ನಿಗದಿತ ಸಮಯ ಮೀರಿ ಪಟಾಕಿ ಸಿಡಿಸಿದರೆ ಕ್ರಮ: ಜಿಲ್ಲಾಧಿಕಾರಿ
ದೀಪಾವಳಿ ಆಚರಣೆಗೆ ಮಾರ್ಗಸೂಚಿ ನಿಗದಿ
Team Udayavani, Nov 13, 2020, 6:11 PM IST
ಉಡುಪಿ: ಸರಕಾರದ ಆದೇಶದಂತೆ ಜಿಲ್ಲೆಯಲ್ಲಿ ರಾತ್ರಿ 8 ರಿಂದ 10 ರ ವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ನಿಗದಿತ ಅವಧಿಗಿಂತ ಮುಂಚೆ ಹಾಗೂ ಅನಂತರ ಪಟಾಕಿ ಸಿಡಿಸುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುರಕ್ಷಿತ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಗ್ಗೆ ನಿಗಾ ವಹಿಸಲು ಬೀಟ್‌ನಲ್ಲಿರುವ ಪೊಲೀಸ್ ಸಿಬಂದಿಯನ್ನು ಬಳಸಿಕೊಳ್ಳುವಂತೆ ಪೊಲೀಸ್ ಇಲಾಖೆಗೆ ಮತ್ತು ಎಲ್ಲ ತಹಶೀಲ್ದಾರ್‌ಗಳಿಗೆ ಸೂಚಿಸಿದರು.
ಪಟಾಕಿ ಮಳಿಗೆಗಳಲ್ಲಿ ಹಸುರು ಪಟಾಕಿ ಮಾತ್ರ ಮಾರಾಟ ಮಾಡಬೇಕು. ನಿಷೇಧಿತ ಪಟಾಕಿಯನ್ನು ಮಾರಾಟ ಮಾಡಿದ್ದಲ್ಲಿ ಅಂತಹ ಅಂಗಡಿಗಳ ಮಾಲಕರ ವಿರುದ್ದ ಪ್ರಕರಣ ದಾಖಲಿಸಲಾಗುವುದು. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಹಬ್ಬದ ಮೊದಲು ಮತ್ತು ಅನಂತರ ಮಾಲಿನ್ಯ ಪ್ರಮಾಣವನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.
ಹಬ್ಬದ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಕಸ ಸಂಗ್ರಹವಾಗದಂತೆ ಸಮರ್ಪಕವಾಗಿ ಕಸ ವಿಲೇವಾರಿ ಮಾಡಿ, ಸcತ್ಛತೆ ಕಾಪಾಡುವಂತೆ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಎಸ್ಪಿ ವಿಷ್ಣುವರ್ಧನ್, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪಡೆ°àಕರ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇತರ ಮಾರ್ಗ ಸೂಚಿಗಳು
*ಕೋವಿಡ್-19 ರೋಗದ ಹಿನ್ನೆಲೆಯಲ್ಲಿ ಸುಡುಮದ್ದು ಮಾರಾಟ ಮಾಡುವ ಮಳಿಗೆಯ ಸುತ್ತಮುತ್ತ ಪ್ರತಿನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. ಹಾಗೂ ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸಬೇಕು.
*ಪಟಾಕಿ ಖರೀದಿಸುವಾಗ ಮಾರಾಟಗಾರರು ಮತ್ತು ಸಾರ್ವಜನಿಕರು ಮುಖಗವಸು ಧರಿಸಬೇಕು. 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಂಡು, ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು.
*ಜಿಂಕ್ ಶೀಟ್ ಅಥವಾ ಅಗ್ನಿ ನಿರೋಧಕ ವಸ್ತುಗಳಿಂದ ಮಳಿಗೆ ನಿರ್ಮಿಸಬೇಕು. ಒಂದು ಮಳಿಗೆಯಿಂದ ಇನ್ನೊಂದು ಮಳಿಗೆಗೆ ಕನಿಷ್ಟ 6 ಮೀ. ಅಂತರ ಹೊಂದಿರಬೇಕು. ಮಳಿಗೆಯ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿಯೂ ಪ್ರವೇಶ ದ್ವಾರವಿರಬೇಕು. ಮಳಿಗೆಯ ಮುಂಭಾಗದಲ್ಲಿ ಅಗ್ನಿ ಶಾಮಕ ವಾಹನಗಳು ಓಡಾಡುವಂತೆ ಮತ್ತು ಸಾರ್ವಜನಿಕರು ಸರಾಗವಾಗಿ ಹೋಗುವಂತಿರಬೇಕು.
*ಪಟಾಕಿಗಳನ್ನು ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯ ವರೆಗೆ ಮಾತ್ರ ಮಾರಾಟ ಮಾಡಬೇಕು. ಮಳಿಗೆಗಳಲ್ಲಿ ವಿದ್ಯುತ್ ವಯರಿಂಗ್ ಪೈಪ್ ಮೂಲಕ ಅಳವಡಿಸಬೇಕು. ಅಲಂಕಾರಿಕ ವಿದ್ಯುತ್ ಸೀರಿಯಲ್ ಸೆಟ್‌ಗಳನ್ನು ಹಾಕಬಾರದು. ಮಳಿಗೆಗಳಲ್ಲಿ ಅಡುಗೆ ಮಾಡುವುದಾಗಲೀ, ಗ್ಯಾಸ್, ಕ್ಯಾಂಡಲ್ ಮತ್ತು ಅಗರ್‌ಬತ್ತಿಗಳನ್ನು ಉರಿಸುವುದಾಗಲೀ ಮಾಡಬಾರದು.
*ಪರವಾನಿಗೆ ಅವಧಿ ಮುಗಿದ ಅನಂತರ ಉಳಿದಿರುವ ಸುಡುಮದ್ದುಗಳನ್ನು ಮನೆಗೆ ಕೊಂಡೊಯ್ಯದೇ ಅವುಗಳನ್ನು ಅಧಿಕೃತ ಸಗಟು ಮಾರಾಟಗಾರರಿಗೆ ಹಿಂದಿರುಗಿಸಬೇಕು.
*ಪರವಾನಿಗೆ ಅವಧಿ ಅನಂತರ ಮಳಿಗೆಯಲ್ಲಿ ಉಳಿದ ತ್ಯಾಜ್ಯವನ್ನು ಸುಡುಮದ್ದುಗಳಿಂದ ಬೇರ್ಪಡಿಸಿ ಕಾಗದ, ಪ್ಲಾಸ್ಟಿಕ್‌ಗಳನ್ನು ಹತ್ತಿರದ ತ್ಯಾಜ್ಯ ವಿಲೇವಾರಿ ಸಂಗ್ರಹಣಾ ಸ್ಥಳಕ್ಕೆ ಸಾಗಿಸಬೇಕು.
*ಈ ಮೆಲ್ಕಂಡ ನಿಯಮ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ /ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.