Gruhalakshmi Scheme: ಶಿಶು ಯೋಜನಾಧಿಕಾರಿಗೆ ಹಣ ಮಂಜೂರಾತಿ ಹೊಣೆ
Team Udayavani, Jun 25, 2023, 5:33 AM IST
ಉಡುಪಿ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಹೊಂದಾಗಿರುವ “ಗೃಹಲಕ್ಷ್ಮೀ’ ಜಾರಿಗೆ ಸಂಬಂಧಿಸಿ ಜಿಲ್ಲಾ ಹಂತದಲ್ಲಿಯೂ ಸಿದ್ಧತೆ ನಡೆಯುತ್ತಿದೆ. ಈ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು (ಸಿಡಿಪಿಒ) ಹಣ ಮಂಜೂರಾತಿ ಪ್ರಾಧಿಕಾರವಾಗಿಸಿ ಆದೇಶಿಸಿದೆ.
ರಾಜ್ಯ ಸರಕಾರದಿಂದ 2023-24ನೇ ಸಾಲಿನಲ್ಲಿ ಕುಟುಂಬದಲ್ಲಿ ಯಜಮಾನಿಗೆ ಪ್ರತೀ ತಿಂಗಳು 2 ಸಾವಿರ ರೂ. ಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಮೇ 20ರಂದು ತಾತ್ವಿಕ ಒಪ್ಪಿಗೆ ನೀಡಲಾಗಿತ್ತು. ಅನಂತರ ಸರಕಾರ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿಗೆ 2 ಸಾವಿರ ರೂ. ನೀಡುವಂತೆ ಮಾರ್ಗಸೂಚಿ ಹೊರಡಿಸಿತ್ತು.
ಅರ್ಜಿ ಸಲ್ಲಿಕೆಗೆ ಬರುತ್ತಿರುವ
ಯಜಮಾನಿಯರು
ಜೂ. 15ರಿಂದ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವುದಾಗಿ, ಆಗಸ್ಟ್ 15ರಂದು ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುವುದಾಗಿ ಸರಕಾರದ ಮಾರ್ಗಸೂಚಿಯಲ್ಲಿ ತಿಳಿಸಲಾಗಿತ್ತು. ಆದರೆ ಅರ್ಜಿ ಸಲ್ಲಿಕೆ ಇನ್ನೂ ಆರಂಭಗೊಂಡಿಲ್ಲ. ಈ ಮಾಹಿತಿ ಇಲ್ಲದೆ ಯಜಮಾನಿಯರು ನಗರ, ಪೇಟೆಗಳಲ್ಲಿರುವ ಸೈಬರ್ ಸೆಂಟರ್, ಸೇವಾ ಸಿಂಧು, ಗ್ರಾಮ ವನ್ ಕೇಂದ್ರಗಳಿಗೆ ಆಗಮಿಸಿ ಹಿಂದಿರುಗುತ್ತಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿ ತಾಲೂಕು ಶಿಶು ಯೋಜನಾಧಿಕಾರಿಗಳನ್ನು ಹಣ ಮಂಜೂರಾತಿ ಪ್ರಾಧಿಕಾರವಾಗಿಸಿ ಸರಕಾರ ಆದೇಶ ಮಾಡಿದೆ. ಜಿಲ್ಲೆಯಲ್ಲಿ ಉಡುಪಿ, ಕುಂದಾಪುರ, ಬ್ರಹ್ಮಾವರ, ಕಾರ್ಕಳದಲ್ಲಿ ನಾಲ್ವರು, ದ.ಕ. ಜಿಲ್ಲೆಯ ಏಳು ತಾಲೂಕಿನಲ್ಲಿ 7 ಮಂದಿ ಸಿಡಿಪಿಯು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇನ್ನೂ ಆರಂಭಗೊಂಡಿಲ್ಲ. ಯೋಜನೆ ಸಂಬಂಧಿಸಿ ಅರ್ಜಿ ಸಲ್ಲಿಕೆ ವೆಬ್‌ಸೈಟ್ ಅಭಿವೃದ್ಧಿ ಕೆಲಸ ಇನ್ನೂ ನಡೆಯುತ್ತಿದೆ. ಶೀಘ್ರ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಸರಕಾರ ಈ ಬಗ್ಗೆ ಮಾಹಿತಿ ನೀಡಲಿದೆ.
– ಕೃಷ್ಣಪ್ಪ ಬೆಳಗೋಡು, ಉಪ ನಿರ್ದೇಶಕರು (ಉಡುಪಿ),
– ಪಾಪ ಭೋವಿ, ಉಪ ನಿರ್ದೇಶಕರು (ದ.ಕ. ಜಿಲ್ಲೆ),
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.