“ಜಿಎಸ್‌ಟಿ ಹೊಸ ಕಾಯ್ದೆ ಪೂರ್ಣ ಹೊಸತಲ್ಲ’
Team Udayavani, Jun 29, 2017, 3:35 AM IST
ಉಡುಪಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಭಾರತದ ಮಟ್ಟಿಗೆ ಹೊಸ ಕಾಯ್ದೆ ಆಗಿದ್ದರೂ, ಕೆಲವೊಂದು ನಿಯಮಗಳು, ಷರತ್ತುಗಳು ವ್ಯಾಟ್‌ನಂತಹ ತೆರಿಗೆ ಪದ್ಧತಿಯಲ್ಲಿಯೂ ಇದ್ದುದರಿಂದ ಸಂಪೂರ್ಣ ಹೊಸತಲ್ಲ. ಇಂತಹ ಕಾರ್ಯಾಗಾರದಿಂದ ಜನರು, ವರ್ತಕರು, ಉದ್ದಿಮೆದಾರರಿಗೆ ಸಮರ್ಪಕ ಮಾಹಿತಿ ಸಿಗಲು ಸಾಧ್ಯ. ಏಕ ರೀತಿಯ ತೆರಿಗೆ ಪದ್ಧತಿಯನ್ನು ಸ್ವಾಗತಿಸಿ, ಸಮರ್ಪಕ ಅನುಷ್ಠಾನಕ್ಕೆ ಸಹಕರಿಸಿ ಎಂದು ಉಡುಪಿ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಆರ್. ಬಿ. ನಾಯಕ್ ಹೇಳಿದರು.
ಅವರು ಉಡುಪಿ ಜಿಲ್ಲಾ ಟ್ಯಾಕ್ಸ್ ಬಾರ್ ಅಸೋಸಿಯೇಶನ್ ವತಿಯಿಂದ ಜು. 1 ರಿಂದ ದೇಶದಾದ್ಯಂತ ಜಾರಿಗೆ ಬರಲಿರುವ ಜಿಎಸ್‌ಟಿ ತೆರಿಗೆ ಕುರಿತು ಕಿದಿಯೂರು ಹೋಟೆಲ್‌ನ ಅನಂತ ಶಯನ ಸಭಾಂಗಣದಲ್ಲಿ ಬುಧವಾರ ನಡೆದ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಟ್ಯಾಕ್ಸ್ ಬಾರ್ ಅಸೋಸಿಯೇಶನ್ ಅಧ್ಯಕ್ಷ ಪ್ರಸಾದ್ ಉಪಾಧ್ಯಾಯ ಪ್ರಾಸ್ತವಿಕವಾಗಿ ಮಾತನಾಡಿ ರಾಜ್ಯದಲ್ಲಿ ಸುಮಾರು 50 ಸಾವಿರ ಕೋ. ರೂ. ವ್ಯಾಟ್ (ಮೌಲ್ಯವರ್ಧಿತ) ತೆರಿಗೆ ಸಂಗ್ರಹ ವಾಗುತ್ತಿದ್ದು, ಮುಂಚೂಣಿ ಯಲ್ಲಿದೆ. ಅದೇ ರೀತಿ ಈಗ ಶೇ. 100 ರಷ್ಟು ತೆರಿಗೆ ಪಾವತಿದಾರರು ಜಿಎಸ್‌ಟಿ ವ್ಯವಸ್ಥೆಯನ್ನು ನೊಂದಾವಣಿ ಮಾಡಿಸಿಕೊಳ್ಳುವ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದರು. ಸಭಾ ಕಾರ್ಯಕ್ರಮದ ಬಳಿಕ ನೋಂದಾವಣಿ, ಬಿಲ್ಲಿಂಗ್, ಟ್ರಾನ್ಸ್ ಮಿಶನ್, ಕಂಪೋಶಿನ್ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರ ನಡೆಯಿತು. ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಡಿ. ಶಂಭು ಭಟ್, ಸಹಾಯಕ ಆಯುಕ್ತೆ ಹೇಮಲತಾ ಎನ್. ಉಪಸ್ಥಿತರಿದ್ದರು. ಜತೀಂದ್ರ ಮರವಂತೆ ಸ್ವಾಗತಿಸಿದರು. ಕಾರ್ಯದರ್ಶಿ ದಿವಾಕರ್ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.