಿ ಉಪಾಧ್ಯಕ್ಷ ನಿರಂಜನ್ ಶೆಟ್ಟಿ, ಬೆಳಪು ಮತ್ತು ಬಡಾ ಗ್ರಾ.ಪಂ. ಸದಸ್ಯರು, ಅಭಿವೃದ್ಧಿ ಅಧಿಕಾರಿ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.