ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರ ಅಧಿಕಾರ ಮೊಟಕಿಲ್ಲ : ಸಚಿವ ಕೋಟ ಶ್ರೀನಿವಾಸ ಪೂಜಾರಿ
Team Udayavani, Oct 9, 2022, 9:43 AM IST
ಉಡುಪಿ : ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವ ಪ್ರಸ್ತಾವವನ್ನು ನಮ್ಮ ಸರಕಾರ ಒಪ್ಪುವುದಿಲ್ಲ. ಈ ಕುರಿತು ಮುಖ್ಯಮಂತ್ರಿಯವರೊಂದಿಗೆ ಮಾತುಕತೆ ನಡೆಸಲಾಗಿದೆ. ಪ್ರಸ್ತಾವನೆ ಬಂದಲ್ಲಿ ಅದನ್ನು ತಿರಸ್ಕರಿಸುವ ಭರವಸೆ ನೀಡಿದ್ದಾರೆ. ಈ ಬಗ್ಗೆ ಗ್ರಾ.ಪಂ. ಅಧ್ಯಕ್ಷ, ಸದಸ್ಯರಲ್ಲಿ ಯಾವುದೇ ಗೊಂದಲ ಬೇಡ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಚೆಕ್‌ಗೆ ಸಹಿ, ಇನ್ನಿತರ ಅಧಿಕಾರವನ್ನು ಪಿಡಿಒಗೆ ಕೊಡಲಾಗುತ್ತದೆ ಎಂಬ ಆತಂಕ ಗ್ರಾ.ಪಂ. ಅಧ್ಯಕ್ಷ, ಸದಸ್ಯರಲ್ಲಿತ್ತು. ಈ ವಿಷಯವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಶಾಸಕರು ಸೇರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹಾಗೂ ರಾಜ್ಯ ಪಂಚಾಯತ್ ರಾಜ್ ಪ್ರಕೋಷ್ಠದ ಸಂಚಾಲಕ, ಸಹ ಸಂಚಾಲಕರ ಗಮನಕ್ಕೆ ತರಲಾಯಿತು. ಇದರ ಕುರಿತಾಗಿ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸಚಿವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದಾರೆ. ಪಂ.ರಾಜ್ ವ್ಯವಸ್ಥೆಯಲ್ಲಿ ಗ್ರಾ.ಪಂ. ಅಧ್ಯಕ್ಷ, ಸದಸ್ಯರ ಅಧಿಕಾರವನ್ನು ಯಾವುದೇ ಕಾರಣಕ್ಕೂ ಮೊಟಕು ಗೊಳಿಸದೆ ಇನ್ನೂ ಹೆಚ್ಚಿನ ಬಲವನ್ನು ಈ ಸರಕಾರ ನೀಡಲಿದೆ ಎಂದು ಸಚಿವರು ತಿಳಿಸಿರುವುದಾಗಿ ಜಿಲ್ಲಾ ಪಂಚಾಯತ್ ರಾಜ್ ಪ್ರಕೋಷ್ಠದ ಸಂಚಾಲಕ ರಾಜೀವ್ ಕುಲಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಮಳೆಯ ನಡುವೆ ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ನವಜಾತ ಹೆಣ್ಣು ಮಗು: ಆಸ್ಪತ್ರೆಯಲ್ಲಿ ಚಿಕಿತ್ಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.