ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಸಹಾಯಧನ ವಿತರಣೆ

ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್‌ ಚಾರಿಟೆಬಲ್‌ ಟ್ರಸ್ಟ್‌

Team Udayavani, Jun 20, 2019, 5:48 AM IST

1906KDLM15PH

ಕುಂದಾಪುರ: ವಿದ್ಯಾರ್ಥಿ ಜೀವನದಲ್ಲಿ ಮೋಜು ಎಂಬುದಿಲ್ಲ. ಮೋಜಿನ ಕಡೆಗೆ ಗಮನಹರಿಸಿದರೆ ಜೀವನಪೂರ್ತಿ ಕಷ್ಟಪಡಬೇಕಾದೀತು. ವಿದ್ಯಾರ್ಥಿಗಳು ಜಗತ್ತಿಗೆ ಸ್ವಯಂ ಬೆಳಕಾಗುವ ಜ್ಯೋತಿಗಳಾಗಿ ರೂಪುಗೊಳ್ಳಬೇಕು ಎಂದು ಕಾರ್ಕಳ ಬೈಲೂರು ಮಠ ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ವಿನಾಯಕಾನಂದಜೀ ಮಹಾರಾಜ್‌ ಹೇಳಿದರು.

ಇಲ್ಲಿನ ಜೂನಿಯರ್‌ ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ಚಾರಿಟೆಬಲ್‌ ಟ್ರಸ್ಟ್‌ನಿಂದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.

ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಆಗ ನಮ್ಮನ್ನು ನಾವು ಜಯಿಸಲು ಸಾಧ್ಯ. ಪರಿಸ್ಥಿತಿ ನಮ್ಮ ಕೈವಶದಲ್ಲಿರಬೇಕು. ನಾವು ಪರಿಸ್ಥಿತಿಯ ಕೈಗೊಂಬೆಗಳಾಗಬಾರದು. ನೈತಿಕತೆ ಬಿಟ್ಟು ಭೌತಿಕ ಭೋಗದ ಕಡೆಗೆ ಗಮನ ಹರಿಯಬಾರದು. ದೈಹಿಕ, ನೈತಿಕ, ಬೌದ್ಧಿಕ, ಭಾವನಾತ್ಮಕ ಹಾಗೂ ಧಾರ್ಮಿಕ ಬೆಳವಣಿಗೆಯನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ಸು ಎಂದರು.

ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ ಕಾಲೇಜಿನ ವಿದ್ಯಾರ್ಥಿಗಳು, ಎಂಜಿನಿಯರಿಂಗ್‌, ವೈದ್ಯಕೀಯ ಶಿಕ್ಷಣದ ಸುಮಾರು 250 ಅರ್ಹ ವಿದ್ಯಾರ್ಥಿಗಳಿಗೆ 7 ಲಕ್ಷ ರೂ. ಸಹಾಯಧನ ನೀಡಲಾಯಿತು.

ಪ್ರತಿಭಾವಂತ ವಿದ್ಯಾರ್ಥಿಗಳಾದ ರಾಜ್ಯಮಟ್ಟದಲ್ಲಿ ರ್‍ಯಾಂಕ್‌ಗಳನ್ನು ಪಡೆದ ಭಂಡಾರ್‌ಕಾರ್ಸ್‌ ಪದವಿ ಕಾಲೇಜಿನ ಮಹಾಲಕ್ಷ್ಮೀ ಉಪ್ಪಿನಕುದ್ರು, ಮಮತಾ ನಾವುಂದ, ಸುಕನ್ಯಾ ಬೀಜಾಡಿ, ಆರ್‌.ಎನ್‌. ಶೆಟ್ಟಿ ಪ.ಪೂ. ಕಾಲೇಜಿನ ಅಂಕಿತಾ ಶೆಟ್ಟಿ ಬೇಲೂ¤ರು, ವೆಂಕಟರಮಣ ಪ.ಪೂ.ಕಾಲೇಜಿನ ಉಮಾ ಹಸ್ನಾ, ವೆಂಕಟ್ರಮಣ ಪ್ರೌಢಶಾಲೆಯ ಸಂಜನಾ ಕೋಟತಟ್ಟು, ತಾಲೂಕಿಗೆ ರ್‍ಯಾಂಕ್‌ ಪಡೆದ ವೆಂಕಟರಮಣ ಕಾಲೇಜಿನ ಅಂಜಲಿ ಶೇಟ್‌, ಕಿರಣ್‌ ಅವರನ್ನು ಸಮ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಗಿಳಿಯಾರು ಕುಶಲ ಹೆಗ್ಡೆ ದತ್ತಿನಿಧಿಯ ಅಧ್ಯಕ್ಷ ಬಿ.ಪ್ರಕಾಶ್ಚಂದ್ರ ಶೆಟ್ಟಿ ವಹಿಸಿದ್ದರು.

ಉದ್ಯಮಿಗಳಾದ ಸೊಲೊಮನ್‌ ಸೋನ್ಸ್‌, ಜಯಕರ ಶೆಟ್ಟಿ, ಅರುಣ್‌ ಕುಮಾರ್‌ ಶೆಟ್ಟಿ, ಉದಯ ಹೆಗ್ಡೆ, ಕಿಶೋರ್‌ ಹೆಗ್ಡೆ, ಸ್ವರೂಪ್‌ ಹೆಗ್ಡೆ ಉಪಸ್ಥಿತರಿದ್ದರು.
ಪತ್ರಕರ್ತ ಯು.ಎಸ್‌. ಶೆಣೈ ಸ್ವಾಗತಿಸಿ, ನಿರ್ವಹಿಸಿದರು.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.